30 ಕ್ವಿಂ. ಲಾಡು-20 ಕ್ವಿಂ ಸಜ್ಜಕ್ಕಿ-ಲಕ್ಷ ರೊಟ್ಟಿ ಸಿದ್ಧ

Team Udayavani, Jan 30, 2020, 11:36 AM IST

30-January-5

ಬಸವಕಲ್ಯಾಣ: ತಾಲೂಕಿನ ಮುಚಳಂಬ ಗ್ರಾಮದ ಶ್ರೀ ನಾಗಭೂಷಣ ಶಿವಯೋಗಿ ಸಂಸ್ಥಾನ ಮಠದಲ್ಲಿ ಫೆ. 1ರಿಂದ 7ರ ವರೆಗೆ ಯೋಗಿರಾಜ ಸದ್ಗುರು ಶ್ರೀ ನಾಗಭೂಷಣ ಶಿವಯೋಗಿಗಳ 50ನೇ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ ಪ್ರಣವಾನಂದ ಸ್ವಾಮೀಜಿ 50ನೇ ವರ್ಷದ ವರ್ಧಂತಿ ಮಹೋತ್ಸವ ನಿಮಿತ್ತ ನಡೆಯುವ ವಿವಿಧ ಕಾರ್ಯಕ್ರಮಕ್ಕೆ ಸಿದ್ಧತೆ ಭರದಿಂದ ಸಾಗಿದೆ.

ದೇಶದ ಬಹುಭಾಗಗಳಲ್ಲಿ ಸಂಚರಿಸಿದ್ದ ಶ್ರೀ ನಾಗಭೂಷಣ ಶಿವಯೋಗಿಗಳು ತಮ್ಮ ಅವತಾರಲೀಲೆ ಮುಗಿಸಿ ಇಂದಿಗೆ 50 ವರ್ಷಗಳಾದ ಪ್ರಯುಕ್ತ ಪುಣ್ಯರಾಧನೆ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಶ್ರಿ ಪ್ರಣವಾನಂದ ಸ್ವಾಮೀಜಿ ಕಳೆದ 20 ವರ್ಷಗಳಲ್ಲಿ ಮಠದ ಚಿತ್ರಣವನ್ನೇ ಬದಲಾವಣೆ ಮಾಡಿದ್ದಾರೆ. ಮಠದ ಆವರಣದಲ್ಲಿ ಆರಂಭವಾಗಿರುವ ಗುರುಕುಲ ಶಿಕ್ಷಣ ಸಂಸ್ಥೆ ಈಗ ಪದವಿ ಪೂರ್ವ ಮಹಾವಿದ್ಯಾಲಯದ ವರೆಗೆ ಶಿಕ್ಷಣ ನೀಡುವ ಕೇಂದ್ರ ಇದಾಗಿದೆ.

ಇಂತಹ ಐತಿಹಾಸಿಕ ಮತ್ತು ಪರಂಪರೆ ಹಿನ್ನೆಲೆ ಹೊಂದಿದ ಮಠದ ಸದ್ಗುರು ಶ್ರೀ ಯೋಗಿರಾಜ ನಾಗಭೂಷಣ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಪ್ರಣವಾನಂದ ಸ್ವಾಮೀಜಿ ವರ್ಧಂತಿ ಮಹೋತ್ಸವದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಮಹಾರಾಷ್ಟ್ರ, ಆಂಧ್ರಪ್ರದೇಶ ಭಕ್ತರು ಸೇರಿದಂತೆ 270ಕ್ಕೂ ಹೆಚ್ಚು ಮಠಾಧೀಶರು ಪಾಲೊಳ್ಳಲಿದ್ದಾರೆ. ಹೀಗಾಗಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಮಠದ ಆವರಣದಲ್ಲಿ ಕಾರ್ಯಕ್ರಮದ ಎರಡು ದಿನ ಮುನ್ನವೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಊಟಕ್ಕಾಗಿ ಬೃಹತ್‌ ಪೆಂಡಾಲ್‌ ಮತ್ತು ಪಕ್ಕದಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಉಪಹಾರ ಹಾಗೂ ಊಟಕ್ಕೆ ಪ್ರತಿದಿನ ಒಂದು ನಮೂನೆ ಸಿಹಿ, ಪಲ್ಯ, ಬಿಳಿ ಜೋಳದ ರೊಟ್ಟಿ, ಹುಗ್ಗಿ, ಲಾಡು, ಹೆಸರು ಬೆಳೆ ಪಾಯಸ, ಸಜ್ಜಕ್ಕಿ ಸೇರಿದಂತೆ ವಿವಿಧ ಪ್ರಸಾದ ಸಿದ್ಧಪಡಿಸಲಾಗುತ್ತಿದೆ. ಈಗಾಗಲೇ 30 ಕ್ವಿಂಟಲ್‌ ಲಾಡು, 20 ಕ್ವಿಂಟಲ್‌ ಸಜ್ಜಕ್ಕಿ ಸಿದ್ಧಪಡಿಸಲಾಗಿದೆ. 3 ಲಕ್ಷ ರೂ. ಗಳಲ್ಲಿ 1 ಲಕ್ಷ ಬಿಳಿ ಜೋಳದ ರೊಟ್ಟಿಗಳನ್ನು ಮನ್ನಾಎಖ್ಖಳ್ಳಿಯಿಂದ ತರಸಿಕೊಳ್ಳಳಾಗಿದೆ ಮತ್ತು ಯಾದಗಿರಿ ಮಠದ ಭಕ್ತರು ಸುಮಾರು
100 ಕ್ವಿಂಟಲ್‌ ಅಕ್ಕಿ ಸೇರಿದಂತೆ ಭಕ್ತರು ಸ್ವ ಇಚ್ಛೆಯಿಂದ ದಾಸೋಹಕ್ಕಾಗಿ ನೀಡುತ್ತಿದ್ದಾರೆ ಎಂದು ಮಠದ ಉತ್ತರಾಧಿಕಾರಿ ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಎಲ್ಲ ದಾನಕ್ಕಿಂತಲೂ ಅನ್ನ ದಾಸೋಹ ಅತ್ಯಂತ ಶ್ರೇಷ್ಠ. ಹೀಗಾಗಿ ಕಾರ್ಯಕ್ರಮಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ರೀತಿಯ ಅನ್ನ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಮತ್ತು ಸುಮಾರು 300ಕ್ಕೂ ಹೆಚ್ಚು ಮಹಿಳಾ ಸಂಘಗಳು ಪ್ರಸಾದ ನೀಡಲು ಮುಂದೆ ಬಂದಿವೆ.
ಶ್ರೀ ಪ್ರಣವಾನಂದ ಸ್ವಾಮೀಜಿ,
ನಾಗಭೂಷಣ ಶಿವಯೋಗಿಗಳ
ಸಂಸ್ಥಾನ ಮಠ ಮುಚಳಂಬ

„ವೀರಾರೆಡ್ಡಿ ಆರ್‌. ಎಸ್‌.

ಟಾಪ್ ನ್ಯೂಸ್

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.