ಜನರ ಅಹವಾಲಿಗೆ ತ್ವರಿತವಾಗಿ ಸ್ಪಂದಿಸಿ
Team Udayavani, Feb 20, 2022, 11:17 AM IST
ಹುಮನಾಬಾದ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಗ್ರಾಮೀಣ ಭಾಗದಲ್ಲಿರುವ ಸಮಸ್ಯೆಗಳು ಸ್ಥಳದಲ್ಲಿಯೇ ಸೂಕ್ತ ಪರಿಹಾರ ಕಲ್ಪಿಸುವ ಯೋಜನೆಯಾಗಿದೆ. ಗ್ರಾಮಸ್ಥರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ಚಿಟಗುಪ್ಪ ತಾಲೂಕಿನ ಚಾಂಗಲೇರಾ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರ ಅಹವಾಲು ಆಲಿಸಿ ಅವರು ಮಾತನಾಡಿದರು. ಭಾರತ ಮೂಲತಃ ಹಳ್ಳಿಗಳ ದೇಶವಾಗಿದೆ. ಹಳ್ಳಿಗಳು ಉದ್ದಾರವಾದಾಗ ಮಾತ್ರ ದೇಶ ಉದ್ದಾರವಾಗಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾಲ-ಕಾಲಕ್ಕೆ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮೀಣ ಜನರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
15 ದಿನಗಳ ಗಡುವು
ಶಾಸಕ ಬಂಡೆಪ್ಪ ಖಾಶೆಂಪೂರ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಜನರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಬಹಳ ನಿರೀಕ್ಷೆ ಹೊಂದಿರುತ್ತಾರೆ. ಜನರ ಅಹವಾಲಿಗೆ ತುರ್ತಾಗಿ ಸ್ಪಂದಿಸಲು ಈ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ. ತುರ್ತು ಕ್ರಮ ವಹಿಸಬೇಕಾದ ಅರ್ಜಿಗಳನ್ನು 15 ದಿನದೊಳಗಡೆ ವಿಲೇವಾರಿಗೆ ಕ್ರಮ ವಹಿಸಬೇಕು. ಬಾಕಿ ಅರ್ಜಿಗಳನ್ನು ಹಂತ-ಹಂತವಾಗಿ ವಿಲೇವಾರಿ ಮಾಡಬೇಕು. ಈ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಅರ್ಜಿ ಗಳು, ಅಹವಾಲುಗಳಿಗೆ ತುರ್ತು ಪರಿಹಾರ ಕಲ್ಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ಗ್ರಾಮಸ್ಥರಿಂದ ಅರ್ಜಿ ಸಲ್ಲಿಕೆ
ತಮ್ಮ ಗ್ರಾಮದ ಹಾಗೂ ಸುತ್ತಲಿನ ರಸ್ತೆಗಳನ್ನು ಸರಿಪಡಿಸಬೇಕು. ಶಾಲಾ ಕಟ್ಟಡ ನಿರ್ಮಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಂಬಂಧಿಸಿದ 18 ಇಲಾಖೆಗಳ ಅಧಿಕಾರಿಗಳು ಬೆಳಗ್ಗೆ 10ಗಂಟೆಯಿಂದ ತಡರಾತ್ರಿವರೆಗೂ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮಸ್ಥರ ಮನವಿ ಸ್ವೀಕರಿಸಿದರು. ಒಟ್ಟು ಸ್ವೀಕೃತವಾದ 58 ಅರ್ಜಿಗಳ ಪೈಕಿ 21 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಯಿತು.
ಆದೇಶ ಪತ್ರ ವಿತರಣೆ
ಅರ್ಜಿಗಳೊಂದಿಗೆ ಆಗಮಿಸಿದ್ದ ಕೆಲವು ಅರ್ಹ ಫಲಾನುಭವಿಗಳಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸ್ಥಳದಲ್ಲೇ ಮಂಜೂರಾತಿ ಆದೇಶ ಪತ್ರ ವಿವರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ರವೀಂದ್ರ ದಾಮಾ, ತಾಪಂ ಇಒ ವೆಂಕಟ ಶಿಂಧೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.