ಬೀದರ ನಗರಸಭೆ: ಶೇ.51.25 ಮತದಾನ
Team Udayavani, Apr 28, 2021, 6:46 PM IST
ಬೀದರ: ಬಹು ನಿರೀಕ್ಷಿತ ಬೀದರ ನಗರ ಸಭೆಯ 32 ವಾರ್ಡ್‌ಗಳಿಗೆ ಚುನಾವಣೆ ಹಿನ್ನೆಲೆ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಶೇ.51.25 ಮತದಾನ ದಾಖಲಾಗಿದೆ. ಮೀಸಲಾತಿ ತಕರಾರು ಸಂಬಂಧ ನ್ಯಾಯಾಲಯದಲ್ಲಿ ದಾವೆ ಹಿನ್ನೆಲೆ ಬರೋಬ್ಬರಿ ಮೂರು ವರ್ಷಗಳ ನಂತರ ಬೀದರ ನಗರಸಭೆಗೆ ಚುನಾವಣೆ ನಡೆದಿದೆ.
ನಗರಸಭೆಯ 26, 28 ಮತ್ತು 32 ವಾರ್ಡ್ ಹೊರತುಪಡಿಸಿ ಇನ್ನುಳಿದ 32 ವಾಡ್ ìಗಳಿಗೆ ಮತದಾನ ಪ್ರಕ್ರಿಯೆ ಅಹಿತಕರ ಘಟನೆ ಮತ್ತು ಗೊಂದಲಗಳಿಲ್ಲದೇ ಶಾಂತಿಯುವಾಗಿ ಜರುಗಿತು. ಸಮವಾರು ಮತದಾನ: ಬೆಳಗ್ಗೆ 7ರಿಂದ 6ರವರೆಗೆ ಮತದಾನ ನಡೆಯಿತು. ಬೆಳಗ್ಗೆ 9ರವರೆಗೆ ಶೇ.7.92, ಬೆಳಗ್ಗೆ 11ರವರೆಗೆ ಶೇ.19.37, ಮಧ್ಯಾಹ್ನದವರೆಗೆ ಶೇ.30.18 ಮತದಾನವಾದರೆ, ಮಧ್ಯಾಹ್ನ 3ರವರೆಗೆ ಶೇ.39.11, ಸಾಯಂಕಾಲ 5ರವರೆಗೆ ಶೇ. 48.09 ಹಾಗೂ ಸಂಜೆ 6ರವರೆಗೆ ಶೇ.51.25 ಮತದಾನ ದಾಖಲಾಗಿದೆ. ಕೋವಿಡ್ ಹೆಚ್ಚಳ ಹಿನ್ನೆಲೆ ಮತಗಟ್ಟೆಗಳಲ್ಲಿ ಮಾರ್ಗಸೂಚಿಗಳಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮತಗಟ್ಟೆ ಅಧಿಕಾರಿಗಳಿಗೆ ಕೋವಿಡ್ ಕಿಟ್ ಮತ್ತು ಎಲ್ಲ ಮತಗಟ್ಟೆಗಳಲ್ಲಿ ಥರ್ಮಲ್ ಸ್ಕಾÂನಿಂಗ್ ವ್ಯವಸ್ಥೆ ಮಾಡಲಾಗಿತ್ತು. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸರದಿಯಲ್ಲಿ ನಿಂತು ಹಕ್ಕು ಚಲಾಯಿಸಿದರು.
ವಿಕಲಚೇತನರಿಗೆ ವೋಟ್ ಹಾಕಲು ಅನುಕೂಲವಾಗುವಂತೆ ವ್ಹೀಲ್ ಚೇರ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಕೊನೆ ಹಂತದವರೆಗೆ ಕಸರತ್ತು ನಡೆಸಿದರು.
ಕೆಲವು ವಾರ್ಡ್‌ಗಳಲ್ಲಿ ಮತಗಟ್ಟೆಗೆ ಬರುವ ಮತದಾರರಿಗಾಗಿ ಅಭ್ಯರ್ಥಿಗಳ ಆಟೋ ಸೇರಿ ಇತರ ವಾಹನಗಳ ವ್ಯವಸ್ಥೆ ಮಾಡಿದರು. ಆದರೆ, ಮತದಾನಕ್ಕೆ ನಿರುತ್ಸಾಹ ತೋರಿದ್ದರಿಂದ ವಾಹನಗಳ ಖಾಲಿ ಖಾಲಿ ಓಡಾಟ ಕಂಡುಬಂದಿತು. ಒಟ್ಟಾರೆ ಶಾಂತಿಯುತ ಮತದಾನ ನಡೆಯಲು ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.