ಬೀದರ ಕನ್ನಡ ಭವನ ಕೆಲಸ ಶೀಘ್ರ ಮುಗಿಸಿ: ಈಶ್ವರ ಖಂಡ್ರೆ
Team Udayavani, Nov 25, 2021, 2:28 PM IST
ಭಾಲ್ಕಿ: ಬೀದರನ ಕನ್ನಡ ಭವನದ ಕೆಲಸ ಶೀಘ್ರ ಮುಗಿಸುವ ಕಾರ್ಯವಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಶಾಸಕರ ನಿವಾಸದಲ್ಲಿ ಕಸಾಪ ಮತ್ತೂಂದು ಅವಧಿಗೆ ಸಾರಥ್ಯ ವಹಿಸಿರುವ ಸುರೇಶ ಚನಶೆಟ್ಟಿ ನೇತೃತ್ವದ ಬಳಗದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಐದು ವರ್ಷದಲ್ಲಿ ಮಾಡಿದ ಕನ್ನಡದ ಕಾರ್ಯಗಳು, ಉತ್ತಮ ನಡತೆ, ಸರಳತೆಯು ಚುನಾವಣೆಯಲ್ಲಿ ಸುರೇಶ್ ಚನಶೆಟ್ಟಿ ಅವರನ್ನು ಕೈಹಿಡಿದಿವೆ. ಕನ್ನಡಾಭಿಮಾನಿಗಳು ಸಾಕಷ್ಟು ಕನಸುಗಳನ್ನು ಇಟ್ಟುಕೊಂಡು ತಮ್ಮನ್ನು ಮತ್ತೂಂದು ಅವಧಿಗೆ ಗೆಲ್ಲಿಸಿದ್ದಾರೆ. ನಾನು ಮಂತ್ರಿ ಇದ್ದ ಸಂದರ್ಭದಲ್ಲಿ ಬೀದರ್‌ನಲ್ಲಿ ಕನ್ನಡ ಭವನ ಕಟ್ಟಡಕ್ಕೆ ನಿವೇಶನ ಮತ್ತು ಅನುದಾನ ಒದಗಿಸುವ ಪ್ರಯತ್ನ ಮಾಡಿದ್ದೇನೆ. ತಾವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಂತೆ ಶೀಘ್ರವೇ ಕನ್ನಡ ಭವನ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ. ಇದಕ್ಕೆ ಏನೇ ಸಹಾಯ ಸಹಕಾರ ಬೇಕಿದ್ದರೂ ತಾನು ಕೊಡುತ್ತೇನೆ ಎಂದು ಭರವಸೆ ನೀಡಿದರು.
ಭಾಲ್ಕಿ ಪಟ್ಟಣದ ಕನ್ನಡ ಭವನಕ್ಕೂ ಈ ಹಿಂದೆಯೇ ನಿವೇಶನ, ಅನುದಾನ ಒದಗಿಸಿದ್ದೇನೆ. ಮೊದಲ ಅಂತಸ್ತಿನ ಕಟ್ಟಡ ಮುಗಿದಿದೆ. ಬರುವ ದಿನಗಳಲ್ಲಿ ಎರಡನೇ ಅಂತಸ್ತಿನ ಕಟ್ಟಡಕ್ಕೂ ಅಗತ್ಯ ಅನುದಾನ ಜತೆಗೆ ಗಡಿ ಭಾಗದಲ್ಲಿ ಕನ್ನಡ ಭವನಕ್ಕೆ ನಿವೇಶನ ಸಿಕ್ಕಿದ್ದೇ ಆದಲ್ಲಿ ಅದಕ್ಕೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಸಾಪ ನೂತನ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಬರುವ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಚುನಾವಣೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಹಾಲಿ ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಹಿರಿಯ ಸಾಹಿತಿ ಸೋಮನಾಥ ನುಚ್ಚಾ, ಪ್ರಮುಖರಾದ ರಮೇಶ ಚಿದ್ರಿ, ಸಂಗಮೇಶ ಮದಕಟ್ಟಿ, ರಾಜಕುಮಾರ ಬಿರಾದಾರ, ಸಂಗಮೇಶ ಗುಮ್ಮೆ, ಕಾಶಿನಾಥ ಲದ್ದೆ, ನಾಗಭೂಷಣ ಮಾಮಡಿ, ಸಂತೋಷ ಬಿಜಿ ಪಾಟೀಲ್, ಅಶೋಕ ಕುಂಬಾರ, ಬಸವರಾಜ ಮಡಿವಾಳ, ಕುಪೇಂದ್ರ ಜಗಶೆಟ್ಟೆ, ಸಿದ್ದು ತುಗಶೆಟ್ಟೆ, ಜಾಲೇಂದ್ರ ಭೌರಾ ಸೇರಿದಂಥೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.