ಕೌಶಲ್ಯ ಕೈಪಿಡಿ ರಚನಾತ್ಮಕ ಪುಸ್ತಕ
ಯುವ ಕೌಶಲ್ಯ ಕರ್ನಾಟಕ ನೋಂದಣಿ ಅಭಿಯಾನಕ್ಕೆ ಡಿಸಿ ಚಾಲನೆ
Team Udayavani, Feb 6, 2020, 6:02 PM IST
ಬೀದರ: ಯುವ ಕೌಶಲ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅಭ್ಯರ್ಥಿಗಳಿಗೆ ಕೌಶಲ್ಯ ಕೈಪಿಡಿ ಎಂಬ ವಿನೂತನ ಪುಸ್ತಕ ವಿತರಿಸಲಾಗುವುದು. ಇದು ರಚನಾತ್ಮಕ ಪುಸ್ತಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಹೇಳಿದರು.
ನಗರದ ಡಿಸಿ ಕಚೇರಿಯಲ್ಲಿ ಯುವ ಕೌಶಲ್ಯ ಕರ್ನಾಟಕ ಕಾರ್ಯಕ್ರಮದ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೈಪಿಡಿ ಓದುಗರಿಗೆ ತಮ್ಮ ಸಂವಹನ ಕೌಶಲ್ಯ, ತೊಂದರೆ ನಿವಾರಿಸಿಕೊಳ್ಳಬಲ್ಲ ಕೌಶಲ್ಯ, ಸಮಯ ನಿರ್ವಹಣಾ ಕೌಶಲ್ಯ ಹೀಗೆ ಹಲವಾರು ಅಂಶಗಳನ್ನು ಸುಧಾರಿಸಿಕೊಂಡು ವೃತ್ತಿ ಜೀವನದಲ್ಲಿ ಮುನ್ನಡೆಯಲು ಜಿಲ್ಲೆಯ ಯುವಜನಾಂಗ ಕೌಶಲ್ಯ ತರಬೇತಿಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್ ಮಾತನಾಡಿ, ಯುವ ಕೌಶಲ್ಯವು ಅನೇಕ ಯುವಕರ ಸಂಕಷ್ಟ ದೂರ ಮಾಡಲಿದೆ. ಜಿಲ್ಲೆಯ ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ, ಸ್ನಾತಕೋತ್ತರ ವಿಭಾಗಗಳಲ್ಲಿ ಅಂತಿಮ ವರ್ಷದಲ್ಲಿ ಓದುತ್ತಿರುವವರೆಲ್ಲರೂ ಇದರ ಲಾಭ ಪಡೆಯಬೇಕು. ಮೃದು ಕೌಶಲ್ಯ ತರಬೇತಿಯಲ್ಲಿ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ, ಅವರಲ್ಲಿರುವ ಕೊರತೆ ಅರಿತು ಸೂಕ್ತ ತರಬೇತಿ ನೀಡಿ ಮೌಲ್ಯಮಾಪನ ಮಾಡುವ ಮೂಲಕ ಉದ್ಯೋಗಾರ್ಹತೆ ಮಟ್ಟ ಹೆಚ್ಚಿಸಲಾಗುವುದು ಎಂದರು.
ಜಿಲ್ಲಾ ಐಟಿಐ ನೋಡಲ್ ಅಧಿಕಾರಿ ಶಿವಶಂಕರ ಟೋಕರೆ ಮಾತನಾಡಿ, ಇಲಾಖೆಯ ಯುವ ಕೌಶಲ್ಯ ಬಗ್ಗೆ ಜಿಲ್ಲೆಯಾದ್ಯಂತ ಅಭಿಯಾನ ಪ್ರಾರಂಭಿಸಿ, ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ಯುವಕರು ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನು ಹೇಗೆ ನೋಂದಣಿ ಮಾಡಬೇಕೆಂಬ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗುತ್ತಿದೆ. ಪ್ರಯುಕ್ತ ಜಿಲ್ಲೆಯ ಡಿಪ್ಲೋಮಾ, ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು ಹಾಗೂ ನಿರುದ್ಯೋಗಿ ಯುವಕರು ಸರ್ಕಾರದ ಯೋಜನೆಗೆ ಕೈ ಜೋಡಿಸಿ ನಿರುದ್ಯೋಗಿಗಳಿಗೆ ಸಹಕರಿಸುವಂತೆ ಮನವಿ ಮಾಡಿದರು.
ಫೆ.14ರಂದು ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ನೋಂದಾವಣಿ ಮಾಡಿದ ಯುವಕರೆಲ್ಲರಿಗೆ ಸಮಾಲೋಚನಾ ಸಭೆ ನಡೆಸಲಾಗುವುದು. ಅಂದು ಬೆಳಗ್ಗೆ 10 ಗಂಟೆಗೆ ಸಂಸ್ಥೆ ಆವರಣಕ್ಕೆ ಬರಲು ಮನವಿ ಮಾಡಿದರು. ಯುವ ಕೌಶಲ್ಯ ಸಂಪನ್ಮೂಲ ವ್ಯಕ್ತಿಗಳಾದ ಯುಸೂಫ್‌ಮಿಯಾ ಜೋಜನಾಕರ್, ಮಂಜುನಾಥ ಸ್ವಾಮಿ ಯೋಜನೆ ಬಗ್ಗೆ ಸಮಗ್ರ ಮಾಹಿತಿ ಪ್ರಸ್ತುತಪಡಿದರು.
ಇದೇ ವೇಳೆ ಯುವ ಕೌಶಲ್ಯ ಕರ್ನಾಟಕ ಕಾರ್ಯಕ್ರಮದ ಭಿತ್ತಿಪತ್ರಗಳು, ಕೌಶಲ್ಯ ಕೈಪಿಡಿ ಬಿಡುಗಡೆ ಮಾಡಲಾಯಿತು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ಬಲಭೀಮ ಕಾಂಬಳೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.