ವಿಮಾನಯಾನ ಸಮೀಕ್ಷೆಗೆ ಸಿದ್ಧರಾಗಿ
ಪ್ರಗತಿ ಪರಿಶೀಲನೆ ಪ್ರಧಾನ ಕಾರ್ಯದರ್ಶಿ ಸೂಚನೆ ಅಧಿಕಾರಿ ಜತೆ ವಿಡಿಯೋ ಕಾನ್ಫರೆನ್ಸ್
Team Udayavani, Jan 15, 2020, 11:55 AM IST
ಬೀದರ: ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಗರದಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ವಿಮಾನ ನಿಲ್ದಾಣ ಆರಂಭಿಸಲು ಅತ್ಯವಶ್ಯಕವಿರುವ ಕೆಲಸಗಳನ್ನು ಬೇಗ ಪೂರ್ಣಗೊಳಿಸಿ, ವಿಮಾನಯಾನ ಪರೀಕ್ಷೆ ನಡೆಸಲು ಸಿದ್ಧರಾಗಬೇಕು. ಕುಡಿಯುವ ನೀರು ಪೂರೈಕೆ, ರಸ್ತೆ, ವಿದ್ಯುತ್ ಸಂಪರ್ಕ, ಇಂಟರ್‌ನೆಟ್ ಒದಗಿಸುವುದು, ತಾತ್ಕಾಲಿಕವಾಗಿ ರಕ್ಷಣಾ ಸಿಬ್ಬಂದಿ ನಿಯೋಜಿಸುವುದು ಹೀಗೆ ಅವಶ್ಯಕವಿರುವ ಸೌಲಭ್ಯ ಒದಗಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೀದರ ವಿಮಾನ ನಿಲ್ದಾಣ ಆರಂಭವಾದ ನಂತರ ಕೇವಲ ವಿಮಾನಗಳಷ್ಟೇ
ಹಾರದೇ, ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ರೀತಿಯ ಬದಲಾವಣೆಗಳ ನಿರೀಕ್ಷೆಯಿರುತ್ತದೆ. ಹಾಗಾಗಿ ರಾಜ್ಯ ಸರ್ಕಾರದಿಂದ ವಿಮಾನಯಾನ ಆರಂಭಿಸಲು ಅಗತ್ಯ ನೆರವು ನೀಡಲಾಗುವುದು. ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಇನ್ನು ಏನೇನು ಅಗತ್ಯವಿದೆ ಎನ್ನುವ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ್ ಮಾತನಾಡಿ, ಏರ್
ಟರ್ಮಿನಲ್ ಕಟ್ಟಡ ನಿರ್ಮಾಣ ಹಾಗೂ ಮೂಲ ಸೌಕರ್ಯ ಒದಗಿಸಲು ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ವಿವರಣೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಸಹಾಯಕ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟೆಪ್ಪಗೋಳ, ನಗರಸಭೆ ಪೌರಾಯುಕ್ತ ಬಿ.ಬಸಪ್ಪ, ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಸಿ.ಪಟ್ಟಾಭಿ, ಕೆಎಸ್‌ಐಐಡಿಸಿ ಶಾಮಂತ.ಎನ್, ಪರಿಸರ ಅಧಿಕಾರಿ ಎಂ.ಎ. ಮಣಿಯಾರ್, ಲೋಕೋಪಯೋಗಿ ಇಲಾಖೆ ಎಇಇ ರಾಜೇಂದ್ರ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.