ಭಗವದ್ಗೀತೆ ಮನುಕುಲಕ್ಕೆ ಶ್ರೇಷ್ಠ ಗ್ರಂಥ: ಡಾ| ಗುರುರಾಜ
Team Udayavani, Dec 12, 2021, 1:12 PM IST
ಬೀದರ: ಸತ್ಯ, ನ್ಯಾಯ, ನೀತಿ ಮತ್ತು ಧರ್ಮದ ಮಾರ್ಗ ತೋರುವ ಭಗವದ್ಗೀತೆ ಮನುಕುಲಕ್ಕೆ ಶ್ರೇಷ್ಠ ಗ್ರಂಥವಾಗಿದೆ ಎಂದು ಖ್ಯಾತ ಶಿಕ್ಷಣ ತಜ್ಞ ಡಾ| ಗುರುರಾಜ ಕರಜಗಿ ನುಡಿದರು.
ನಗರದ ಜನಸೇವಾ ಶಾಲೆಯಲ್ಲಿ ಭಗವದ್ಗೀತೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಗವಾನ ಶ್ರೀಕೃಷ್ಣ ಅರ್ಜುನನಿಗೆ ಭಗವದ್ಗೀತೆ ಬೋಧಿಸಿದರು. ಅದರಲ್ಲಿ 18 ಅಧ್ಯಾಯ ಹಾಗೂ 700 ಶ್ಲೋಕಗಳು ಇವೆ. ಭಗವದ್ಗೀತೆಯ ಮೂರನೇ ಅಧ್ಯಾಯದ ಆರಂಭದಲ್ಲಿ ಸುದೀಪ ಎಂಬ ಅಕ್ಷರ ಇದೆ. ಸ್ವಶಕ್ತಿಯಿಂದ ಬೆಳಗುವುದು, ನಿರಂತರ ಬೆಳಗುವುದು, ಇತರ ದೀಪಗಳನ್ನೂ ಬೆಳಗಿಸುವುದು ಸುದೀಪದ ಅರ್ಥವಾಗಿದೆ ಎಂದರು.
ಭಗವದ್ಗೀತೆಯ ಎಲ್ಲ ಅಧ್ಯಾಯ ಹಾಗೂ ಶ್ಲೋಕಗಳನ್ನು ಓದಿ ಅರ್ಥೈಸಿಕೊಳ್ಳಬೇಕು. ಯಾವ ಕ್ಷೇತ್ರದಲ್ಲಿದ್ದರೂ ಧರ್ಮದ ಮಾರ್ಗದಲ್ಲಿ ಸಾಗಬೇಕು. ಭಗವದ್ಗೀತೆ ಓದಿದ ಮಕ್ಕಳು ಸುಸಂಸ್ಕೃತ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದ ಅವರು, ತಂದೆ-ತಾಯಿ ನಿಜವಾದ ದೇವರು. ಹೀಗಾಗಿ ಮಕ್ಕಳು ಎಂದೂ ಪಾಲಕರ ಕಣ್ಣಲ್ಲಿ ನೀರು ತರಿಸಬಾರದು. ಗುರು ಹಿರಿಯರೊಂದಿಗೆ ಗೌರವದಿಂದ ನಡೆದುಕೊಳ್ಳಬೇಕು. ಮೊದಲು ಮನೆಯವರಿಗೆ ಒಳ್ಳೆಯವರಾಗಬೇಕು. ಜೀವಂತ ಇದ್ದಾಗ ಸಮಾಜಕ್ಕೆ ಕೊಡುಗೆ ನೀಡಬೇಕು. ಮರಣದ ನಂತರವೂ ಸಮಾಜಕ್ಕೆ ಉಪಕಾರಿ ಆಗುವಂಥ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
ಈ ವೇಳೆ ಮಕ್ಕಳಿಗೆ ಭಗವದ್ಗೀತೆಯ ಮೂರನೇ ಅಧ್ಯಾಯದ ಸಾಮೂಹಿಕ ಪಠಣ ಮಾಡಿಸಲಾಯಿತು. ಜನಸೇವಾ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಬಿ.ಎಸ್. ಕುದುರೆ ಅಧ್ಯಕ್ಷತೆ ವಹಿಸಿದ್ದರು. ಗ್ಲೊಬಲ್ ಸೈನಿಕ ಅಕಾಡೆಮಿ ಅಧ್ಯಕ್ಷ ಶರಣಪ್ಪ ಸಿಕೇನಪುರೆ, ಶಾಲೆ ಆಡಳಿತಾಧಿಕಾರಿ ಸೌಭಾಗ್ಯವತಿ, ಸಾಗರ ಮಲಾನಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.