KhubaVsChauhan: ಪ್ರಭು ಚವ್ಹಾಣ್ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆಗೆ ಮುಂದಾದ ಖೂಬಾ
Team Udayavani, Aug 12, 2023, 12:30 PM IST
ಬೀದರ: ನನ್ನ ವಿರುದ್ಧ ಗಂಭೀರ ಆರೋಪ ಮಾಡಿ ಶಾಸಕ ಪ್ರಭು ಚವ್ಹಾಣ ಅವರು ಚಾರಿತ್ರೆಗೆ ಧಕ್ಕೆ ತಂದಿದ್ದು, ಅವರ ವಿರುದ್ಧ ನೂರು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಲು ಚಿಂತಿಸಿದ್ಧೆನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಮುಂದಿನ ಏಳು ಜನ್ಮ ಹಾಗೂ ಹಿಂದಿನ ಏಳು ಜನ್ಮದಲ್ಲೂ ಈ ರೀತಿ ನೀಚ ಕೃತ್ಯ ಮಾಡುವ ಯೋಚನೆ ನನ್ನಲ್ಲಿ ಬರಲ್ಲ. ಶಾಸಕ ಚವ್ಹಾಣ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದು, ಅದಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಇದನ್ನೂ ಓದಿ:Instagram ಪೋಸ್ಟ್ ನಿಂದ ವಿರಾಟ್ ಕೊಹ್ಲಿ 11.45 ಕೋಟಿ ರೂ ಪಡೆಯುವುದು ನಿಜವೇ? ಅಸಲೀಯತ್ತೇನು
ಜಿಲ್ಲೆಯಲ್ಲಿ ಬಿಜೆಪಿ ಅಂದರೆ ನಾನು, ನಾನು ಅಂದರೆ ಬಿಜೆಪಿ ಎಂಬ ಅಹಂಕಾರ ಚವ್ಹಾಣ ಬೆಳಿಸಿಕೊಂಡಿದ್ದಾರೆ. ಚವ್ಹಾಣ ಅವರ ಆರೋಪ ಕುರಿತಂತೆ ಪಕ್ಷದ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಇಬ್ಬರ ನಡುವಿನ ಗೊಂದಲವನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಇದು ಬಗೆಹರಿಯದಿದ್ದರೆ, ಪಕ್ಷದ ಅನುಮತಿ ಪಡೆದು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಲಾಭ ಪಡೆದುಕೊಳ್ಳಬೇಕು. ಬೀದರ್ ಲೋಕಸಭಾ ಕ್ಷೇತ್ರದಿಂದ ಯಾರಾದರೂ ಡಮ್ಮಿ ಅಭ್ಯರ್ಥಿಯನ್ನು ಹಾಕಿ ಕಾಂಗ್ರೆಸ್ ಗೆ ಲಾಭ ಮಾಡಬೇಕು ಎಂಬ ಉದ್ದೇಶ ಚವ್ಹಾಣ ಅವರದ್ದು. ಬರೀ ಮೋಸ, ಕಪಟ, ಸ್ವಾರ್ಥದಿಂದ ಈ ಆರೋಪಗಳು ಕೂಡಿದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.