ಭಾಲ್ಕಿ: ಚನ್ನಬಸವ ಪಟ್ಟದ್ದೇವರ128ನೇ ಜಯಂತ್ಯುತ್ಸವ 22ರಂದು
Team Udayavani, Dec 16, 2017, 12:06 PM IST
ಭಾಲ್ಕಿ: ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಡಿ. 22ರಂದು ಡಾ| ಚನ್ನಬಸವ ಪಟ್ಟದ್ದೇವರ 128ನೇ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಲಿದ್ದು, ವಿಜಯಪುರದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಚಿಂತಕರು, ಖ್ಯಾತ ಸಾಹಿತಿಗಳು, ರಾಜಕೀಯ ಧುರೀಣರು ಪಾಲ್ಗೊಳ್ಳಲಿದ್ದಾರೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು. ಅಂದು ಬೆಳಗ್ಗೆ 6:00ಕ್ಕೆ ಹಿರೇಮಠ ಸಂಸ್ಥಾನದಿಂದ ಚನ್ನಬಸವಾಶ್ರಮದ ವರೆಗೆ ಪಥ ಸಂಚಲನ, ಷಟಸ್ಥಲ್ ಧ್ವಜರೋಹಣದ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಕರಡ್ಯಾಳ ಚನ್ನಬಸವೇಶ್ವರ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ, ಹಳೇ ವಿದ್ಯಾರ್ಥಿಗಳ ಸಮಾವೇಶ, ಚನ್ನಬಸವ ಪಟ್ಟದ್ದೇವರ ವ್ಯಾಪಾರ ಮಳಿಗೆ ಕಟ್ಟಡದ ಶಂಕುಸ್ಥಾಪನೆ, ಜಾನಪದ ಕಲಾ ತಂಡಗಳಿಂದ ವಿವಿಧ ಪ್ರಕಾರದ ಕಲಾ ಪ್ರದರ್ಶನ, ಮಹಾದೇವಮ್ಮ ತಾಯಿ ಮಾರ್ಗದರ್ಶನದಲ್ಲಿ ನಾಟಕ ಪ್ರದರ್ಶನ, ಸಮಾಜದ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಪ್ರಶಸ್ತಿ ಪ್ರದಾನ ಸೇರಿದಂತೆ ದಿನವೀಡಿ ಅರ್ಥಪೂರ್ಣ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.
ಜಿಲ್ಲೆಯ ಎಲ್ಲ ಬಸವಾಭಿಮಾನಿಗಳು, ಚಿಂತಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಮಹಾಲಿಂಗ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ರೇವಣಸಿದ್ದೇಶ್ವರ ಸ್ವಾಮೀಜಿ, ಪ್ರಮುಖರಾದ ಸಿದ್ರಾಮಪ್ಪ ವಂಕೆ, ಸಿದ್ರಾಮಪ್ಪ ಆಣದೂರೆ, ಬಾಬುರಾವ ಜಲದೆ, ಸೋಮನಾಥ ಮುದ್ದಾ ಇದ್ದರು. ಶಾಂತಯ್ಯ ಸ್ವಾಮಿ ಸ್ವಾಗತಿಸಿದರು. ಚಂದ್ರಕಾಂತ ಬಿರಾದಾರ ನಿರೂಪಿಸಿದರು. ವೀರಣ್ಣ ಕುಂಬಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.