ಗಡಿ ಭಾಗದ ಶಾಲೆಗೆ ಕನ್ನಡ ಶಿಕ್ಷಕರ ನೇಮಿಸಿ

ಮುಂದಿನ ಶೈಕ್ಷಣಿಕ ವರ್ಷದಲ್ಲಾದರೂ ಭರ್ತಿಯಾಗಲಿನಿಯಮ ಮೀರಿ ಖಾಸಗಿ ಶಾಲೆಗಳಿಗೆ ಅನುಮತಿ ಸಲ್ಲ

Team Udayavani, Mar 9, 2020, 5:10 PM IST

9-March-23

ಭಾಲ್ಕಿ: ಗಡಿ ಭಾಗದ ಬಹುತೇಕ ಶಾಲೆಗಳಲ್ಲಿ ಸಾಕಷ್ಟು ವರ್ಷಗಳಿಂದ ಕನ್ನಡ ಭಾಷೆಯ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳು ಕನ್ನಡ ಭಾಷೆ ಕಲಿಕೆಯಿಂದ ವಂಚಿತರಾಗುವ ಆತಂಕ ಎದುರಾಗಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕನ್ನಡ ಶಿಕ್ಷಕರ ನೇಮಕ್ಕೆ  ಮುಂದಾಗುತ್ತಿಲ್ಲ ಎಂದು ತಾಪಂ ಉಪಾಧ್ಯಕ್ಷ ಮಾರುತಿರಾವ್‌ ಮಗರ್‌ ಹಾಗೂ ಸಾಯಿಗಾಂವ ಸದಸ್ಯ ಶಿವಾಜಿ ಮುರಳಿಧರಾವ್‌ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಮೀರಾಬಾಯಿ ಜನಾರ್ದನರಾವ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಾಯಿಗಾಂವ ವ್ಯಾಪ್ತಿಯ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇರುವ ಬಗ್ಗೆ ವಿಷಯ ಪ್ರಸ್ತಾಪಿಸಿ ಸಭೆಯ ಗಮನ ಸೆಳೆದರು.

ಉಪಾಧ್ಯಕ್ಷರು, ಸದಸ್ಯರು ಮಾತನಾಡಿ, ಗಡಿ ಭಾಗದಲ್ಲಿರುವ ನಮಗೆ ಈ ಹಿಂದೆ ಕನ್ನಡ ಭಾಷೆ ಕಲಿಯಲು ಸಾಧ್ಯವಾಗದೇ ಬೇರೆ ಭಾಷೆ ಕಲಿತು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಇಂತಹ ಸಮಸ್ಯೆ ಗಡಿ ಭಾಗದ ಮಕ್ಕಳಿಗೆ ಬರದಿರಲಿ ಎಂದು ಸಾಕಷ್ಟು ಪ್ರಯತ್ನ ಪಡುತ್ತಿದ್ದೇವೆ. ಈ ವಿಷಯ ಗಂಭೀರವಾಗಿ ತೆಗೆದುಕೊಂಡು ಶಾಲೆಗಳಲ್ಲಿ ಕೊರತೆ ಇರುವ ಕನ್ನಡ ಶಿಕ್ಷಕರನ್ನು ನೇಮಿಸುವಂತೆ ಪದೇಪದೇ ಸಭೆಯಲ್ಲಿ ಒತ್ತಾಯಿಸಲಾಗುತ್ತಿದೆ. ಆದರೆ, ಅಧಿಕಾರಿಗಳು ಶಿಕ್ಷಕರ ಕೊರತೆ ನಿಗಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಮುಂದಿನ ಶೈಕ್ಷಣಿಕ ವರ್ಷದಿಂದಾದರೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಗಡಿ ಭಾಗದ ಮಕ್ಕಳಿಗೆ ಕನ್ನಡ ಕಲಿಸುವಂತಾಗಬೇಕು ಎಂದು ಸೂಚನೆ ನೀಡಿದರು.

ನಿಯಮ ಮೀರಿ ಖಾಸಗಿ ಶಾಲೆಗಳಿಗೆ ಅನುಮತಿ: ತಾಲೂಕಿನ ವ್ಯಾಪ್ತಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿಯಮ ಮೀರಿ ಖಾಸಗಿ ಶಾಲೆಗಳಿಗೆ ಅನುಮತಿ ಕೊಡುತ್ತಿರುವುದರಿಂದ ಸರಕಾರಿ ಶಾಲೆಗಳು ಇಂದು ಮುಚ್ಚುವಂತಹ ಪರಿಸ್ಥಿತಿ ಬಂದಿವೆ ಎಂದು ಚಳಕಾಪೂರ ಸದಸ್ಯ ಕಿಶೋರರಾವ್‌ ರಾಮರಾವ್‌ ಅವರು ವಿಷಯ ಪ್ರಸ್ತಾಪಿಸುತ್ತಲೇ, ಮದಕಟ್ಟಿ ಸದಸ್ಯ ಲಿಂಗರಾಜ ಸಂಗಪ್ಪ, ಖಟಕ್‌ ಚಿಂಚೋಳಿ ಸದಸ್ಯ ವಿಜಯಕುಮಾರ ಕಡಗಂಚಿ, ಹಲಬರ್ಗಾ ಸದಸ್ಯ ಸುಧಾಕರ ಶರಣಪ್ಪ, ಜ್ಯಾಂತಿ ಸದಸ್ಯ ಜಗನ್ನಾಥ ಲಕ್ಷ್ಮಣ ಸೇರಿದಂತೆ ಮುಂತಾದ ಸದಸ್ಯರು ಧ್ವನಿಗೂಡಿಸಿದರು.

ಚಳಕಾಪೂರ ಗ್ರಾಮದಲ್ಲಿ ಕುವೆಂಪು ಹೆಸರಿನಲ್ಲಿ ಶತಮಾನೋತ್ಸವ ಶಾಲೆ ನಡೆಯುತ್ತಿದೆ. ಆದರೆ, ವ್ಯವಸ್ಥೆ ಇಲ್ಲದೇ ಅಧೋಗತಿಗೆ ಬಂದಿದೆ. ಇಲಾಖೆಯ ಅಧಿಕಾರಿಗಳು ವ್ಯವಸ್ಥೆ ಸರಿಪಡಿಸುವ ಪ್ರಯತ್ನ ಮಾಡುತ್ತಿಲ್ಲ. ಪರಿಣಾಮ ಸರಕಾರಿ ಶಾಲೆಗೆ ಮಕ್ಕಳಿಗೆ ಸೇರಿಸುವ ಪಾಲಕರ ಮನಸ್ಥಿತಿ ಬದಲಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುತ್ತಿದೆ ಎಂದು ಸದಸ್ಯ ಕಿಶೋರರಾವ್‌ ಬೇಸರ ವ್ಯಕ್ತ ಪಡಿಸಿದರು.

ಇನ್ನಾದರೂ ಅಧಿಕಾರಿಗಳು ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಪರವಾಗಿ ಸಭೆಗೆ ಬಂದಿದ್ದ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳ್ಕರ್‌ ಸಂಬಂಧಿ ತರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಕಂಪ್ಯೂಟರ್‌ ಶಿಕ್ಷಕರನ್ನು ನೇಮಿಸಿ: ತಾಲೂಕಿನ ಎಲ್ಲ ಸರಕಾರಿ ಶಾಲೆಗಳಲ್ಲಿರುವ ಕಂಪ್ಯೂಟರ್‌ಗಳು ಶಿಕ್ಷಕರು ಇಲ್ಲದೇ ಧೂಳು ತಿನ್ನುತ್ತಿವೆ. ಸರಕಾರ ಹಾಗೂ ಶಿಕ್ಷಣ ಇಲಾಖೆ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ತಿಳಿದುಕೊಳ್ಳಲು ಎಲ್ಲ ಶಾಲೆಗಳಿಗೆ ಕಂಪ್ಯೂಟರ್‌ ನೀಡುತ್ತಿದೆ. ಆದರೆ, ಕಂಪ್ಯೂಟರ್‌ ಕಲಿಸಲು ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅ ಧಿಕಾರಿಗಳು ಮುಂದಾಗುತ್ತಿಲ್ಲ. ಇದರಿಂದ ಮಕ್ಕಳು ಕಂಪ್ಯೂಟರ್‌ ಕಲಿಕೆಯಿಂದ ದೂರ ಸರಿಯುವಂತಾಗಿದೆ ಎಂದು ಸದಸ್ಯರು ಸಭೆಯ ಗಮನಕ್ಕೆ ತಂದರು.

ಇದಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್‌ ಅವರು ಕೂಡ ಸಹಮತ ವ್ಯಕ್ತ ಪಡಿಸಿ, ಬರುವ ಶೈಕ್ಷಣಿಕ ವರ್ಷದಿಂದಾದರೂ ಅತಿಥಿ ರೂಪದಲ್ಲಾದರೂ ಕಂಪ್ಯೂಟರ್‌ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಕಲಿಕೆಗೆ ಅವಕಾಶ ಮಾಡಿಕೊಡುವಂತೆ ಇಲಾಖೆಗೆ ಪತ್ರ ಬರೆಯುವಂತೆ ಕ್ಷೇತ್ರ ಸಮನ್ವಯಾಧಿ ಕಾರಿ ಹೋಳ್ಕರ್‌ಗೆ ಸೂಚನೆ ನೀಡಿದರು.

ಕೆಆರ್‌ಐಡಿಎಲ್‌ ಅ ಧಿಕಾರಿಗೆ ತರಾಟೆ: ತಾಲೂಕಿನ ವ್ಯಾಪ್ತಿಯಲ್ಲಿ ನಾನಾ ಕಡೆಗಳಲ್ಲಿ ಕೆಆರ್‌ಐಡಿಎಲ್‌ನಿಂದ ನಡೆಯುತ್ತಿರುವ ಅಂಗನವಾಡಿ ಕಟ್ಟಡ, ರಸ್ತೆ, ಚರಂಡಿ, ಸಮುದಾಯ ಭವನ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳು ಹಲವು ವರ್ಷಗಳಿಂದ ಅರ್ಧಕ್ಕೆ ನಿಂತರೂ ಇಲಾಖೆ ಅ ಧಿಕಾರಿಗಳು ಕಾಮಗಾರಿ ಪೂರ್ಣಗೊಳಿಸುವ ಪ್ರಯತ್ನ ಮಾಡುತ್ತಿಲ್ಲ. ಜನರು ನಮ್ಮನ್ನು ದೂರುತ್ತಿದ್ದಾರೆ ಎಂದು ಹಲಬರ್ಗಾ ಸದಸ್ಯ ಸುಧಾಕರ, ಮದಕಟ್ಟಿ ಸದಸ್ಯ ಲಿಂಗರಾಜ್‌ ಸೇರಿದಂತೆ ಮುಂತಾದರು ಆಕ್ರೋಶ ವ್ಯಕ್ತ ಪಡಿಸಿದರು. ಅಲ್ಲದೇ ಪ್ರತಿಸಲ ನಡೆಯುವ ಸಭೆಗೆ ಇಲಾಖೆಯ ಅಧಿ ಕಾರಿಗಳು ಗೈರಾಗುವ ಮೂಲಕ ಸದಸ್ಯರಿಗೆ ಅಗೌರವ ತೋರುತ್ತಿರುವ ಕೆಆರ್‌ಐಡಿಎಲ್‌ ಗೆ ಇನ್ಮುಂದೆ ಯಾವುದೇ ಕಾಮಗಾರಿ ನೀಡಬಾರದು ಎಂದು ತಿಳಿಸಿದರು.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.