ವಿಜ್ಞಾನಿಗಳಿಂದ ಭಾರತ ಬಲಿಷ್ಠ ರಾಷ್ಟ್ರ

ಆತ್ಮ ವಿಶ್ವಾಸ-ಸಾಧಿಸುವ ಛಲ-ಶ್ರೇಷ್ಠ ಚಿಂತನೆ ಜೀವನದಲ್ಲಿ ಅಳವಡಿಸಿಕೊಂಡರೆ ಸಾಧನೆ

Team Udayavani, Mar 4, 2020, 4:46 PM IST

4–March-23

ಬೀದರ: ಪ್ರಸಿದ್ಧ ವಿಜ್ಞಾನಿಗಳ ಕೊಡುಗೆಯಿಂದ ಭಾರತ ಈಗ ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದು ರಾಜ್ಯ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಬೆಲ್ದಾರ ಹೇಳಿದರು.

ಜಿಲ್ಲಾ ವಿಜ್ಞಾನ ಶಿಕ್ಷಕರ ವೇದಿಕೆ, ನ್ಯೂ ಮದರ್‌ ತೆರೆಸಾ ನಗರ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಕರ್ನಾಟಕ ಜಾಗೃತಿ ವೇದಿಕೆ ಆಶ್ರಯದಲ್ಲಿ ನಗರದ ಗುರಯ್ಯ ಬಚ್ಚಾ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಉಪನ್ಯಾಸ ಮತ್ತು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಕಲಾಲ ದೇವಿಪ್ರಸಾದ ಮಾತನಾಡಿ, 1928ರ ಫೆ. 28ರಂದು ಸರ್‌ ಸಿ.ವಿ. ರಾಮನ್‌ ಅವರು ರಾಮನ್‌ ಪರಿಣಾಮ ಅವಿಷ್ಕರಿಸಿದ ದಿನ. ಸಿ.ವಿ. ರಾಮನ್‌ ಅವರು ಕೇವಲ 10 ಅಡಿ ಸುತ್ತಳತೆ ಕೋಣೆಯಲ್ಲಿ ಈ ಸಾಧನೆ ಮಾಡಿದ ಮಹತ್ವದ ದಿನ. ಸಾಧನೆ ಮಾಡಲು ಮಕ್ಕಳು ಜೀವನದಲ್ಲಿ ಒಂದು ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಗಿದಾಗ ಹಾಗೂ ಏಕೆ? ಹೇಗೆ? ಎಂಬ ಪ್ರಶ್ನೆ ಕೇಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕ ಸಂಜೀವಕುಮಾರ ಸ್ವಾಮಿ ಮಾತನಾಡಿ, ಮಕ್ಕಳು ಭಾರತದ ಶ್ರೇಷ್ಠ ವಿಜ್ಞಾನಿಗಳಾದ ಸರ್‌ ಸಿ.ವಿ. ರಾಮನ್‌, ಜಗದೀಶ ಚಂದ್ರ ಬೋಸ್‌, ಹರಗೋವಿಂದ ಖುರಾನಾ, ವಿಕ್ರಮ ಸಾರಾಭಾಯಿ, ಚರಕ ಹಾಗೂ ಎಪಿಜೆ ಅಬ್ದುಲ್‌ ಕಲಾಂ ಅವರ ಜೀವನ ಆದರ್ಶಗಳಾದ ಆತ್ಮವಿಶ್ವಾಸ, ಸಾಧಿಸುವ ಛಲ, ಶ್ರೇಷ್ಠ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸತತ ಪ್ರಯತ್ನದಿಂದ ಕಾರ್ಯರೂಪಕ್ಕೆ ತಂದಾಗ ಮಾತ್ರ ಮಕ್ಕಳು ಜೀವನದಲ್ಲಿ ಹೊಸ ಸಾಧನೆ ಮಾಡಲು ಸಾಧ್ಯ. ಇದರಿಂದ ಭಾರತ ವಿಶ್ವದಲ್ಲಿ ಶಕ್ತಿಶಾಲಿ ರಾಷ್ಟ್ರವಾಗಿ ನಿರ್ಮಿಸಲು ಮಕ್ಕಳು ತಮ್ಮ ಅಳಿಲು ಸೇವೆ ಸಲ್ಲಿಬಹುದು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ರಫಿ ತಾಳಿಕೋಟಿ ಮಾತನಾಡಿ, ವಿಜ್ಞಾನದಿಂದಲೇ ರಾಷ್ಟ್ರ ಅಭಿವೃದ್ಧಿ ಪಥದತ್ತ ಮುನ್ನಡೆಯುತ್ತಿದೆ. ಸಿ.ವಿ. ರಾಮನ್‌ ಅವರ ಕೊಡುಗೆಯಿಂದ ಭಾರತ ವಿಶ್ವದಲ್ಲಿಯೇ ವಿಜ್ಞಾನ ಕ್ಷೇತ್ರದಲ್ಲಿ ಉತ್ತುಂಗ ಶಿಖರ ತಲುಪಿದೆ. ಭಾರತದಲ್ಲಿ ವಿಜ್ಞಾನಿಗಳ ಸಂಖ್ಯೆ ಕೇವಲ ಶೇ. 3ರಷ್ಟು ಇದೆ. ಆದ್ದರಿಂದ ಮಕ್ಕಳು ವಿಜ್ಞಾನಿಗಳಾಗುವ ಧ್ಯೇಯದೊಂದಿಗೆ ಪ್ರಯತ್ನ ಮಾಡಿದಾಗ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.

ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕಾವೇರಿ ಬಾಳಪ್ಪ, ದ್ವಿತೀಯ ಪಡೆದ ವೈಷ್ಣವಿ ದೇವಿದಾಸ, ತೃತೀಯ ಸ್ಥಾನ ಪಡೆದ ಸತೀಶ ಚಂದ್ರಕಾಂತ ಅವರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ಶಿಕ್ಷಕರಾದ ಕರಬಸಪ್ಪ, ಅನೀಲಕುಮಾರ, ಶಾಮರಾವ, ಮಹಾದೇವಿ, ಸುನಿತಾ ಹಾಗೂ ಲಕ್ಷ್ಮೀ  ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.