ಜಾನುವಾರು ರಕ್ಷಣೆಗೆ ಆದ್ಯತೆ ನೀಡಿ
ಕರ್ತವ್ಯ ನಿರ್ಲಕ್ಷಿಸಿದರೆ ಕ್ರಮಪಶು ವೈದ್ಯರಿಗೆ ಸಚಿವರ ತಾಕೀತುಪಶುಮೇಳದಲ್ಲಿ ತಾಂತ್ರಿಕ ಸಮ್ಮೇಳನ
Team Udayavani, Feb 9, 2020, 11:33 AM IST
ಬೀದರ: ಪಶುವೈದ್ಯಾಧಿಕಾರಿಗಳು ಗೋವು ಸೇರಿದಂತೆ ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಪಶು ಸಂಗೋಪನೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕರೆ ನೀಡಿದರು.
ರಾಜ್ಯಮಟ್ಟದ ಪಶುಮೇಳ ನಿಮಿತ್ತ ಶನಿವಾರ ನಗರದ ಕರ್ನಾಟಕ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ ತಾಂತ್ರಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಪಶುವೈದ್ಯಕೀಯ ಸಂಘದ ಎಲ್ಲ ಬೇಡಿಕೆಗಳನ್ನು ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸುತ್ತೇನೆ. ಆದರೆ ಜಾನುವಾರುಗಳಿಗೆ ಸಮಸ್ಯೆಯಾದರೆ ಸುಮ್ಮನಿರಲಾಗುವುದಿಲ್ಲ. ಪಶು ಆಸ್ಪತ್ರೆಗಳನ್ನು ಶುಚಿಯಾಗಿಡಬೇಕು. ಅ ಧಿಕಾರಿಗಳು ಮತ್ತು ಸಿಬ್ಬಂದಿ 25 ವರ್ಷಕ್ಕಿಂತ ಹೆಚ್ಚು ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದು ನಿಲ್ಲಬೇಕಿದೆ ಎಂದು ಹೇಳಿದರು.
ತಾವು ಅ ಧಿಕಾರಕ್ಕೆ ಬಂದಾಗಿನಿಂದ ವಿವಿಧ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಕರ್ತವ್ಯದಲ್ಲಿ ನಿರ್ಲಕ್ಷ್ಯತನ ತೋರುವ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇನೆ. ಇದರಿಂದ ಸಾಕಷ್ಟು ಪರಿವರ್ತನೆ ಕಾಣಿಸಿದೆ. ಇಲಾಖೆಯ ಅಧಿಕಾರಿಗಳು ಸಹ ತಮ್ಮ ವ್ಯಾಪ್ತಿಯಲ್ಲಿರುವ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅವರ ಕಾರ್ಯವೈಖರಿಯನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ರಾಜ್ಯಮಟ್ಟದ ಪಶುಮೇಳವನ್ನು ಬೀದರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಪಶುಸಂಗೋಪನೆ ಇಲಾಖೆ ಹಾಗೂ ಇನ್ನಿತರೆ ಅಧಿ ಕಾರಿಗಳು ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಅವರೆಲ್ಲರ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು.
ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ಮಾತನಾಡಿ, ಪಶು ಸಂಗೋಪನೆ ಇಲಾಖೆಯಿಂದ ಜನರ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ರೈತರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಇಲಾಖೆಯು ಇನ್ನಷ್ಟು ಕಾರ್ಯಪ್ರವೃತ್ತವಾಗಬೇಕಿದೆ ಎಂದು ತಿಳಿಸಿದರು.
ಕರ್ನಾಟಕ ಪಶುವೈದ್ಯಕೀಯ ಸಂಘದ ಅಧ್ಯಕ್ಷ ಡಾ|ಎಸ್.ಸಿ.ಸುರೇಶ್ ಪ್ರಾಸ್ತಾವಿಕ ಮಾತನಾಡಿದರು. ಸಂಸದ ಭಗವಂತ ಖೂಬಾ, ಜಿಪಂ ಸದಸ್ಯರಾದ ಶಕುಂತಲಾ ಬೆಲ್ದಾಳೆ, ಮಾರುತಿ ರಾಠೊಡ್, ತಾಪಂ ಅಧ್ಯಕ್ಷ ವಿಜಯಕುಮಾರ ಬರೂರ್, ಇಲಾಖೆಯ ಆಯುಕ್ತ ಎಸ್.ಆರ್. ನಟೇಶ್, ನಿರ್ದೇಶಕ ಡಾ|
ಎಂ.ಟಿ.ಮಂಜುನಾಥ, ಪಶು ವಿವಿ ಕುಲಪತಿ ಡಾ|ಎಚ್.ಡಿ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಡಾ|ಎಚ್.ಆರ್.ಮಹಾದೇವ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್, ರಾಜಕುಮಾರ ಸಿಂಗ್, ಸಿದ್ರಾಮಯ್ನಾ ಸ್ವಾಮಿ, ವಿಶ್ವನಾಥ ಪಾಟೀಲ, ಶಿವಾಜಿ ರಾಠೊಡ್ ಹಾಗೂ ಇತರರು ಉಪಸ್ಥಿತರಿದ್ದರು. ಪಶುವೈದ್ಯಕೀಯ ಸಂಘದ ಉಪಾಧ್ಯಕ್ಷ ಡಾ|ಸಿ.ವೀರಭದ್ರಯ್ನಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.