ಬೀದರ: 6 ಜನ ಪಂಚಾಯತ್ ಸದಸ್ಯರ ಸದಸ್ಯತ್ವ ರದ್ದು
Team Udayavani, Sep 3, 2019, 7:08 PM IST
ಬೀದರ: ಗ್ರಾಮ ಪಂಚಾಯತ್‌ಯಲ್ಲಿ ಅವ್ಯವಹಾರ ನಡೆಸಿದ ಆರೋಪ ಸಾಬೀತಾದ ಮೇರೆಗೆ ತಾಲೂಕಿನ ಕಪಲಾಪೂರ್(ಎ) ಪಂಚಾಯತ್‌ನ 6 ಜನ ಸದಸ್ಯರ ಸದಸ್ಯತ್ವವನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪನಿರ್ದೇಶಕ ಡಿ.ಜಿ ನಾರಾಯಣ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಕಲಾ ದೇವಿದಾಸ್, ಸಂಜೀವಕುಮಾರ್ ಅಮೃತಪ್ಪ, ಆನಂದ ಚಂದ್ರಪ್ಪಾ, ಶಾಂತಕುಮಾರ್ ಶಿವರಾಜ್ ಖೆಮಶೆಟ್ಟಿ, ಮೇರಮ್ಮಾ ಈರಣ್ಣಾ, ಸುಜೀಕುಮಾರ್ ಶಿವರಾಜ್ ತಳಗಟ್ಟಿ ಅವರುಗಳ ಸದಸ್ಯತ್ವ ರದ್ದುಗೊಳಿಸಿ ಪಂಚಾಯತ್ ರಾಜ್ ಇಲಾಖೆ ಉಪನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯತ್‌ನ 13ನೇ ಹಣಕಾಸು ಯೋಜನೆ ಅಡಿಯಲ್ಲಿ ನೀರು ಸರಬರಾಜು ಯೋಜನೆಯಡಿಯಲ್ಲಿ ಸದಸ್ಯರು ತಮ್ಮ ಸಂಬಂಧಿಕರ ಹೆಸರಿನಲ್ಲಿ ಚೆಕ್ ಪಡೆದು ದುರುಪಯೋಗ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧೀನಿಯಮ 1993ರ ಪ್ರಕಾರ 43(ಎ) ಮತ್ತು 48(4)ರಡಿಯಲ್ಲಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಗ್ರಾಮದ ಹಣಮಂತ್ ಬಸವರಾಜ ಎಂಬುವವರು ಕಪಲಾಪುರ ಗ್ರಾಮ ಪಮಚಾಯತನ ಸದಸ್ಯರು ಹಣ ದುರುಪಯೋಗದಲ್ಲಿ ತೊಡಗಿದ್ದಾರೆ ಎಂದು ದೂರು ನೀಡಿದ್ದರು. ದೂರಿನ ಮೇರೆಗೆ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದರು.
ಅಲ್ಲದೆ, ಈ ಪ್ರಕರಣವನ್ನು ಕಲಬುರ್ಗಿ ಪ್ರಾದೇಶಿಕ ಆಯುಕ್ತರು ವಿಚಾರಣೆ ನಡೆಸಿವಾದ ಮತ್ತು ಪ್ರತಿವಾದಗಳನ್ನು ಆಲಿಸಿ ಲಿಖಿತ ಹೇಳಿಕೆ ಕೂಡ ಪಡೆಕೊಂಡು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದರು.
ಸರ್ಕಾರವು ಸದರಿ 6 ಜನ ಸದಸ್ಯರು ಸೇರಿದಂತೆ ಒಟ್ಟು 10 ಜನ ಸದಸ್ಯರಿಗೆ ಕಾರಣ ಕೇಳಿ ನೋಟಿಸ್ ನೀಡಿತ್ತು. ಸರ್ಕಾರದ ಮಟ್ಟದಲ್ಲಿ ನಡೆದ ವಿಚಾರಣೆಯಲ್ಲಿ ಹಾಲಿ ಅಧ್ಯಕ್ಷೆ ಪ್ರಭಾವತಿ ಕಾಶಿನಾಥ್, ರುಕ್ಮಿಣಿ ವಿಜಯಕುಮಾರ್ ಧನ್ನೂರ್, ಜೈಶ್ರಿ ಸಿದ್ರಾಮ ಹಾಗೂ ಅಮೃತಪ್ಪ ವೈಜಿನಾಥ್ ಅವರ ಮೇಲಿನ ಆರೋಪಗಳು ಸಾಬೀತಾಗದ ಹಿನ್ನೆಲೆಯಲ್ಲಿ ಇವರನ್ನು ಆರೋಪ ಮುಕ್ತರನ್ನಾಗಿ ಮಾಡಿ ಆದೇಶಿಸಲಾಗಿದೆ. ಸದ್ಯ ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿಗಳು 6 ಜನ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.