ಕಟ್ಟುನಿಟ್ಟಾಗಿ ಕಳ್ಳಭಟ್ಟಿ ಹಾವಳಿ ತಡೆಗಟ್ಟಿ
Team Udayavani, Apr 26, 2020, 11:41 AM IST
ಬೀದರ: ಜಿಲ್ಲಾಧಿಕಾರಿ ಡಾ| ಮಹಾದೇವ ಅಧ್ಯಕ್ಷತೆಯಲ್ಲಿ ಕಳ್ಳಭಟ್ಟಿ ಸಾರಾಯಿ ನಿರ್ಮೂಲನೆ ಸ್ಥಾಯಿ ಸಮಿತಿ ಸಭೆ ನಡೆಯಿತು
ಬೀದರ: ಪೊಲೀಸ್, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳ ಸಹಕಾರ ಪಡೆದು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಳ್ಳಭಟ್ಟಿ ಹಾವಳಿ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ಹಾಗೂ ಮಿಶ್ರ ಮದ್ಯದ ತಯಾರಿಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸ್ಥಾಪಿಸಲಾದ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮದ್ಯಪಾನ ನಿಷೇಧದ ದುರ್ಬಳಕೆಯನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಪಡೆದು ಕೆಲವು ಕಡೆ ಕಳ್ಳಭಟ್ಟಿ ತಯಾರಿಸುತ್ತಿವೆ ಎನ್ನುವ ದೂರುಗಳಿವೆ. ಆದ್ದರಿಂದ ಇಂತಹ ಕಳ್ಳಭಟ್ಟಿ ಮತ್ತು ಅಕ್ರಮ ಹೆಂಡ,ಮಿಶ್ರ ಮದ್ಯದ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಬಕಾರಿ ಇಲಾಖೆ ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲ ತಾಲೂಕುಗಳಲ್ಲಿ ಅಬಕಾರಿ ಇಲಾಖೆ ನಿಯಂತ್ರಣ ಕೊಠಡಿಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಮಾಹಿತಿ ನೀಡಲು ಅನುಕೂಲವಾಗುವಂತೆ ದೂರವಾಣಿ ಅಥವಾ ಮೊಬೈಲ್ ಸಂಖ್ಯೆ ಕೊಡಬೇಕು ಎಂದು ಸೂಚಿಸಿದರು. ಅಬಕಾರಿ ಉಪ ಆಯುಕ್ತ ಈರಣ್ಣ ಬಾಗೇವಾಡಿ ಮಾತನಾಡಿ, ಜಿಲ್ಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿವಿಧ ಕಡೆ ದಾಳಿ ಮಾಡಿ ಮೊಕದ್ದಮೆ ದಾಖಲಿಸಿ ಮದ್ಯ, ಬೀಯರ್, ಕಳ್ಳಭಟ್ಟಿ ಸಾರಾಯಿ, ಸೇಂದಿ ಅಲ್ಲದೇ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದರು. ಎಸ್‌ಪಿ ಡಿ.ಎಲ್. ನಾಗೇಶ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯಶ್ರೀಧರ, ಅಬಕಾರಿ ಉಪ ಅಧೀಕ್ಷಕ ಅನಿಲಕುಮಾರ ಪೋದ್ದಾರ ಮತ್ತು ಜಿಲ್ಲೆಯ ಅಬಕಾರಿ ನಿರೀಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.