Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
Team Udayavani, Jul 24, 2024, 6:28 PM IST
ಬೀದರ್: ಆರು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ, ಅತ್ಯಾಚಾರ ನಡೆಸಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಅಪರ ಜಿಲ್ಲಾ ಸತ್ರ ಹಾಗೂ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ತಾಲೂಕಿನ ಮನ್ನಳ್ಳಿ ಗ್ರಾಮದ ಶಕೀಲ್ ಮೌಲಾನಾಸಾಬ್ ನೂರಬಾಗ್ ಶಿಕ್ಷೆಗೆ ಒಳಗಾದ ಆರೋಪಿ. 2023ರ ಜು. 6 ರಂದು ಬಾಲಕಿಗೆ ಅತ್ಯಾಚಾರ ನಡೆಸಿರುವ ಕುರಿತು ಆಕೆಯ ತಾಯಿ ನೀಡಿರುವ ದೂರಿನ ಆಧಾರದ ಮೇಲೆ ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಬೀದರ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಶ್ರೀನಿವಾಸ ಅಲ್ಲಾಪೂರ ತನಿಖೆ ನಡೆಸಿ, ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಲ್ಲಿ ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣಾ ಪತ್ರ ಸಲ್ಲಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಚಿನ್ ಕೌಶಿಕ್ ಅವರು ಆರೋಪಿತನ ವಿರುದ್ಧ ಆರೋಪಗಳು ಸಾಬೀತು ಆಗಿರುವ ಹಿನ್ನಲೆ ಪೊಕ್ಸೋ ಕಾಯ್ದೆಯ ಕಲಂ 6 ಜೊತೆ ಭಾರತೀಯ ದಂಡ ಸಂಹಿತೆ ಕಲಂ 376 ಎ,ಬಿ ಅಡಿ ಕಠಿಣ ಜೀವಾವಧಿ ಶಿಕ್ಷೆ ಮತ್ತು 50ಸಾವಿರ ರೂ ದಂಡ ವಿಧಿಸಿದ್ದು, ದಂಡ ಭರಿಸಲು ತಪ್ಪಿದ್ದಲ್ಲಿ ಒಂದು ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಪೋಕ್ಸೋ ಕಾಯ್ದೆಯ ಕಲಂ 12 ಅಡಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂ. ದಂಡ ವಿಧಿಸಿದ್ದು, ದಂಡ ಭರಿಸಲು ತಪ್ಪಿದ್ದಲ್ಲಿ 15 ದಿನ ಜೈಲು ಶಿಕ್ಷೆ ವಿಧಿಸಿದ್ದಾರೆ.
ದಂಡದ 50 ಸಾವಿರ ರೂ.ಗಳು ನೊಂದ ಬಾಲಕಿಗೆ ನೀಡಲು ಮತ್ತು 3 ಸಾವಿರ ರೂ. ಗಳು ರಾಜ್ಯ ಸರ್ಕಾರಕ್ಕೆ ಭರಿಸಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ. ನೊಂದ ಬಾಲಕಿಗೆ ಹೆಚ್ಚಿನ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಂತೋಷಕುಮಾರ ಸಿದ್ದೇಶ್ವರ ವಾದ ಮಂಡಿಸಿರುತ್ತಾರೆ.
ಇದನ್ನೂ ಓದಿ: Shiroor Hill Slide: ಗಂಗಾವಳಿ ನದಿಯಲ್ಲಿ ಮುಳುಗಿದ್ದ ಲಾರಿ ಪತ್ತೆ; ಕೃಷ್ಣ ಬೈರೇಗೌಡ ಟ್ವೀಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.