ಕಬ್ಬು ಬಾಕಿ ಪಾವತಿಗೆ ಆಗ್ರಹಿಸಿ ನಾಡಿದ್ದು ಧರಣಿ
Team Udayavani, Jun 14, 2020, 6:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಕಬ್ಬಿನ ಬಾಕಿ ಪಾವತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂ.16ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.
ನಗರದ ರೈತ ಭವನದಲ್ಲಿ ಹಮ್ಮಿಕೊಂಡಿದ್ದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟ ಒಂದೆಡೆಯಾದರೆ, ಕೃಷಿ ಕ್ಷೇತ್ರದ ಸರಣಿ ಸಮಸ್ಯೆಯಿಂದ ರೈತರು ತತ್ತರಿಸಿದ್ದಾರೆ. ಹೀಗಾಗಿ ಜೂ. 16ರಂದು ಹೋರಾಟ ನಡೆಸಿ ಸರ್ಕಾರದ ಗಮನ ಸೆಳೆಯಲಾಗುವುದು. ಬೇಡಿಕೆಗೆ ಸ್ಪಂದನೆ ಸಿಗದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.
ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿ 6 ತಿಂಗಳಾದರೂ ಅನೇಕರಿಗೆ ಹಣ ಪಾವತಿಯಾಗಿಲ್ಲ. ಕೂಡಲೇ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು. ರೈತರಿಗೆ 3 ಲಕ್ಷ ರೂ. ವರೆಗೆ ಶೂನ್ಯ ದರದಲ್ಲಿ ಸಾಲ ನೀಡಬೇಕು. ಸಾಲಕ್ಕೆ ಅರ್ಜಿ ಸಲ್ಲಿಸಿದಾಗ ಸಾಲ ನೀಡಲು ತಿರಸ್ಕರಿಸುವ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಬೇಕು. ನರೇಗಾದಡಿ ರೈತರ ಹೊಲದಲ್ಲಿ ಕಾಲುವೆ-ಬದು ನಿರ್ಮಾಣಕ್ಕೆ ಅವಕಾಶ ಕೊಡಬೇಕು. ಆಯುರ್ವೇದದ ಅಶ್ವಗಂಧ ಇತರೆ ಔಷಧ ಬೆಳೆಗಳಿಗೆ ಪ್ರೋತ್ಸಾಹಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಪ್ರಮುಖರಾದ ಬಾಬುರಾವ್ ಹೊನ್ನಾ, ಕಾಸೀಂ ಅಲಿ, ನಾಗಶೆಟ್ಟೆಪ್ಪ ಲಂಜವಾಡೆ, ಬಸವರಾಜ ಅಷ್ಟೂರ್, ವಿಠ್ಠಲರಾವ್ ಮೇರೆ, ಸುಭಾಷ ಇಟಗೆ, ಸಂಜೀವಕುಮಾರ ಹುಣಜೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.