Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್
Team Udayavani, May 13, 2024, 6:32 PM IST
ಬೀದರ್: ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನೂತನ ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಮೊಬೈಲ್‌ಗಳನ್ನು ಕಳೆದುಕೊಂಡಿದ್ದ ಸಾರ್ವಜನಿಕರು ಆನ್‌ಲೈನ್ ಪೋರ್ಟಲ್‌ನಲ್ಲಿ ದಾಖಲಿಸಿದ್ದರು. ಜಿಲ್ಲಾ ಪೊಲೀಸರು ಒಟ್ಟು 52 ಮೊಬೈಲ್‌ಗಳನ್ನು ಪತ್ತೆ ಮಾಡಿದ್ದು, ಎಸ್‌ಪಿ ಕಚೇರಿ ಆವರಣದಲ್ಲಿ ಸೋಮವಾರ ವಾರಸುದಾರರಿಗೆ ಮೊಬೈಲ್‌ಗಳನ್ನು ಹಿಂದಿರುಗಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಜಿಲ್ಲೆಯ ಸಾರ್ವಜನಿಕರು ತಮ್ಮ ಮೊಬೈಲ್‌ಗಳನ್ನು ಕಳೆದುಕೊಂಡಲ್ಲಿ ತಕ್ಷಣ ಈ-ಲಾಸ್ಟ್ ಅಥವಾ ಸಿಇಐಆರ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳ ಜತೆಗೆ ದೂರುಗಳನ್ನು ದಾಖಲಿಸಬೇಕು. ಇದರಿಂದ ಕಳುವು ಆದ ಮೊಬೈಲ್‌ಗಳು ಟ್ರೇಸ್ ಆಗುವ ಹಿನ್ನೆಲೆ ಬಳಕೆಗೆ ಯೋಗ್ಯ ಇರುವುದಿಲ್ಲ. ಹೀಗಾಗಿ ಅಂತಯ ಸೆಲ್‌ಗಳನ್ನು ಶೇ. 90ರಷ್ಟು ಪತ್ತೆ ಹಚ್ಚಬಹುದು. ಮೊಬೈಲ್ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಹೆಚ್ಚುವರಿ ಪೊಲಿಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ, ಪೊಲೀಸ್ ಉಪಾಧೀಕ್ಷಕ ಶಿವನಗೌಡ ಪಾಟೀಲ, ನೂತನ ನಗರ ಠಾಣೆಯ ಸಿಪಿಐ ಸಂತೋಷ ಎಲ್.ಟಿ, ಸಿಬ್ಬಂದಿಗಳಾದ ರಾಹುಲ್, ಸಚಿನ್, ಸಂತೋಷ, ರಾಮಣ್ಣ, ಧನರಾಜ, ಮಲ್ಲಿಕಾರ್ಜುನ, ಭರತ ಮತ್ತು ನಿಂಗಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.