Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ
Team Udayavani, Nov 7, 2024, 1:08 PM IST
ಬೀದರ್: ತೋಟಗಾರಿಕೆ ವಿಜ್ಞಾನ ಗಳ ವಿಶ್ವವಿದ್ಯಾಲಯ ವತಿಯಿಂದ ನಗರದಲ್ಲಿ ಆಯೋಜಿಸಿರುವ ಮೂರು ದಿನಗಳ ಕಲಾ ಬಿದರಿ ಸಂಗಮ-2024 (ಯುವ ಜನೋತ್ಸವ) ನಿಮಿತ್ತ ಗುರುವಾರ (ನ.07) ನಗರದಲ್ಲಿ ಸಾಂಸ್ಕೃತಿಕ ಮೆರವಣಿಗೆ ನಡೆಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ಅವರು ಚಾಲನೆ ನೀಡಿದರು. ಶಿವಾಜಿ ವೃತ್ತ, ಹರಳಯ್ಯ ವೃತ್ತ ಮೂಲಕ ಸಾಗಿ ರಂಗ ಮಂದಿರ ಮೈದಾನದಲ್ಲಿ ಕೊನೆಗೊಂಡಿತು. ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.
ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಯ 9 ತೋಟಗಾರಿಕೆ ಮಹಾವಿದ್ಯಾಲಯಗಳಾದ ತೋಟಗಾರಿಕೆ ಮಹಾವಿದ್ಯಾಲಯ ಮೈಸೂರು, ಅರಭಾವಿ, ಮುನಿರಾಬಾದ, ಬೆಂಗಳೂರು, ಬಾಗಲಕೋಟ, ಕೋಲಾರ, ಶಿರಸಿ, ದೇವಿಹೋಸೂರನ ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೀದರ ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ. ಪಾಟೀಲ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kota: ಪಾದಚಾರಿ ಮಾರ್ಗದಲ್ಲೂ ಹೊಂಡ!
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Mangalore: ಲೋವರ್ ಬೆಂದೂರ್‌ವೆಲ್-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.