Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ
Team Udayavani, Oct 23, 2024, 7:28 PM IST
ಬೀದರ್: ಅಂಗಡಿ ಮುಂಗಟ್ಟುಗಳ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಕಡ್ಡಾಯವಾಗಿ ಅಳವಡಿಕೆ ಸಂಬಂಧ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ, ನಗರಸಭೆ, ವಾರ್ತಾ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡಪರ ಸಂಘಟನೆಗಳಿಂದ ಬುಧವಾರ ಕಾಲ್ನಡಿಗೆ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭಗೊಂಡ ಜಾಥಾ ಮೀನಾಬಜಾರ್, ರೋಟರಿ ವೃತ್ತ, ಮಡಿವಾಳ ವೃತ್ತ, ವೆಂಕಟೇಶ್ವರ ಮಾಲ್, ಬಸ್ ನಿಲ್ದಾಣ, ವಿಜಯಲಕ್ಷ್ಮೀ ಸಾರಿ ಸೇಂಟರ್ ಮಾರ್ಗವಾಗಿ ಸಂಚರಿಸಿ ಅಲ್ಲಿಯ ಅಂಗಡಿ, ವಾಣಿಜ್ಯ ಸಂಕಿರ್ಣದ ವ್ಯವಸ್ಥಾಪಕರು ಹಾಗೂ ಅಂಗಡಿಗಳ ಮಾಲೀಕರಿಗೆ ಮಾಹಿತಿ ನೀಡಿ ಕಡ್ಡಾಯವಾಗಿ ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿದೇಯಕ-2024 ರನ್ವಯ ಅಂಗಡಿ ಮುಗ್ಗಟ್ಟುಗಳ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ. 60 ರಷ್ಟು ಕಡ್ಡಾಯವಾಗಿ ಅಳವಡಿಸಬೇಕು ಎಂದು ತಿಳಿಸಿದರು.
ಜಾಥಾದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನಶೆಟ್ಟಿ, ರೇವಣಸಿದ್ದಪ್ಪ ಜಲಾದೆ, ವೀರುಪಾಕ್ಷ ಗಾದಗಿ, ಎಂ.ಎಸ್ ಮನೋಹರ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಸಂತೋಷ, ನಗರಸಭೆ ಆಯುಕ್ತ ಶಿವರಾಜ ರಾಠೋಡ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಡಿವೈಎಸ್‌ಪಿ ಸಿದ್ದನಗೌಡ ಪಾಟೀಲ್, ಸಿಪಿಐ ವಿಜಯಕುಮಾರ ಭಾವನೆ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳಳ್ಳಿ ಮತ್ತು ಕರವೇ ಜಿಲ್ಲಾಧ್ಯಕ್ಷ ಪೀಟರ ಚಿಟಗುಪ್ಪಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uniform Civil Code: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿ.ಕೆ.ಶಿವಕುಮಾರ್
ಗುರಿ ಸಾಧಿಸದಿದ್ರೆ ಅಧಿಕಾರಿಗಳೇ ಹೊಣೆ: ಚಲುವರಾಯಸ್ವಾಮಿ
KAS ಹುದ್ದೆ ಭರ್ತಿಯಲ್ಲಿ ಲೋಪ: ಕೆಪಿಎಸ್‌ಸಿಗೆ ಕೆಎಟಿಯಿಂದ ನೋಟಿಸ್
Mallikarjun Kharge: ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿ 5 ಸಾವಿರ ನೀಡಿ
SSLC ಪ್ರವೇಶ ಪತ್ರ ತಿದ್ದುಪಡಿಗೆ ಫೆ.10ರವರೆಗೆ ಅವಕಾಶ