Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Team Udayavani, Dec 26, 2024, 7:07 PM IST
ಬೀದರ್: ಟೆಂಡರ್ ಕೊಡುವ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಪ್ತ ಲಕ್ಷಾಂತರ ರೂ ಹಣ ಪಡೆದು ವಂಚಿಸಿದ್ದಾರೆ, ಅಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆಂದು ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ನಲ್ಲಿ ಗುರುವಾರ (ಡಿ.26) ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಮೃತ ಸಚಿನ್ (26) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಏಳು ಪುಟಗಳ ಸಮಗ್ರವಾದ ಲೆಟರ್ ಬರೆದಿರುವ ಸಚಿನ್ ರೈಲ್ವೇ ಹಳಿಗೆ ಬಿದ್ದು ಜೀವ ಕಳೆದುಕೊಂಡಿದ್ದಾರೆ. ರೈಲ್ವೆ ಟ್ರ್ಯಾಕ್ನಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಮೇಲೆ ಗಂಭೀರ ಆರೋಪ ಮಾಡಿದ್ದು ಟೆಂಡರ್ ಕೊಡುವ ವಿಚಾರಕ್ಕೆ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ. ಬಳಿಕ ಮತ್ತೆ ರಾಜು ಕಪನೂರ್ ಮತ್ತೆ ಒಂದು ಕೋಟಿ ಹಣಕ್ಕೆ ಬೇಡಿಕೆ ನೀಡಿದ್ದಾರೆ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಸುಮಾರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್ ನೀಡದೆ ಮೋಸ ಮಾಡಿದ್ದಾರೆಂದು ಸಚಿನ್ ಆರೋಪ ಮಾಡಿದ್ದಾರೆ.
ಕಲಬುರಗಿಯ ಮಾಜಿ ಕಾರ್ಪೊರೇಟ್ ರಾಜು ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ ಆರು ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ.
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಪತ್ರದಲ್ಲಿರುವ ಆರೋಪಿಗಳನ್ನು ಕರೆಸುವಂತೆ ಒತ್ತಾಯ ಮಾಡಿದರು. ಪತ್ರದಲ್ಲಿ ಉಲ್ಲೇಖವಾಗಿರುವ ರಾಜು ಕಪನೂರು ಸೇರಿ ಎಲ್ಲರನ್ನು ಇಲ್ಲಿಗೆ ಕರೆಸಿ ಎಂದು ಕುಟುಂಬಸ್ಥರು ಪಟ್ಟು ಹಿಡಿದ ಘಟನೆ ನಡೆಯಿತು. ಅವರು ಬರುವವರೆಗೆ ಇಲ್ಲಿಂದ ಮೃತದೇಹ ತೆಗೆದುಕೊಂಡು ಹೋಗಲು ಬಿಡಲ್ಲ ಎಂದು ಪಟ್ಟು ಹಿಡಿದರು. ನ್ಯಾಯಕ್ಕಾಗಿ ರೈಲು ತಡೆದು ಪಟ್ಟು ಹಿಡಿದುಕೊಂಡು ಕುಳಿತ ಕುಟುಂಬಸ್ಥರ ವಿರೋಧದ ನಡುವೆಯೇ ಕೊನೆಗೆ ಮೃತದೇಹವನ್ನು ಬ್ರಿಮ್ಸ್ ಶವಗಾರಕ್ಕೆ ರವಾನೆ ಮಾಡಲಾಯಿತು.
ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.