ಜೀತದಾಳು ಗುರುತಿಸಿ ಪುನರ್ವಸತಿ ಕಲ್ಪಿಸಿ
ಜೀತದಾಳು-ಮಾಲೀಕರ ಪ್ರತ್ಯೇಕ ಸಂದರ್ಶನ ನಡೆಸಿ 10 ದಿನದೊಳಗೆ ವರದಿ ಸಲ್ಲಿಸಲು ಸೂಚನೆ
Team Udayavani, Jan 8, 2020, 4:59 PM IST
ಬೀದರ: ಬೀದರ ಜಿಲ್ಲೆಯಲ್ಲಿ ಜೀತಪದ್ಧತಿ ಪ್ರಕರಣಗಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸಿ, ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಜೀವಿಕ ರಾಜ್ಯ ಸಂಚಾಲಕ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಕಿರಣ ಕಮಲ ಪ್ರಸಾದ ಅಧಿಕಾರಿಗಳಿಗೆ ತಿಳಿಸಿದರು.
ನಗರದಲ್ಲಿ ಮಂಗಳವಾರ ನಡೆದ ಜೀತದಾಳುಗಳ ಜಾಗೃತಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಸಹಾಯಕ ಆಯುಕ್ತರು, ತಹಶೀಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಜೀತದಾಳುಗಳನ್ನು ಗುರುತಿಸುವ ರೀತಿ ಹಾಗೂ ಅವರ ಸಮೀಕ್ಷೆ ನಡೆಸುವ ವಿಧಾನಗಳ ಬಗ್ಗೆ ತರಬೇತಿ ನೀಡಿದರು.
ಜೀತ ಪದ್ಧತಿಯು ಹಳೆಯ ಕಾಲದಿಂದಲೂ ಪ್ರಚಲಿತದಲ್ಲಿರುವ ಸಾಮಾಜಿಕ ಪಿಡುಗು. ದೇಶವು ವಿಜ್ಞಾನ, ತಂತ್ರಜ್ಞಾನದಲ್ಲಿ ಸಾಕಷ್ಟು ಪ್ರಗತಿ ಸಾ ಧಿಸಿದೆ. ಆದರೂ ಜೀತ ಪದ್ಧತಿಯು ವಿವಿಧ ಸ್ವರೂಪಗಳನ್ನು ಪಡೆದುಕೊಂಡು ಇಂದಿಗೂ ಅಸ್ತಿತ್ವದಲ್ಲಿರುವುದು ಬೆಳಕಿಗೆ ಬಂದಿದೆ. ಜೀತ ಪದ್ಧತಿಯು ಬಲತ್ಕಾರದ ಅಥವಾ ಭಾಗಶ ಬಲತ್ಕಾರದ ದುಡಿಮೆಯ ಪದ್ಧತಿಯಾಗಿರುತ್ತದೆ. ಸಾಲ ಅಥವಾ ಸಂಪ್ರದಾಯಗಳ ಒತ್ತಾಯದಿಂದ ಜನರನ್ನು ಬಲತ್ಕಾರವಾಗಿ ದುಡಿಸಿಕೊಳ್ಳಲಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಜಿಲ್ಲಾ ಧಿಕಾರಿ ಡಾ| ಎಚ್.ಆರ್. ಮಹಾದೇವ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜಕ್ಕೆ ಅವಮಾನಕಾರಿಯಾಗಿರುವ ಜೀತ ಪದ್ಧತಿಯನ್ನು ನಿರ್ಮೂಲನೆಗೊಳಿಸಿ, ಅನ್ಯಾಯಕ್ಕೆ ಒಳಗಾದವರಿಗೆ ಪುನರ್ವಸತಿ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಓಡಾಡಿ ಜೀತಪದ್ಧತಿಗೆ ಸಿಲುಕಿದ ವ್ಯಕ್ತಿಗಳನ್ನು ಗುರುತಿಸುವ ಕಾರ್ಯವನ್ನು ಪ್ರಾಮಾಣಿವಾಗಿ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಈಗಾಗಲೇ ಜೀತದಾಳುಗಳನ್ನು ಬಿಡುಗಡೆಗೊಳಿಸಿ, ಪರಿಹಾರ ಪುನರ್ವಸತಿ ಕಲ್ಪಿಸುವ ಕುರಿತು ಬಂದಿರುವ ಅರ್ಜಿಗಳ ಪೈಕಿ ಪರಿಶೀಲಿಸಿ, ಜೀತದಾಳು ಪ್ರಕರಣಗಳು ಕಂಡುಬಂದಿಲ್ಲ ಎಂದು ಅಭಿಪ್ರಾಯ ವರದಿ ಸಲ್ಲಿಸಲಾಗಿದೆ. ಈ ಅರ್ಜಿಗಳನ್ನು ಮತ್ತೂಮ್ಮೆ ಪರಿಶೀಲಿಸಬೇಕಿದೆ. ಈ ನಿಟ್ಟಿನಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿ, ಜೀತದಾಳು ಮತ್ತು ಅವರ ಮಾಲೀಕರನ್ನು ಪ್ರತ್ಯೇಕವಾಗಿ ಸಂದರ್ಶನ ನಡೆಸಿ, 10 ದಿನದೊಳಗಾಗಿ ವರದಿ ಸಲ್ಲಿಸುವಂತೆ ಸಂಬಂಧಿ ಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜೀತದಾಳು ಕಾರ್ಮಿಕರನ್ನು ಗುರುತಿಸುವಲ್ಲಿ ಯಾವುದೇ ರೀತಿಯ ಸಂದೇಹಗಳು ಬಂದಲ್ಲಿ ಸಂಬಂಧಿಸಿದ ತಹಶೀಲ್ದಾರರು ಅಥವಾ ಸಹಾಯಕ ಆಯುಕ್ತರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು. ಮಾನವೀಯತೆಯ ದೃಷ್ಟಿಯಿಂದ ಜೀತ ಪದ್ಧತಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಜನರನ್ನು ರಕ್ಷಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತರಾದ ಅಕ್ಷಯ ಶ್ರೀಧರ, ಭಂವರ್ ಸಿಂಗ್ ಮೀನಾ, ತಹಶೀಲ್ದಾರರಾದ ಕೀರ್ತಿ ಚಾಲಕ್, ಅಣ್ಣಾರಾವ್ ಪಾಟೀಲ, ಎಂ.ಚಂದ್ರಶೇಖರ, ನಾಗಯ್ಯ ಹಿರೇಮಠ, ಜೀವಿಕ ಜಿಲ್ಲಾ ಉಸ್ತುವಾರಿ ಸಂಚಾಲಕ ಬಸವರಾಜ, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.