ಬೀದರ್: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರ: ಶೇ.32ರಷ್ಟು ಮತದಾನ
Team Udayavani, Oct 28, 2020, 12:46 PM IST
ಬೀದರ್: ಜಿಲ್ಲೆಯಲ್ಲಿ ಬುಧವಾರ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಚುನಾವಣೆ ಬಿರುಸುಗೊಂಡಿದ್ದು, ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಶೇ.32ರಷ್ಟು ಮತದಾನ ದಾಖಲಾಗಿದೆ.
ಬೆಳಗಿನ 8 ಗಂಟೆಗೆ ಮತದಾನ ಆರಂಭಗೊಂಡಿದ್ದು, ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಕ್ರಮ ವಹಿಸಲಾಗಿದೆ. ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ.
ಬೀದರ ಜಿಲ್ಲೆಯಲ್ಲಿ ಒಟ್ಟು 4,926 ಮತದಾರರಿದ್ದು, ಅದರಲ್ಲಿ ಪುರುಷ ಮತದಾರರು 3,433. ಮಹಿಳಾ ಮತದಾರರು 1,493 ಸೇರಿದ್ದಾರೆ.
ಇದನ್ನೂ ಓದಿ: ಅಕ್ಟೋಬರ್ 31ರಂದು ಬಾನಂಗಳದಲ್ಲಿ “ನೀಲಿ ಚಂದ್ರನ” ವಿಸ್ಮಯ: ಏನಿದು ಹಂಟರ್ ಮೂನ್?
ಜಿಲ್ಲೆಯಲ್ಲಿ ಒಟ್ಟು 34 ಮತಗಟ್ಟೆ
ಬೀದರ್ ತಾಲೂಕಿನಲ್ಲಿ 8, ಭಾಲ್ಕಿ ತಾಲೂಕಿನಲ್ಲಿ 7, ಔರಾದ್ ತಾಲೂಕಿನಲ್ಲಿ 6, ಬಸವಕಲ್ಯಾಣದಲ್ಲಿ 6, ಹುಮನಾಬಾದ್ ತಾಲೂಕಿನಲ್ಲಿ 7 ಮತಗಟ್ಟೆಗಳು ಇವೆ. ಒಂದು ಸಾವಿರಕ್ಕಿಂತ ಹೆಚ್ಚಿನ ಮತದಾರರು ಇರುವ ಕಾರಣಕ್ಕೆ ಬೀದರ್ ತಹಸೀಲ್ದಾರ್ ಕಚೇರಿಯಲ್ಲಿ ಒಂದು ಹೆಚ್ಚುವರಿ ಮತಗಟ್ಟೆ- 42 (A) ಸ್ಥಾಪಿಸಲಾಗಿದೆ.
ಇದನ್ನೂ ಓದಿ: ಪಶ್ಚಿಮ ಪದವೀಧರ ಕ್ಷೇತ್ರ: ಅಪಘಾತವಾಗಿದ್ದರೂ, ಆ್ಯಂಬುಲೆನ್ಸ್ ನಲ್ಲಿ ಬಂದು ಮತಹಾಕಿದ ವ್ಯಕ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.