ರೋಗಿಗಳ ಆರೋಗ್ಯ ವಿಚಾರಣೆ
ಜಿಲ್ಲಾಸ್ಪತ್ರೆಗೆ ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಭೇಟಿ
Team Udayavani, Mar 6, 2020, 1:22 PM IST
ಬೀದರ: ಜಿಪಂ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ ಅವರು ಗುರುವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಕೊರೊನಾ ಸೋಂಕಿತ ರೋಗಿಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.
ಶಂಕಿತ ವೈರಸ್ ಸೋಂಕಿತರೆಂದು ದಾಖಲಾದ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಸ್ಥಳದಲ್ಲಿದ್ದ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಈಗ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ ಕೊರೊನಾ ವೈರಸ್ ಇರುವ ಬಗ್ಗೆ ದೃಢಪಟ್ಟಿಲ್ಲ. ಅವರು ಆರೋಗ್ಯವಾಗಿದ್ದಾರೆ. ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಮಾತನಾಡಿದ್ದು, ಪುಣೆಗೆ ಕಫ ಮತ್ತು ರಕ್ತದ ಮಾದರಿಯನ್ನು ಕಳಿಸಿದ್ದಾಗಿ ವೈದ್ಯಾಧಿಕಾರಿಗಳು ಹೇಳಿದ್ದಾರೆ.
ಹೀಗಾಗಿ ಜಿಲ್ಲೆಯ ಸಾರ್ವಜನಿಕರು ಭೀತಿಗೊಳಗಾಗಬಾರದು ಎಂದು ಅಧ್ಯಕ್ಷರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ತೀವ್ರ ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯೂಮೋನಿಯಾ, ಬೇ ಧಿಯಂತಹ ರೋಗ ಲಕ್ಷಣಗಳು ಕಾಣಿಸಿದಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ರೋಗವು ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ, ಸೋಂಕಿತ ವ್ಯಕ್ತಿಯ ಜೊತೆ ನಿಕಟ ಸಂಪರ್ಕದಲ್ಲಿರುವಾಗ, ಸೋಂಕಿತ ವ್ಯಕ್ತಿಯ ಹಸ್ತ ಲಾಘವ ಮತ್ತು ಮುಟ್ಟುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ, ಸ್ವಚ್ಛಗೊಳಿಸದ ಅಥವಾ ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದರಿಂದ ಹರಡುತ್ತದೆ. ಹಾಗಾಗಿ ಸಾರ್ವಜನಿಕರು ಭಯಭೀತರಾಗದೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಇದೆ ವೇಳೆ ಅಧ್ಯಕ್ಷೆ ಚಿದ್ರಿ ಅವರು ಸಲಹೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.