ಓಲ್ಡ್‌ ಸಿಟಿ ಸಾರ್ವಜನಿಕರ ಕುಂದುಕೊರತೆ ಸಭೆ

Team Udayavani, May 2, 2020, 1:42 PM IST

2-May-13

ಬೀದರ: ಜಿಲ್ಲಾಧಿಕಾರಿ ಡಾ| ಮಹಾದೇವ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ಮತ್ತು ಸಂಘಟನೆಗಳ ಮುಖಂಡರ ಸಭೆ ನಡೆಯಿತು.

ಬೀದರ: ರಂಜಾನ್‌ ಹಬ್ಬ ಮತ್ತು ಬೀದರ ಒಲ್ಡ್‌ ಸಿಟಿನಲ್ಲಿನ ಸಾರ್ವಜನಿಕರ ಕುಂದುಕೊರತೆ ಆಲಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಸಭೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಹೊರಾಂಗಣದಲ್ಲಿ ಮುಸಲ್ಮಾನ ಬಾಂಧವರು ಮತ್ತು ವಿವಿಧ ಸಂಘಟನೆಗಳ ಮುಖಂಡರ ಜತೆ ನಡೆದ ಸಭೆಯಲ್ಲಿ ಕಂಟೈನಮೆಂಟ್‌ ಏರಿಯಾದಲ್ಲಿ ಇರುವ ನಮಗೆ ಆರೋಗ್ಯ ಚಿಕಿತ್ಸೆ ಮತ್ತು ಕಿರಾಣಿ, ತರಕಾರಿ, ಹಣ್ಣು ಸೇರಿದಂತೆ ಎಲ್ಲವೂ ಇನ್ನೂ ಸಮರ್ಪಕ ರೀತಿಯಲ್ಲಿ ಸಿಗಬೇಕಿದೆ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಾ| ಮಹಾದೇವ, ತಮ್ಮ ಸಲಹೆ ಸೂಚನೆಗೆ ಸ್ವಾಗತವಿದೆ. ಪ್ರತಿ ದಿನ ವೈದ್ಯಾಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿಗಳೊಂದಿಗೆ ಸಭೆ ನಡೆಸುವಾಗ ಒಲ್ಡ್‌ ಸಿಟಿಯಲ್ಲಿನ ಸ್ಥಿತಗತಿ ಬಗ್ಗೆ ಕೂಡ ಚರ್ಚಿಸಲಾಗುತ್ತದೆ. ಕಂಟೈನಮೆಂಟ್‌ ಏರಿಯಾ ಘೋಷಿತ ಪ್ರದೇಶದಲ್ಲಿ ಕಿರಾಣಿ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ. ಏನಾದರು ಕೊರತೆಯಿದೆ ಎಂದು ತಿಳಿದ ಕೂಡಲೇ ಎಲ್ಲ ವ್ಯವಸ್ಥೆಗೆ ಕ್ರಮ ವಹಿಸಲಾಗುತ್ತಿದೆ. ಆದಾಗ್ಯೂ ಕೆಲವು ಕಡೆ ತೊಂದರೆಯಾಗಿರಬಹುದು. ಈ ಬಗ್ಗೆ ಕೂಡಲೇ ಅಧಿಕಾರಿಗಳಿಗೆ ಸೂಚಿಸಿ ಸರಿಪಡಿಸಲಾಗುವುದು ಎಂದು ಹೇಳಿದರು.

ಕಂಟೈನಮೆಂಟ್‌ ಪ್ರದೇಶದಲ್ಲಿ ಯಾರಿಗೇ ಆಗಲಿ ರಕ್ತದೊತ್ತಡ, ಮಧುಮೇಹ ಹೀಗೆ ಯಾವುದಾದರು ಕಾಯಿಲೆಯಿಂದ ನರಳುತ್ತಿದ್ದರೆ ಅಂತವರು ಮತ್ತು ಗರ್ಭೀಣಿಯರು ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಸಮರ್ಪಕ ವೈದ್ಯಾಧಿಕಾರಿಗಳ ಲಭ್ಯತೆಯೂ ಇದೆ ಎಂದು ಹೇಳಿದರು. ಬ್ರಿಮ್ಸನಲ್ಲಿ ಡಯಾಲಿಸಿಸ್‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕಿಡ್ನಿ ವೈಫಲ್ಯ ತೊಂದರೆಗೀಡಾದವರು ಅಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಹೇಳಿದರು.

ಶಾಸಕ ರಹೀಮ್‌ ಖಾನ್‌ ಮಾತನಾಡಿ, ಕೋವಿಡ್‌-19 ಕರೋನಾ ವೈರಾಣು ತಡೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದಾಗಿ ಸರ್ಕಾರ ರೂಪಿಸಿರುವ ಕಾನೂನಿನ ನಿಯಮಗಳನ್ನು ಪ್ರತಿಯೊಬ್ಬರೂ ತಪ್ಪದೇ ಪಾಲಿಸೋಣ ಎಂದು ಹೇಳಿದರು. ತಮಗೆ ಏನಾದರು ಕುಂದುಕೊರತೆಗಳು ಇದ್ದಲ್ಲಿ ಅದನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಜನರ ಬೇಕುಬೇಡಿಕೆಗಳಿಗೆ ತುರ್ತಾಗಿ ಸ್ಪಂದಿಸಬೇಕು ಎಂದು ಹೇಳಿದರು.

ಎಸ್‌ಪಿ ಡಿ.ಎಲ್‌. ನಾಗೇಶ ಮಾತನಾಡಿ, ಕಂಟೈನಮೆಂಟ್‌ ಪ್ರದೇಶದಲ್ಲಿ ತರಕಾರಿ, ಹಣ್ಣು ಮಾರಾಟ ಮಾಡುವ ತಳ್ಳುವ ಬಂಡಿಗಳನ್ನು ಒಂದೇ ಕಡೆಗೆ ನಿಲ್ಲಿಸದೇ ವಾರ್ಡ್‌ವಾರು ಸಂಚರಿಸಿ ವ್ಯಾಪಾರ ಮಾಡಲು ತೊಂದರೆಯಿಲ್ಲ. ಆದರೆ, ಕೆಲವರು ಒಂದೇ ಕಡೆಗೆ ನಿಂತು ವ್ಯಾಪಾರ ಮಾಡುವುದು ಕಂಡು ಬರುತ್ತಿದೆ. ಅಂತವರಿಗೆ ಆ ಸ್ಥಳದಲ್ಲಿನ ಸಾರ್ವಜನಿಕರು ತಿಳಿಹೇಳಿ ಒಂದೇ ಕಡೆಗೆ ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಸಿ ಅಕ್ಷಯ ಶ್ರೀಧರ, ನಗರಸಭೆ ಪೌರಾಯುಕ್ತ ಬಸಪ್ಪ, ಮುಖಂಡರಾದ ವಹೀದ್‌ ಲಖನ್‌, ಸಯ್ಯದ್‌ ಕೀರ್ಮಾನಿ, ಅಬ್ದುಲ್‌ ಖದೀರ್‌, ಡಾ| ಮಕ್ಸೂದ್‌ ಚೆಂದಾ, ಮನ್ಸೂರ್‌ ಖಾದ್ರಿ, ಯೂಸುಪ್‌, ಅಬ್ದುಲ್‌ ವಹೀದ್‌ ಖಾಸ್ಮಿ, ಜಾವೇದ್‌ ಕಾಂಟ್ರಾಕ್ಟರ್‌, ಅಹ್ಮದ್‌ ಶೇಠ್, ಶಾಖೀರುಲ್ಲಾ ಖಾನ್‌ ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.