Bidar; ರಾಜ್ಯಪಾಲರ ವಿರುದ್ದ ಹೇಳಿಕೆ; ಐವಾನ್ ಡಿಸೋಜಾ ವಿರುದ್ಧ ಬಿಜೆಪಿ ದೂರು
Team Udayavani, Aug 20, 2024, 6:06 PM IST
ಬೀದರ್: ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ದೇಶದ್ರೋಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕ್ರಮ ವಹಿಸಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನಗರದ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದೆ.
ಸಿಎಂ ವಿರುದ್ಧ ಮುಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಪಕ್ಷದ ಕಾಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಡಿಸೋಜಾ ಅವರು ರಾಜ್ಯಪಾಲರ ವಿರುದ್ಧ ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ಬೆದರಿಕೆ, ಪ್ರಚೋದನೆ ಮತ್ತು ದೇಶದ್ರೋಹ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರಾಜ್ಯಪಾಲರು ಹಿಂದಕ್ಕೆ ಹೋಗಬೇಕು ಇಲ್ಲವಾದರೆ ಬಾಂಗ್ಲಾದಂತೆ ಗವರ್ನರ್ ಕಚೇರಿ, ಮನೆಗೆ ನುಗ್ಗುವಂಥ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಾಗುತ್ತದೆ. ಮಾನ ಮರ್ಯದೆ ಇದ್ದರೆ ಗವರ್ನರ್ ರಾಜ್ಯ ಬಿಟ್ಟು ತೊಲಗಬೇಕು. ಇಲ್ಲದಿದ್ದರೆ, ರಾಜಭವನ ನುಗ್ಗುವುದು ಖಂಡಿತ. ರಾಜಭವನದಲ್ಲಿ ಏನಾದರೂ ಆದರೇ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕೂಡಲೇ ಎಂಎಲ್‌ಸಿ ಐವಾನ್ ಡಿಸೋಜಾ ಅವರ ವಿರುಧ್ಧ ಸೂಕ್ತ ಪ್ರಕರಣ ದಾಖಲಿಸಿಬೇಕು ಎಂದು ಒತ್ತಾಯಿಸಲಾಗಿದೆ.
ಈ ವೇಳೆ ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಶ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ವೀರೇಶ ಸ್ವಾಮಿ, ರಮೇಶ ಕಲ್ಲೂರ, ನಗರ ಅಧ್ಯಕ ಸಂದೀಪ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪಕಕುಮಾರ ಜಾಧವ, ಬಸವ ಮೂಲಗೆ, ಪ್ರಮುಖರಾದ ಸಾಯಿನಾಥ ಪಾಟೀಲ, ಶಿವು ಸುಲ್ತಾನಪುರೆ, ಗುರು ಪಾಂಪಡೆ, ಅರವಿಂದ ಬುಳ್ಳಾ, ಶರಣು ಬಿರಾದಾರ, ಬಾಲಾಜಿ ಪಾಟೀಲ, ಸಂದೀಪ ಪಸರ್ಗೆ, ಕೃಷ್ಣ ಉಪ್ಪಾರ, ಅಜಯ, ಆಕಾಶ ರಾಜಗೀರಾ, ವೆಂಕಟ ಆಣದೊರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.