ಇನ್ನೂ ಸರಿ ದಾರಿಗೆ ಬಾರದ ಬಸ್
ಸರ್ಕಾರ ಮತ್ತು ಸಾರಿಗೆ ಸಂಸ್ಥೆ ನೌಕರರ ಹಗ್ಗ ಜಗ್ಗಾಟದಿಂದ ಪ್ರಯಾಣಿಕರು ಪರದಾಡುವಂತಾಗಿದೆ.
Team Udayavani, Apr 9, 2021, 6:59 PM IST
ಬೀದರ: ಆರನೇ ವೇತನ ಆಯೋಗ ಶಿಫಾರಸು ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಆರಂಭಿಸಿರುವ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾರ್ಯಾಚರಣೆ ಹೊರತುಪಡಿಸಿದರೆ ಬಹುತೇಕ ಸರ್ಕಾರಿ ಬಸ್ ಸಂಚಾರ ಸ್ತಬ್ಧವಾಗಿತ್ತು. ಪರ್ಯಾಯ ವ್ಯವಸ್ಥೆ ನಡುವೆಯೂ ಪ್ರಯಾಣಿಕರು ಪರದಾಡುವಂತಾಯಿತು.
ಮುಷ್ಕರದ ಎರಡನೇ ದಿನ ಎನ್‌ಈಕೆಆರ್ ಟಿಸಿ ಮೇಲಾಧಿ ಕಾರಿಗಳು ಮನವೊಲಿಸುವ ಪ್ರಯತ್ನ ಮಾಡಿದರಾದರೂ ನೌಕರರು ಬೇಡಿಕೆ ಈಡೇರಿಸುವವರೆಗೆ ಬಸ್ ರಸ್ತೆಗಿಳಿಸಲ್ಲ ಎಂದು ಪಟ್ಟು ಹಿಡಿದರು. ಆದರೆ, ಕೆಲವು ನೌಕರರು ಅಧಿಕಾರಿಗಳ ಕೋರಿಕೆ ಮೇರೆಗೆ ಜಿಲ್ಲೆಯ 9 ಮಾರ್ಗಗಳಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸಿದರು.
ಬೀದರ-ಭಾಲ್ಕಿ, ಬೀದರ- ಉದಗೀರ್, ಬೀದರ-ಔರಾದ, ಬೀದರ-ಜಹೀರಾಬಾದ್, ಹುಮನಾಬಾದ-ಚಿಟಗುಪ್ಪ, ಬೀದರ- ಹುಮನಾಬಾದ, ಬಸವಕಲ್ಯಾಣ-ಚಿಟಗುಪ್ಪ ಮಾರ್ಗಗಳಲ್ಲಿ ಸಾರಿಗೆ ಬಸ್‌ಗಳ ಸಂಚಾರ ನಡೆಯಿತು. ಪ್ರತಿ ಬಸ್‌ಗಳಿಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.
ಇದನ್ನು ಹೊರತುಪಡಿಸಿದರೆ ಜಿಲ್ಲೆಯ ಯಾವುದೇ ಮಾರ್ಗಗಳಲ್ಲಿ ಸಾರಿಗೆ ಬಸ್ ಸಂಚರಿಸಲಿಲ್ಲ. ಜಿಲ್ಲಾದ್ಯಂತ ಸುಮಾರು 2 ಸಾವಿರಕ್ಕೂ ಹೆಚ್ಚು ಚಾಲಕ ಮತ್ತು
ನಿರ್ವಾಹಕರು ಸೇರಿ ಇತರ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದ್ದರು. ಯಾರೊಬ್ಬ ನೌಕರರು ಸಹ ಡಿಪೋದತ್ತ ಮುಖ ಮಾಡಲೇ ಇಲ್ಲ. ಹಾಗಾಗಿ ಜಿಲ್ಲೆಯ 6 ಡಿಪೋಗಳಿಂದ ನಿತ್ಯ ಕಾರ್ಯಾಚರಣೆ ಆಗುವ 500ಕ್ಕೂ ಬಸ್ ಗಳು ರಸ್ತೆಗೆ ಇಳಿಯಲೇ ಇಲ್ಲ.
ಸರ್ಕಾರ ಮತ್ತು ಸಾರಿಗೆ ಸಂಸ್ಥೆ ನೌಕರರ ಹಗ್ಗ ಜಗ್ಗಾಟದಿಂದ ಪ್ರಯಾಣಿಕರು ಪರದಾಡುವಂತಾಗಿದೆ. 6ನೇ ವೇತನಕ್ಕಾಗಿ ನೌಕರರು ಹಠ ಹಿಡಿದಿದ್ದರೆ, ಇತ್ತ ಸರ್ಕಾರ ಸಿಬ್ಬಂದಿ ಮಣಿಸಲು ಅಸ್ತ್ರಗಳನ್ನು ಪ್ರಯೋಗಿಸುತ್ತಲೇ ಇದೇ. ಪರ್ಯಾಯ ವ್ಯವಸ್ಥೆಯಾಗಿ ಖಾಸಗಿ ವಾಹನ ರಸ್ತೆಗಿಳಿಸಿದೆ. ಬೀದರ ಕೇಂದ್ರ ಬಸ್ ನಿಲ್ದಾಣದಿಂದ ಗುರುವಾರ ಖಾಸಗಿ 30 ಬಸ್ ಗಳು ಮತ್ತು 116 ಟ್ರಾಕ್ಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದರಿಂದ ಪ್ರಯಾಣಿಕರಿಗೆ ದೊಡ್ಡ ಪ್ರಮಾಣದಲ್ಲಿ ಪರದಾಡುವ ಸ್ಥಿತಿ ಎದುರಾಗದಿದ್ದರೂ ಪ್ರಯಾಣಿಕರಿಗೆ ದುಪ್ಪಟ್ಟು ಹಣ ವಸೂಲಿಗೆ ಇಳಿದದ್ದು ಆರ್ಥಿಕ ಹೊರೆಗೆ ಕಾರಣವಾಗುತ್ತಿದೆ.
ಇನ್ನೂ ಗ್ರಾಮೀಣ ಭಾಗದಲ್ಲಿ ಬಸ್ ಬಂದ್ ನಿಂದ ತೀವ್ರ ಬಿಸಿ ತಟ್ಟಿದ್ದು, ಆಟೋಗಳಲ್ಲಿ ದುಬಾರಿ ಹಣ ಕೊಟ್ಟು ಸಂಚರಿಸಬೇಕಾಯಿತು. ಗಡಿ ಜಿಲ್ಲೆಯಾಗಿರುವ ಬೀದರನಿಂದ ನಿತ್ಯ ಸಂಚರಿಸುವ ಮಹಾರಾಷ್ಟ್ರದ ಬಸ್‌ಗಳನ್ನು 10 ರಿಂದ 85ಕ್ಕೆ ಹಾಗೂ ತೆಲಂಗಾಣದ 80ರಿಂದ 120ಕ್ಕೆ ಬಸ್ ಹೆಚ್ಚಿಸಿ ಪ್ರಯಾಣಿಕರಿಗೆ
ಅನುಕೂಲ ಮಾಡಿಕೊಡಲಾಗಿದೆ.
ವೇತನ ಹೆಚ್ಚಳ ವಿಷಯದಲ್ಲಿ ಸರ್ಕಾರ ನೌಕರರಿಗೆ ಅನುಕೂಲ ಮಾಡಿಕೊಡಲಿದ್ದು, ಈ ಬಗ್ಗೆ ಸಿಬ್ಬಂದಿಗೆ ಮನವೊಲಿಸಲಾಗುತ್ತಿದೆ. ಗುರುವಾರ ಜಿಲ್ಲೆಯ 9 ಮಾರ್ಗಗಳಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆದಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ ಆಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯದ ಬಸ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ.
ಸಿ.ಎಸ್. ಫುಲೇಕರ್,
ವಿಭಾಗೀಯ ನಿಯಂತ್ರಣಾಧಿಕಾರಿ,
ಎನ್‌ಈಕೆಆರ್‌ಟಿಸಿ, ಬೀದರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.