Bidar ಅಪಘಾತ: ಹಸೆಮಣೆ ಏರಬೇಕಾಗಿದ್ದ ಯುವತಿ, ಸಹೋದರಿ ಮೃತ್ಯು
ಆಮಂತ್ರಣ ಪತ್ರಿಕೆ ವಿತರಿಸಲು ಹೋಗುವಾಗ ದುರ್ಘಟನೆ
Team Udayavani, Apr 28, 2023, 7:04 PM IST
ಬೀದರ್ : ಔರಾದ್ ತಾಲೂಕಿನ ಕೌಠಾ ಬಳಿ ಶುಕ್ರವಾರ ಸಾಯಂಕಾಲ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಲ ದಿನಗಳಲ್ಲೇ ಹಸೆಮಣೆ ಏರಬೇಕಾಗಿದ್ದ ಯುವತಿ ಮತ್ತು ಆಕೆಯ ಸಹೋದರಿ ಸಾವನ್ನಪ್ಪಿರುವ ಹೃದಯವಿದ್ರಾಹಕ ಘಟನೆ ನಡೆದಿದೆ.
ತಂದೆ ಜತೆಗೆ ಬೈಕ್ ಮೇಲೆ ಸಂಬಂಧಿಕರಿಗೆ ಮದುವೆ ಆಮಂತ್ರಣ ಪತ್ರಿಕೆ ವಿತರಿಸಲು ಹೋಗುವಾಗ ಈ ದುರ್ಘಟನೆ ಆಗಿದೆ. ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಶ್ರದ್ಧಾ ಜುಲ್ಫೆ (22) ಮತ್ತು ಸಂಸ್ಕೃತಿ ಜುಲ್ಫೆ (19) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ತಂದೆ ದಿಲೀಪ ಜುಲ್ಫೆ ತೀವ್ರವಾಗಿ ಗಾಯಗೊಂಡಿದ್ದು, ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೇ 9 ರಂದು ಶ್ರದ್ಧಾ ಜುಲ್ಫೆ ಅವರ ಮದುವೆ ನಿಶ್ಚಯವಾಗಿದ್ದು, ಬೀದರನಿಂದ ತಂದೆ ದಿಲೀಪ ತಮ್ಮಿಬ್ಬರು ಪುತ್ರಿಯರೊಂದಿಗೆ ಔರಾದ್ ತಾಲೂಕಿನ ಎಕಂಬಾ ಗ್ರಾಮಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಕೌಠಾ ಸಮೀಪ ಜವರಾಯನಂತೆ ಎದುರಿಗೆ ಬಂದ ಬೊಲೇರೋ ಪಿಕ್‌ಅಪ್ ವಾಹನ ಢಿಕ್ಕಿ ಹೊಡೆದಿದೆ. ತೀವ್ರ ರಕ್ತ ಸ್ರಾವದಿಂದಾಗಿ ಶ್ರದ್ಧಾ ಮತ್ತು ಸಂಸ್ಕೃತಿ ಕೊನೆಯುಸಿರೆಳೆದಿದ್ದಾರೆ. ಸಂತಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದು ವಾರದಲ್ಲಿ ಮದುವೆ ಸಂಭ್ರಮ ನಡೆಯಬೇಕಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.