ಕೊರೊನಾ ನಿಯಂತ್ರಣ ಜನಜಾಗೃತಿ
Team Udayavani, Mar 8, 2020, 4:04 PM IST
ಬೀದರ: ಕೊರೊನಾ ವೈರಸ್ ತಡೆ ಹಿನ್ನೆಲೆಯಲ್ಲಿ ಮತ್ತು ಜನಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ್ ಆಶ್ರಯದಲ್ಲಿ ತಾಲೂಕಿನ ಅಷ್ಟೂರ್ ಗ್ರಾಮದಲ್ಲಿ ಶನಿವಾರ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಪಂ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಅವರು ಬೆಳಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಅಷ್ಟೂರ ಗ್ರಾಮಕ್ಕೆ ತೆರಳಿದರು. ಗ್ರಾಪಂ ಅಧ್ಯಕ್ಷರು ಮತ್ತು ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸೇರಿ ಅಷ್ಟೂರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಸ್ವತ್ಛತಾ ಕಾರ್ಯ ಕೈಗೊಂಡರು.
ಸಿಇಒ ಗಂಗವಾರ ಅವರು ಶಾಲಾ ಆವರಣದ ಸುತ್ತ ಬಿದ್ದಿದ್ದ ಕಸವನ್ನು ಎತ್ತಿ ಶುಚಿಗೊಳಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಸ್ಥಳೀಯ ಸಂಸ್ಥೆ ಅಧ್ಯಕ್ಷರು, ಸದಸ್ಯರು ಸಾಥ್
ನೀಡಿದರು.
ಮಹಿಳಾ ಗ್ರಾಮ ಸಭೆ: ಜನಜಾಗೃತಿ ಜನಾಂದೋಲನ ಕಾರ್ಯಕ್ರಮದ ಬಳಿಕ ಸಸಿಗೆ ನಿರೆರೆಯುವ ಮೂಲಕ ಮಹಿಳಾ ಗ್ರಾಮ ಸಭೆಯನ್ನು ಸಿಇಒ ಅವರು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ತಮ್ಮ ಮನೆ ಮತ್ತು ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಂಡು, ಯಾವುದೇ ರೀತಿಯ ಖಾಯಿಲೆಗಳು ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ತಾಪಂ ಸಹಾಯಕ ನಿರ್ದೇಶಕ ಶರತಕುಮಾರ ಮಾತನಾಡಿದರು. ತಾಪಂ ಇಒ ಧನರಾಜ ಬೋರಾಳೆ, ಜಿಪಂ ಸಹಾಯಕ ಕಾರ್ಯದರ್ಶಿ ಬೀರೇಂದ್ರ ಸಿಂಗ್, ನರೇಗಾ ಅಧಿಕಾರಿ ದೀಪಕ ಕುಮಾರ, ಗ್ರಾಪಂ ಅಧ್ಯಕ್ಷ ಮಹಾದೇವ ಪಾಟೀಲ, ಪಿಡಿಒ ವೀರಪ್ಪಾ ಕನ್ನಾ ಸೇರಿದಂತೆ ಮತ್ತಿತರರು ಇದ್ದರು. ಗ್ರಾಪಂ ಸದಸ್ಯ ಸುನೀಲ ಕುಮಾರ ಚಾದ್ದೆ ಸ್ವಾಗತಿಸಿದರು. ಸಂದಶೆಟ್ಟಿ ರಾಮತೀರ್ಥ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.