ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳ ಪರಿಶೀಲನೆ
Team Udayavani, Jun 24, 2020, 6:12 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಕೋವಿಡ್-19 ಕೇರ್ ಸೆಂಟರ್ ಸ್ಥಾಪನೆಗಾಗಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಜನವಾಡ ರಸ್ತೆಯಲ್ಲಿರುವ ಝೀರಾ ಕನ್ವೆನ್ಷನ್ ಹಾಲ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಯಾವುದೇ ಲಕ್ಷಣಗಳು ಇರದೇ ಇರುವ ಕೋವಿಡ್-19 ರೋಗಿಗಳಿಗೆ ಇರಲು ಅಂದಾಜು 400 ಹಾಸಿಗೆಗಳ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು ಡಿಎಚ್‌ಒ ಡಾ| ವಿ.ಜಿ. ರೆಡ್ಡಿ ಅವರಿಗೆ ಸೂಚಿಸಿದರು. ಇದೇ ವೇಳೆ ಕನ್ವೆನ್ಷನ್ ಹಾಲ್ ಮಾಲೀಕರಿಗೆ ಎರಡ್ಮೂರು ದಿನಗಳೊಳಗೆ ಅಗತ್ಯ ತಯಾರಿ ಮಾಡಿಡುವಂತೆ ಡಿಸಿ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ತಹಶೀಲ್ದಾರ್ ಕೀರ್ತಿ ಚಾಲಕ ಇದ್ದರು.
ನಿಯಮ ಉಲ್ಲಂಘಿಸಿದ್ರೆ ಕ್ರಮ: ಕೋವಿಡ್ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು ಹಾಗೂ ಸೇವಾ ಸಿಂಧು ಆ್ಯಪ್ ಮೂಲಕ ನೋಂದಣಿ ಮಾಡಿಸಿ ಅನುಮತಿ ಪಡೆದು ಜಿಲ್ಲೆಗೆ ಬಂದಿರುವ ಸಾರ್ವಜನಿಕರಿಗೆ ಹೋಮ್ ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಆದರೆ ಕೆಲವರು ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಹೊರಗಡೆ ಓಡಾಡುತ್ತಿರುವುದು ಕಂಡುಬರುತ್ತಿದೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಎಪಿಡೆಮಿಕ್ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣೆ ಕಾಯ್ದೆ 2005ರ ಅನ್ವಯ ದೂರು ದಾಖಲಿಸಿ ಮೊಕದ್ದಮೆ ಹೂಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.