ಬೀದರನಲ್ಲಿ ಮತ್ತೆ 7 ಮಂದಿಗೆ ಸೋಂಕು
Team Udayavani, Jun 8, 2020, 11:36 AM IST
ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಮಹಾರಾಷ್ಟ್ರ ನಂಟಿನಿಂದಾಗಿ ಮತ್ತೆ ಕೋವಿಡ್ ತನ್ನ ಆರ್ಭಟ ಮುಂದುವರಿಸಿದ್ದು, ರವಿವಾರ 7 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 222ಕ್ಕೆ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ಶನಿವಾರ ಕೇವಲ ಒಂದು ಪಾಸಿಟಿವ್ ಪ್ರಕರಣ ವರದಿಯಾಗಿ ಕೊಂಚ ತಗ್ಗಿತ್ತಲ್ಲದೇ 33 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿತ್ತು. ಆದರೆ, ರವಿವಾರ 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಂದು ಪ್ರಕರಣ ಹೊರತುಪಡಿಸಿದರೆ ಉಳಿದ 6 ಸೋಂಕಿತರು ಮಹಾರಾಷ್ಟ್ರದ ಮುಂಬಯಿ ಮತ್ತು ಪುಣೆ ನಗರಗಳಿಂದ ವಲಸೆ ಬಂದಿರುವ ಕಾರ್ಮಿಕರೇ ಆಗಿದ್ದಾರೆ. 7 ಜನ ಪಾಸಿಟಿವ್ ಕೇಸ್ ಗಳಲ್ಲಿ ಒಬ್ಬರು ಚಿಟಗುಪ್ಪ ಪಟ್ಟಣದವರಾಗಿದ್ದರೆ, ಇನ್ನುಳಿದ 6 ಜನ ಬಸವಕಲ್ಯಾಣ ತಾಲೂಕಿಗೆ ಸೇರಿದ್ದಾರೆ.
ಘೋಟಾಳ, ರಾಜೇಶ್ವರ ಗ್ರಾಮದ ತಲಾ 2, ಮೊರಖಂಡಿ ಮತ್ತು ಕಲಖೋರ ತಾಂಡಾದ ತಲಾ ಒಬ್ಬರು ಇದ್ದಾರೆ. 52 ವರ್ಷದ ಪುರುಷ (ಪಿ-5215), 46 ವರ್ಷದ ಮಹಿಳೆ (ಪಿ-5216), 26 ವರ್ಷದ ಮಹಿಳೆ (ಪಿ-5217), 17 ವರ್ಷದ ಪುರುಷ (ಪಿ-5218), 65 ವರ್ಷದ ಪುರುಷ (ಪಿ-5219), 54 ವರ್ಷದ ಪುರುಷ (ಪಿ-5220) ರೋಗಿಗಳು ಮಹಾರಾಷ್ಟ್ರದ ಸಂಪರ್ಕ ಹೊಂದಿದ್ದರೆ, 58 ವರ್ಷದ ಮಹಿಳೆ (ಪಿ-5434) ರೋಗಿಯು ಪಿ-2968ರ ಸಂಪರ್ಕ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 222 ಆದಂತಾಗಿದೆ. ಒಟ್ಟು 6 ಜನ ಸಾವನ್ನಪ್ಪಿದ್ದರೆ 97 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇನ್ನೂ 119 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.