ಕೋವಿಡ್ ಪರೀಕ್ಷಾ ಕೇಂದ್ರ ಶೀಘ್ರ ಆರಂಭ
Team Udayavani, May 27, 2020, 1:25 PM IST
ಸಾಂದರ್ಭಿಕ ಚಿತ್ರ
ಬೀದರ: ಬೀದರನಲ್ಲೇ ಕೊರೊನಾ ವೈರಾಣು ಪರೀಕ್ಷಾ ಕೇಂದ್ರ ಪ್ರಾರಂಭಿಸುವ ಎಲ್ಲ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರ ಜನಸೇವೆಗೆ ಲಭ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಈ ಹಿಂದೆಯೇ ತಿಳಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಬ್ರಿಮ್ಸ್ ನಿರ್ದೇಶಕರು ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭಕ್ಕೆ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಸಂಬಂಧಿಸಿದ ಕೆಲವು ಉಪಕರಣಗಳು ಬಂದಿವೆ. ಇನ್ನೂ ಕೆಲವು ವಾರದೊಳಗೆ ಬರಲಿವೆ. ಸಂಬಂಧಿಸಿದ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಇದಕ್ಕೆ ಅವಶ್ಯವಿರುವ ಎಲ್ಲದಕ್ಕೂ ವ್ಯವಸ್ಥೆ ಮಾಡಲಾಗುತ್ತಿದ್ದು, ಶೇ.90ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಬೀದರನಲ್ಲಿ ಪರೀಕ್ಷಾ ಕೇಂದ್ರ ಆರಂಭವಾದಲ್ಲಿ ಬೆಂಗಳೂರು ಮತ್ತು ಕಲಬುರಗಿ ಹಾಗೂ ಇನ್ನಿತರ ಕಡೆಗೆ ಸ್ಯಾಂಪಲ್ ಕಳಿಸುವುದು ತಪ್ಪಲಿದೆ. ಮತ್ತು ರೋಗಿಗಳ ರಕ್ತ ಮತ್ತು ಗಂಟಲು ದ್ರವ ಪರೀಕ್ಷೆ ನಡೆಸುವುದು ತೀವ್ರವಾಗಲಿದೆ. ಪರೀಕ್ಷಾ ವರದಿ ಬೇಗನೇ ಕೈಗೆ ಸಿಗುವುದರಿಂದ ಪಾಸಿಟಿವ್ ಬಂದ ರೋಗಿಯ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಕೂಡ ಬೇಗನೆ ನಡೆದು ವೈರಾಣು ಇತರರಿಗೆ ಹರಡುವುದನ್ನು ತಡೆಯಬಹುದಾಗಿದೆ ಎಂದಿದ್ದಾರೆ. ಸಿಎಂ ಯಡಿಯೂರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ತಮ್ಮ ಮನವಿಗೆ ಸ್ಪಂದಿಸಿ ಪರೀಕ್ಷಾ ಕೇಂದ್ರ ತೆರೆಯಲು ಅವಕಾಶ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.