ಆಸ್ಪತ್ರೆ-ಚೆಕ್ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ
Team Udayavani, Apr 25, 2020, 4:27 PM IST
ಬೀದರ: ಭಾಲ್ಕಿ ತಾಲೂಕು ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ| ಮಹಾದೇವ ಭೇಟಿ ನೀಡಿ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದರು
ಬೀದರ: ಲಾಕ್ಡೌನ್ ಹಿನ್ನೆಲೆಯಲ್ಲಿ ಮತ್ತು ಕೋವಿಡ್-19 ಕೊರೊನಾ ವೈರಾಣು ಹರಡುವಿಕೆ ತಡೆಗೆ ವಹಿಸಲಾದ ಕ್ರಮಗಳ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ್ ಭಾಲ್ಕಿ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ಆಸ್ಪತ್ರೆಗಳು, ಚೆಕ್ಪೋಸ್ಟ್ ಮತ್ತು ಕ್ವಾರಂಟೈನ್ ಸೆಂಟರ್ಗಳಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆದರು.
ಭಾಲ್ಕಿ ತಾಲೂಕು ಆಸ್ಪತ್ರೆ ಹಾಗೂ ಧನ್ನೂರ ಮತ್ತು ಖಟಕ್ ಚಿಂಚೋಳಿ ಪಿಎಚ್ಸಿಗಳಿಗೆ ಭೇಟಿ ನೀಡಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಜತೆಗೆ ಚರ್ಚಿಸಿದರು. ಆಶಾ ಕಾರ್ಯಕರ್ತೆಯರಿಗೆ ಆಗಾಗ ತರಬೇತಿಗೆ ವ್ಯವಸ್ಥೆ ಮಾಡಿ ಮನೆ ಮನೆ ಸರ್ವೇ ಕಾರ್ಯವನ್ನು ಮತ್ತೊಮ್ಮೆ ನಡೆಸಲು ಜಿಲ್ಲಾಧಿಕಾರಿಗಳು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಕಟ್ಟಿತುಗಾಂವ ಚೆಕ್ಪೋಸ್ಟಗೆ ಭೇಟಿ ನೀಡಿದ ಡಿಸಿ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ತಹಶೀಲ್ದಾರ್ ಅಣ್ಣಾರಾವ ಪಾಟೀಲ, ಡಿವೈಎಸ್ಪಿ ಡಾ| ಬಿ.ದೇವರಾಜ, ಗ್ರೇಡ್-2 ತಹಶೀಲ್ದಾರ ದಿಲ್ರಾಜ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.