ಬೀದರ: ಜೀವನ ಜಟಿಲ ಮಾಡಿಕೊಳ್ಳದಿರಿ: ಬಸವಲಿಂಗ ಅವಧೂತರು

ಹಿಂದೆ ಗುರು ಇದ್ದರೆ ಎಂಥ ಗುರಿಯನ್ನಾದರೂ ಸಾಧಿಸಬಹುದು

Team Udayavani, May 29, 2023, 2:17 PM IST

ಬೀದರ: ಜೀವನ ಜಟಿಲ ಮಾಡಿಕೊಳ್ಳದಿರಿ: ಬಸವಲಿಂಗ ಅವಧೂತರು

ಬೀದರ: ಜೀವನ ಬಹಳ ಸರಳ ಇದೆ. ಅದನ್ನು ಜಟಿಲ ಮಾಡಿಕೊಳ್ಳದಿರಿ. ಸರಳ ಜೀವನ ನಡೆಸಿ ಎಂದು ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಡಾ| ಬಸವಲಿಂಗ ಅವಧೂತರು ಕಿವಿಮಾತು ಹೇಳಿದರು.

ಔರಾದ ತಾಲೂಕಿನ ಗಡಿಕುಶನೂರು ಗ್ರಾಮದ ಹನುಮಾನ ಮಂದಿರದಲ್ಲಿ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ಬಸವಾದಿ ಶರಣರು ಅತ್ಯಂತ ಸರಳವಾಗಿ ಬದುಕಿದರು. ನುಡಿದಂತೆ ನಡೆದು ತೋರಿದರು.

ಅವರ ತತ್ವಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು. ಧರ್ಮ ಗ್ರಂಥಗಳನ್ನು ಓದಿ, ಅರ್ಥೈಸಿಕೊಳ್ಳಬೇಕು. ಮಹಾ ಪುರುಷರ ಮಾರ್ಗದಲ್ಲಿ ಸಾಗಬೇಕು. ಪಾಲಕರ ಸೇವೆ ಮಾಡಬೇಕು. ನೆರೆ ಹೊರೆಯವರೊಂದಿಗೆ ಸೌಹಾರ್ದ ಸಂಬಂಧ ಬೆಳೆಸಿಕೊಳ್ಳಬೇಕು. ಅಂದಾಗ ಜೀವನ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಚಂದ್ರಕಾಂತ ಮಸಾನಿ, ಡಾ| ಬಸವಲಿಂಗ ಅವಧೂತರು ಈ ಭಾಗದ ಜನರಿಗೆ ಸುಂದರ ಬದುಕಿನ ಸೂತ್ರಗಳನ್ನು ಹೇಳಿಕೊಡುತ್ತಿದ್ದಾರೆ. ಧಾರ್ಮಿಕ ಜಾಗೃತಿ ಮೂಡಿಸುತ್ತಿದ್ದಾರೆ. ಹಿಂದೆ ಗುರು ಇದ್ದರೆ
ಎಂಥ ಗುರಿಯನ್ನಾದರೂ ಸಾಧಿಸಬಹುದು ಎಂದು ಹೇಳಿದರು.

ತುಮಕೂರಿನ ಸಿದ್ಧಗಂಗಾ ಮಠದ ಸಂಘಸಿರಿ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಕರಂಜೆ ಅವರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಬೊಮ್ಮಗೊಂಡೇಶ್ವರ ವೃತ್ತದಿಂದ ಹನುಮಾನ ಮಂದಿರವರೆಗೆ ಡಾ| ಬಸವಲಿಂಗ ಅವಧೂತರ ಭವ್ಯ ಮೆರವಣಿಗೆ ಜರುಗಿತು. ಕುಂಭ ಕಳಸ ಹೊತ್ತ ಮಹಿಳೆಯರು, ಬ್ಯಾಂಡ್‌ ಬಾಜಾ, ಕೋಲಾಟ, ಯುವಕರ ನರ್ತನ ಮೆರವಣಿಗೆ ಮೆರುಗು ಹೆಚ್ಚಿಸಿದವು.

ಪ್ರಮುಖರಾದ ಸಂಜುಕುಮಾರ ಬುಕ್ಕಾ, ಶಿವರಾಜ ಬೋಚರೆ, ಬಸಗೊಂಡಾ ಸಂಗಮೆ, ನಿರಂಜಪ್ಪ ನಮೋಶ, ಬಸವರಾಜ ಹೊಸದೊಡ್ಡಿ, ಮಲ್ಲಗೊಂಡ ರೇವಗೊಂಡೆ, ಚನ್ನಬಸವ ಪಾಟೀಲ, ರಾಜಕುಮಾರ ಎಡ್ಡೆ, ಲೋಕೇಶ ಸೋಮಾ, ಗೋರಕ ಕುಂಬಾರ, ಸೋಮನಾಥ ಮಾಶೆಟ್ಟಿ, ಸಂಗಮೇಶ ಮಡಿವಾಳ, ಸಂಜೀವಕುಮಾರ ಎಮ್ಮೆ, ಮಾರುತಿ ಕುಂಬಾರ, ಪ್ರಭು ಟೊಣಪೆ, ಲಕ್ಷ್ಮಣ ಖಪಲೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.