ಜೇನು ಕೃಷಿಯಿಂದ ಬೆಳೆ ಇಳುವರಿ ವೃದ್ಧಿ

ಜೇನು ಮೇಳಬೀಜೋತ್ಪಾದನೆಗೂ ಸಹಕಾರಿಔಷಧ ರೂಪದಲ್ಲಿ ಬಳಕೆಯಾಗುತ್ತಿದೆ ಜೇನು

Team Udayavani, Mar 12, 2020, 1:39 PM IST

12-March-13

ಬೀದರ: ಜೇನು ಸಾಕಾಣಿಕೆ ಲಾಭದಾಯಕ ಉಪ ಕಸುಬು. ಮಾತ್ರವಲ್ಲ ತೋಟಗಾರಿಕೆ ಬೆಳೆಗಳ ಇಳುವರಿ ಹೆಚ್ಚಿಸಲು ನೆರವಾಗುತ್ತದೆ ಎಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಡಾ| ರವೀಂದ್ರ ಮೂಲಗೆ ತಿಳಿಸಿದರು.

ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ತೋಟಗಾರಿಕೆ ಇಲಾಖೆಯ “ಜೇನು ಮೇಳ’ ಜೇನು ಪ್ರದರ್ಶನ-ಮಾರಾಟ ಮೇಳ ಹಾಗೂ ಜೇನು ಕೃಷಿ ತಾಂತ್ರಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಜೇನು ನಿಸರ್ಗದತ್ತವಾಗಿ ಸಿಗುವಂಥದ್ದು. ಇದನ್ನು ವೃದ್ಧಿ ಮಾಡಿ ಲಾಭ ಮಾಡಿಕೊಳ್ಳುವುದು ಮನುಷ್ಯರ ಕೆಲಸ ಎಂದು ಸಲಹೆ ನೀಡಿದರು.

ಜೇನು ನೊಣಗಳಿಂದ ಪರಾಗಸ್ಪರ್ಶವಾಗುವುದರಿಂದ ಬೆಳೆಗಳ ಇಳುವರಿ ಮತ್ತು ಗುಣಮಟ್ಟ ಹೆಚ್ಚುತ್ತದೆ. ಬೀಜೋತ್ಪನ್ನಕ್ಕೂ ಸಹಕಾರಿಯಾಗುತ್ತದೆ. ಹಾಗಾಗಿ ರೈತರು ಜೇನು ಸಾಕಾಣಿಕೆಗೆ ಮುಂದಾಗಬೇಕು. ಜೇನು ಸಾಕಾಣಿಕೆ ಆರಂಭಿಸಿರುವ ರೈತರು ಬೇಸಿಗೆ ಅವಧಿ ಯಲ್ಲಿ ಹೂಗಳ ಪ್ರಮಾಣ ಇಳಿಕೆಯಾಗುವ ಕಾರಣ ಸಕ್ಕರೆಪಾಕ ಒದಗಿಸುವ ಮೂಲಕ ಜೇನು ನೊಣಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಜೇನು ಕೃಷಿ ಉದ್ಯಮವಾಗಿ ಬೆಳೆಯುತ್ತಿದೆ. ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಜೇನು ಕೃಷಿ ಮಾಡಲಾಗುತ್ತಿದ್ದು, ಬೆಳೆಗಾರರ ಸಂಘಗಳನ್ನು ಮಾಡಿಕೊಂಡು ಪ್ರಗತಿ ಸಾಧಿ ಸುತ್ತಿದ್ದಾರೆ. ಈ ಕೃಷಿಯನ್ನು ಒಣ ಭೂಮಿ ಪ್ರದೇಶಕ್ಕೂ ವ್ಯಾಪಿಸುವ ಉದ್ದೇಶ ಸರ್ಕಾರ ಹೊಂದಿದೆ. ಇದಕ್ಕಾಗಿ ತೋಟಗಾರಿಕೆ ಇಲಾಖೆ ಮೂಲಕ ಅಗತ್ಯ ಸಹಾಯ, ಸಲಕರಣೆ ವಿತರಿಸಲಾಗುತ್ತಿದ್ದು, ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾವಗೆ ಮಾತನಾಡಿ, ಭೂಮಿ ಮೇಲಿರುವ ಸಸ್ಯ ಪ್ರಬೇಧಗಳಲ್ಲಿ ಬಹುತೇಕ ಸಸ್ಯಗಳ ಸಂತತಿ ಪರಾಗಸ್ಪರ್ಶದ ಮೂಲಕ ನಡೆಯುತ್ತದೆ. ಜೇನು ಔಷಧದ ರೂಪದಲ್ಲಿಯೂ ಬಳಕೆಯಾಗುತ್ತದೆ. ಜಿಲ್ಲೆಯು ಜೇನು ಸಾಕಾಣಿಕೆಗೆ ಸೂಕ್ತ ಸ್ಥಳವೆಂದು ತಜ್ಞರು ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆಯಿಂದಲೂ ಜೇನು ಸಾಕಾಣಿಕೆದಾರರಿಗೆ ನೆರವು ನೀಡಲಾಗುತ್ತಿದೆ. ರೈತರು ಯಾವುದೇ ಹಿಂಜರಿಕೆ ಇಲ್ಲದೇ ಇಲಾಖೆ ಸೌಲಭ್ಯ ಪಡೆದು ಜೇನು ಸಾಕಾಣಿಕೆ ಆರಂಭಿಸಬೇಕು ಎಂದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ|
ಸುನೀಲಕುಮಾರ.ಎನ್‌.ಎಂ ಮಾತನಾಡಿ, ಜೇನಿನ ಪ್ರಬೇಧಗಳು, ಜೇನು ಸಾಕಾಣಿಕೆ ವಿಧಾನಗಳು ಹಾಗೂ ಜೇನಿನ ಲಾಭದ ಕುರಿತು ವಿವರಣೆ ನೀಡಿದರು. ಮೊದಲಿಗೆ ಎರಡು ಪೆಟ್ಟಿಗೆಗಳಿಂದ ಜೇನು ಸಾಕಾಣಿಕೆ ಆರಂಭಿಸುವುದು ಸೂಕ್ತ. ಅನುಭವದ ಆಧಾರದ ಮೇಲೆ ಪೆಟ್ಟಿಗೆ ವಿಸ್ತರಿಸಿಕೊಳ್ಳಬಹುದು ಎಂದು ತಿಳಿಸಿದರು.

ಬೆಂಗಳೂರಿನ ಜೇನು ಪೆಟ್ಟಿಗೆ ತಯಾರಕರು ಮತ್ತು ವಿತರಕರಾದ ಇಂದುಶೇಖರ್‌ ಹಾಗೂ ಜಿಲ್ಲೆಯ ವಿವಿಧ ರೈತರು ಜೇನು ಸಾಕಾಣಿಕೆ ಕುರಿತು ತಮ್ಮ ಅನುಭವ ಹಂಚಿಕೊಂಡರು. ಈ ಸಂದರ್ಭದಲ್ಲಿ ಜೇನು ಕೃಷಿಕ ಡಾ| ಮಲ್ಲಿಕಾರ್ಜುನ ಎಮ್ಮೆ, ತೋಟಗಾರಿಕೆ ಇಲಾಖೆಯ ವಿಷಯ ತಜ್ಞ ವಿಜಯಕುಮಾರ ರೇವಣ್ಣನವರ್‌ ಸೇರಿದಂತೆ ರೈತರು ಉಪಸ್ಥಿತರಿದ್ದರು.

ಹಿರಿಯ ಸಹಾಯಕ ನಿರ್ದೇಶಕ ಶಿವಪುತ್ರ ಶಂಭು ನಿರೂಪಿಸಿದರು. ಜೇನು ಮೇಳದ ಪ್ರಯುಕ್ತ ತೋಟಗಾರಿಕೆ ಕಚೇರಿ ಆವರಣದಲ್ಲಿ ಜೇನು ಪ್ರದರ್ಶನ ಮತ್ತು ಮಾರಾಟ ನಡೆಯಿತು.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.