ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರಗಳು ವಿಫಲ

ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್‌ ಬೋಗಸ್‌ ಕೇಂದ್ರ ಸರ್ಕಾರದ ಸಾಧನೆ ಶೂನ್ಯ

Team Udayavani, Jun 3, 2020, 12:43 PM IST

03-June-07

ಬೀದರ: ಭಾಲ್ಕಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ಬೀದರ: ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣ ಮತ್ತು ಸಂತ್ರಸ್ತರ ಸಂಕಷ್ಟಗಳನ್ನು ದೂರ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಯಾವುದೇ ಪೂರ್ವ ಸಿದ್ಧತೆ ಮಾಡಿಕೊಳ್ಳದಿರುವುದು ಮತ್ತು ಅಮಾನವೀಯತೆ ತೀರ್ಮಾನಗಳೇ ಇಂದು ಕೋವಿಡ್ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿಗೂ ನಮ್ಮಲ್ಲಿ ಕೋವಿಡ್ ಪರೀಕ್ಷಾ ಕಿಟ್‌ಗಳ ಕೊರತೆ ಇದೆ. ನಾಲ್ಕೈದು ಸಾವಿರ ಪರೀಕ್ಷಾ ವರದಿಗಳು ಬಾಕಿ ಉಳಿಯುತ್ತಿವೆ. ಕ್ವಾರಂಟೈನ್‌ ವಿಷಯದಲ್ಲಿ ದೂರದೃಷ್ಟಿಯೇ ಇಲ್ಲ. ಇನ್ನೊಂದೆಡೆ ಯಾವುದೇ ಸಿದ್ಧತೆ ಇಲ್ಲದೇ ಲಾಕ್‌ಡೌನ್‌ ಘೋಷಿಸಿದ್ದರಿಂದ ಕಾರ್ಮಿಕರು, ನಿರ್ಗತಿಕರು ಸಂಕಷ್ಟ ಎದುರಿಸುವಂತಾಗಿದೆ. ವಲಸೆ ಕಾರ್ಮಿಕರು ಒಪ್ಪಿತ್ತಿನ ಊಟ ಇಲ್ಲದೇ ನಡೆದುಕೊಂಡೇ ತಮ್ಮೂರು ಸೇರುತ್ತಿದ್ದಾರೆ. ಕೆಲವರು ರಸ್ತೆ ಮೇಲೆ ಸಾವನ್ನಪ್ಪುತ್ತಿದ್ದಾರೆ. ಇದು ಬಿಜೆಪಿ ಸರ್ಕಾರದ ಇದೆಂಥಾ ಸ್ವಾವಲಂಬಿ, ಆತ್ಮನಿರ್ಭರ ಭಾರತ ಎಂದು ವ್ಯಂಗ್ಯವಾಡಿದರು.

ಪ್ರಧಾನಿ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂ. ದೇಶದ ಜನರಿಗೆ ಮರಳು ಮಾಡುವ ಬೋಗಸ್‌ ಪ್ಯಾಕೇಜ್‌ ಆಗಿದ್ದು, ಇದರಿಂದ ಯಾರಿಗೂ ಅನುಕೂಲ ಆಗಲ್ಲ. ಸಾಲ ಕೊಡೊವುದಕ್ಕೆ ಪ್ಯಾಕೇಜ್‌ ಎನ್ನಬೇಕೆ ? ಕುಸಿಯುತ್ತಿರುವ ದೇಶದ ಆರ್ಥಿಕ ಸ್ಥಿತಿ ಸುಧಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ವಿರೋಧ ಪಕ್ಷವಾಗಿ ಕಾಂಗ್ರೆಸ್‌ ನೀಡಿದ್ದ ಸಲಹೆ, ಎಚ್ಚರಿಕೆಗಳನ್ನು ಸರ್ಕಾರ ಕಡೆಗಣಿಸುತ್ತ ಬಂದಿದೆ. ಸರ್ಕಾರ ಪ್ಯಾಕೇಜ್‌ ನೀಡುವ ಬದಲು ಆರ್ಥಿಕ ತಜ್ಞರ ಸಲಹೆಯಂತೆ ಆದಾಯ ತೆರಿಗೆ ವ್ಯಾಪ್ತಿಗೆ ಬರದ 15-20 ಕೋಟಿ ಜನರ ಖಾತೆಗೆ ನೇರವಾಗಿ 10 ಸಾವಿರ ರೂ. ಪರಿಹಾರ ಜಮೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 6 ವರ್ಷ ಪೂರ್ಣಗೊಂಡಿದೆ. ಆದರೆ ಸಾಧನೆ ಮಾತ್ರ ಶೂನ್ಯವಾಗಿದೆ. ಮೋದಿ ಹೇಳಿದಂಥ ಒಳ್ಳೆಯ ದಿನಗಳು ಬರಲೇ ಇಲ್ಲ. ಜನರ ಬದುಕಿನಲ್ಲಿ ಬದಲಾವಣೆ, ಆರ್ಥಿಕ ಪ್ರಗತಿ, ಉದ್ಯೋಗ ಸೃಷ್ಟಿ ಕಾಣಿಸಲೇ ಇಲ್ಲ. ಭಾರತ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಹೋಗಿದ್ದು, ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿಗಳಿಂದ ಎಚ್ಚೆತ್ತುಕೊಳ್ಳದಿದ್ದರೆ ಕಾಂಗ್ರೆಸ್‌ಗೆ ಹೋರಾಟ ನಡೆಸುವುದು ಅನಿವಾರ್ಯ ಆಗಲಿದೆ ಎಂದು ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದರು.ಶಾಸಕರಾದ ರಾಜಶೇಖರ ಪಾಟೀಲ, ಡಾ| ಚಂದ್ರಶೇಖರ ಪಾಟೀಲ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಆನಂದ ದೇವಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ಭಾಲ್ಕಿ ಕ್ಷೇತ್ರದಲ್ಲಿ ವಸತಿ ಯೋಜನೆಯಡಿ ಮನೆಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜಿಲ್ಲಾಧಿಕಾರಿಗಳು ಶೋಕಾಸ್‌ ನೋಟಿಸ್‌
ಹೊರಡಿಸುವ ಮೂಲಕ ಶಾಸಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಹಕ್ಕು ಚ್ಯುತಿ ಮಂಡಿಸಲು ಸ್ಪೀಕರ್‌ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ಸಲ್ಲಿಸಿದ್ದೇನೆ.
ಈಶ್ವರ ಖಂಡ್ರೆ,
ಶಾಸಕರು, ಭಾಲ್ಕಿ

ಟಾಪ್ ನ್ಯೂಸ್

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.