ಶಾಸಕ ಈಶ್ವರ ಖಂಡ್ರೆ ರಾಜೀನಾಮೆ ನೀಡಲಿ

ಫ‌ಲಾನುಭವಿಗಳ ಆಯ್ಕೆಯಲ್ಲಿ ಅವ್ಯವಹಾರ ಸಾಬೀತು: ಸಂಸದ ಖೂಬಾ

Team Udayavani, May 10, 2020, 1:37 PM IST

10-May-14

ಬೀದರ: ಭಾಲ್ಕಿ ತಾಲೂಕಿನಲ್ಲಿ ವಸತಿ ಯೋಜನೆಯಡಿ ಮಂಜೂರಾದ ಮನೆಗಳಿಗೆ ಫಲಾನುಭವಿಗಳ ಆಯ್ಕೆಯಲ್ಲಿ ಅವ್ಯವಹಾರ ಆಗಿರುವುದು ರಾಜೀವ ಗಾಂಧಿ ವಸತಿ ನಿಗಮದ ತನಿಖಾ ವರದಿಯಿಂದ ಸಾಬೀತಾಗಿದೆ. ಅವ್ಯವಹಾರ ನಡೆದಿದ್ದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದ ಶಾಸಕ ಈಶ್ವರ ಖಂಡ್ರೆ ನುಡಿದಂತೆ ನಡೆಯಲಿ ಎಂದು ಸಂಸದ ಭಗವಂತ ಖೂಬಾ ಆಗ್ರಹಿಸಿದರು.

2015-16, 2017-18ರಲ್ಲಿ ತಾಲೂಕಿಗೆ ಮಂಜೂರಾದ 17 ಸಾವಿರ ಚಿಲ್ಲರೆ ಮನೆಗಳ ಪೈಕಿ 9710 ಮನೆಗಳ ಫಲಾನುಭವಿಗಳ (ನಗರ-ಗ್ರಾಮೀಣ) ಆಯ್ಕೆಯಲ್ಲಿ ಬೊಗಸ್‌ ಆಗಿದೆ. ಅವ್ಯವಹಾರದ ದೂರಿನ ಮೇರೆಗೆ ವಸತಿ ಖಾತೆ ಸಚಿವರು ವಸತಿ ನಿಗಮದಿಂದ ತನಿಖೆ ನಡೆಸಿದ್ದಾರೆ. ಈಗ ಅಕ್ರಮ ಆಗಿರುವುದು ತನಿಖಾ ವರದಿಯಲ್ಲಿ ಉಲ್ಲೇಖೀತವಾಗಿದೆ. 91 ಕೋಟಿ ರೂ. ಮೊತ್ತದ 9710 ಮನೆಗಳ ಆಯ್ಕೆಯಲ್ಲಿ ಅವ್ಯವಹಾರ ನಡೆದಿದೆ. ಇದಕ್ಕೆ ಕ್ಷೇತ್ರದ ಶಾಸಕ ಖಂಡ್ರೆ ನೇರ ಹೊಣೆಗಾರರು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮನೆ ನೀಡುವುದು ಹಾಗೂ ಫಲಾನುಭವಿಗಳ ಆಯ್ಕೆ ಮಾಡುವ ಅಧಿಕಾರ ಗ್ರಾಪಂಗೆ ಇದೆ. ಆದರೆ, ಭಾಲ್ಕಿಯಲ್ಲಿ ಇಡೀ ತಾಲೂಕಿನ ಫಲಾನುಭವಿಗಳ ಆಯ್ಕೆಯನ್ನು ಶಾಸಕ ಖಂಡ್ರೆ ಮಾಡಿದ್ದಾರೆ. ಮನೆ ಹಂಚಿಕೆ ಮಂಜೂರಾತಿ ಪತ್ರ, ಫಲಾನುಭವಿಗಳ ಪಟ್ಟಿಯನ್ನು ಶಾಸಕರ ಮನೆಯಲ್ಲಿನ ಕಂಪ್ಯೂಟರ್‌ನಲ್ಲಿ ಸಿದ್ಧಪಡಿಸಿ ಖಂಡ್ರೆ ಅವರೇ ಸ್ವತಃ ಸಹಿ ಮಾಡಿ ಜನರಿಗೆ ನೀಡಿದ್ದಾರೆ. ಖಂಡ್ರೆ ಅವರ ಕಾರ್‌ ಡ್ರೈವರ್‌, ಅವರ ಪಿಎ ಅವರು ಒಂದೊಂದು ದಿನ 900 ಮನೆಗಳ ಜಿಪಿಎಸ್‌ ಮಾಡಿದ್ದಾರೆ. ಆ ಮೂಲಕ ಶಾಸಕರು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಶಾಸಕ ಈಶ್ವರ ಖಂಡ್ರೆ ನುಡಿದಂತೆ ನಡೆಯುವವರು. ಹೀಗಾಗಿ, ಮನೆ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದ್ದರೆ ರಾಜೀನಾಮೆ ನೀಡಿ ರಾಜಕೀಯ ಜೀವನದಿಂದ ದೂರ ಇರುವುದಾಗಿ ತಿಳಿಸಿದ್ದರು. ಇದೀಗ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದು ಸಾಬೀತಾಗಿದೆ. ಹಾಗಾಗಿ ನುಡಿದಂತೆ ನಡೆದು ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಿಂದ ದೂರ ಇರಬೇಕು. ರಾಜೀನಾಮೆ ನೀಡದೇ ಭಂಡತನ ತೋರಿದರೆ, ಸದನದೊಳಗೆ ಸಚಿವ ಚವ್ಹಾಣ, ಪರಿಷತ್ತಿನಲ್ಲಿ ರಘುನಾಥ ಮಲ್ಕಾಪುರೆ, ಹೊರಗಡೆ ನಾನು, ಪಕ್ಷ ಹಾಗೂ ಸಂಘ- ಸಂಸ್ಥೆಗಳ ನೆರವಿನಿಂದ ಸಂಘರ್ಷಕ್ಕಿಳಿಯುವೆ ಎಂದು ಎಚ್ಚರಿಸಿದರು.  ಎಂಎಲ್‌ಸಿ ರಘುನಾಥ ಮಲ್ಕಾಪುರೆ, ಬಿಜೆಪಿ ಮುಖಂಡ ಡಿ.ಕೆ. ಸಿದ್ರಾಮ ಸುದ್ದಿಗೋಷ್ಠಿಯಲ್ಲಿದ್ದರು.

91 ಕೋಟಿ ರೂ. ಖಂಡ್ರೆ ಭರಿಸಲಿ ವಸತಿ ಯೋಜನೆಯಡಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಿಪಂ ಸಿಇಒ ತಾಪಂ ಇಒ ಅವರನ್ನು ಅಮಾನತುಗೊಳಿಸಿದ್ದಾರೆ. ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿಯಾಗಿದೆ. ಇಡೀ ಅವ್ಯವಹಾರದ ಸಂಪೂರ್ಣ ಜವಾಬ್ದಾರಿಯನ್ನು ಶಾಸಕ ಖಂಡ್ರೆ ಹೊರಬೇಕು ಮತ್ತು ಸರ್ಕಾರ ಬೊಕ್ಕಸಕ್ಕೆ ಆಗಿರುವ 91 ಕೋಟಿ ರೂ. ಹಾನಿಯನ್ನು ಸ್ವಂತ ಹಣದಿಂದ ಭರಿಸಬೇಕು. ಅಧಿಕಾರಿಗಳು ತಪ್ಪು ಮಾಡದೇ ಇದ್ದರೆ, ಅಂತಹವರನ್ನು ಉಳಿಸುವ ಕೆಲಸವನ್ನು ಖಂಡ್ರೆ ಮಾಡಲಿ.
ಭಗವಂತ ಖೂಬಾ,
ಸಂಸದರು

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.