ಹೊರಗಿನವರ ಮೇಲೆ ನಿಗಾ
ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ |ಮುತುವರ್ಜಿ ವಹಿಸಿ ಕೆಲಸ ಮಾಡಿ
Team Udayavani, Apr 13, 2020, 12:25 PM IST
ಬೀದರ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಧಿಕಾರಿ ಡಾ| ಎಚ್.ಆ ರ್. ಮಹಾದೇವ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಬೀದರ: ಬಾಂಬೆ ಕಡೆಯಿಂದ ಯಾರೇ ಬಂದರೂ ಪ್ರವೇಶ ಕೊಡಬೇಡಿ. ಕೋವಿಡ್ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಹೊರಗಿನಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್. ಆರ್. ಮಹಾದೇವ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ನಿಯಮ ಉಲ್ಲಂಘಿಸಿ, ಅನ್ಯ ಮಾರ್ಗದಿಂದ ಜಿಲ್ಲೆಯ ಹಳ್ಳಿಗಳಿಗೆ ವಿದೇಶ ಮತ್ತು ಹೊರ ರಾಜ್ಯದಿಂದ ಬಂದಿರುವವರು ಎಷ್ಟು ಜನ? ಎಂಬುದನ್ನು ಗುರುತಿಸಿ ಅವರಿಗೆ ಕೂಡಲೇ ಕ್ವಾರಂಟೈನ್ ಮಾಡಿ, 15 ದಿನಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾವಹಿಸಬೇಕು. ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಸೇರಿದಂತೆ ಗ್ರಾಮ ಮಟ್ಟದ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಮನ್ನಾಏಖೆಳ್ಳಿಯಲ್ಲಿ ಈಗಿನ ಪರಿಸ್ಥಿತಿ ಏನಿದೆ ಎಂಬುದರ ಬಗ್ಗೆ ಸಂವಾದದಲ್ಲಿ ಚರ್ಚೆ ನಡೆಯಿತು. ಮನ್ನಾಏಖೆಳ್ಳಿಯಲ್ಲಿ ಜನರಿಗೆ ನಿಯಮಾನುಸಾರ ಕಿರಾಣಿ, ತರಕಾರಿ, ಹಣ್ಣು, ಹಾಲು ತಲುಪಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು. ಎರಡನೇ ಸಂಪರ್ಕದಲ್ಲಿ ಇರುವವರಿಗೆ ಮನ್ನಾಎಖೆಳ್ಳಿಯ ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ 44 ಮರಕುಂದದ ಜನರಿಗೆ, 14 ಬೆಮಳಖೇಡದ ಜನರಿಗೆ ಮತ್ತು 54 ಮನ್ನಾಎಖೆಳ್ಳಿ ಜನರಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ಹುಮನಾಬಾದ್ ತಹಶೀಲ್ದಾರ್ ತಿಳಿಸಿದರು. ಎರಡನೇ ಸಂಪರ್ಕದಲ್ಲಿ ಇರುವವರಿಗೆ ಹೋಮ್ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲು ಡಿಸಿ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.