ಬೀದರ:ಭೂರಮೆಗೆ ಚರಗ ಚೆಲ್ಲಿ ರೈತರ ಪ್ರಾರ್ಥನೆ

ಎಳ್ಳಅಮವಾಸ್ಯೆ ಹಬ್ಬ ಗ್ರಾಮೀಣ ಭಾಗದ ಸೊಗಡನ್ನು ಇಂದಿಗೂ ಜೀವಂತವಾಗಿಡುತ್ತಿದೆ.

Team Udayavani, Jan 13, 2021, 5:16 PM IST

ಬೀದರ:ಭೂರಮೆಗೆ ಚರಗ ಚೆಲ್ಲಿ ರೈತರ ಪ್ರಾರ್ಥನೆ

Representative Image

ಬೀದರ: ತಲೆ ಮೇಲೆ ಭಕ್ಷ್ಯ ಭೋಜನದ ಬುಟ್ಟಿ ಹೊತ್ತು ಹೊಲದತ್ತ ಹೆಜ್ಜೆ ಹಾಕಿದ ರೈತ ಕುಟುಂಬಗಳು… “ಓಲಗ್ಯಾ ಓಲಗ್ಯಾ ಚಲ್ಲಂ ಪೋಲಗ್ಯಾ? ಎಂದು ಕೂಗುತ್ತ ಭೂರಮೆಗೆ ಚರಗ ಚೆಲ್ಲಿ ಭೂತಾಯಿಗೆ  ಪ್ರಾರ್ಥಿಸಿದ ಅನ್ನದಾತರು… ಬಂಧು-ಬಳಗ- ಸ್ನೇಹಿತರಿಗೆ ದಾಸೋಹ ಸೇವೆ ಮಾಡಿದ ನೇಗಿಲ ಯೋಗಿಗಳು…!

ಇದು ಜಿಲ್ಲೆಯ ವಿವಿಧೆಡೆ ಮಂಗಳವಾರ ಎಳ್ಳಮಾವಾಸ್ಯೆ ಹಿನ್ನೆಲೆ ಕಂಡು ಬಂದ ದೃಶ್ಯ. ಹೆಮ್ಮಾರಿ ಕೊರೊನಾ ಮತ್ತು ಪ್ರಕೃತಿ ವಿಕೋಪದ ಹೊಡೆತದಿಂದ ಅನ್ನದಾತರು ಆರ್ಥಿಕವಾಗಿ ತತ್ತರಿಸಿದ್ದರು. ಸುಗ್ಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಜಾತಿ, ಮತ ಎಂಬ ಭೇದ-ಭಾವ ಎನ್ನದೇ ಎಲ್ಲೆಡೆ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿತ್ತು..

ಎಳ್ಳಮಾವಾಸ್ಯ ಹಬ್ಬ ಭೂತಾಯಿಯ ಆರಾಧನೆ ಪ್ರತೀಕವಾಗಿದೆ. ಪ್ರತಿ ಹಬ್ಬಗಳನ್ನು ಮನೆಯಲ್ಲಿ ಸಿಹಿ ಭಕ್ಷ್ಯಗಳನ್ನು ಸಿದ್ಧಪಡಿಸಿ ಸವಿದು, ಆಚರಿಸಿದರೆ ಎಳ್ಳ ಅಮಾವಾಸ್ಯೆ ದಿನದಂದು ಮಾತ್ರ ಹೊಲದಲ್ಲಿ ಆಚರಿಸುವುದು ಈ ಹಬ್ಬದ ವಿಶೇಷ. ಎಳ್ಳ ಅಮವಾಸ್ಯೆ ಹಬ್ಬ ಗ್ರಾಮೀಣ ಭಾಗದ ಸೊಗಡನ್ನು ಇಂದಿಗೂ
ಜೀವಂತವಾಗಿಡುತ್ತಿದೆ.

ಮನೆಯಲ್ಲಿ ತಯಾರಿಸಿದ ಅಡುಗೆಯನ್ನು ಬೆಳಗ್ಗೆ ಬುಟ್ಟಿಯಲ್ಲಿ ತುಂಬಿಕೊಂಡು ರೈತರು ಹೊಲಗಳಿಗೆ ಬಂದು, ಅಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸುವ ಗುಡಿಸಿಲು ಮತ್ತು ಪಾಂಡವರಿಗೆ ಪೂಜೆ ಸಲ್ಲಿಸಿದರು. ನಂತರ ಜೋಳದ ಹೊಲದಲ್ಲಿ ಸಮೃದ್ಧವಾಗಿ ಬೆಳೆದ ಪೈರುಗಳ ಮಧ್ಯೆ ನಿಂತು ಚರಗಾ ಚೆಲ್ಲುವ ಮೂಲಕ “ಭೂತಾಯಿಗೆ ನಮಿಸುತ್ತ ಒಳ್ಳೆಯ ಬೆಳೆ ಕೊಡಮ್ಮಾ’ ಎಂದು ಕಾಯಕ ಜೀವಿಗಳು ಪ್ರಾರ್ಥಿಸಿದರು.

ಇತರ ಹಬ್ಬಗಳಿಗಿಂತ ಎಳ್ಳ ಅಮಾವಾಸ್ಯೆ ವಿಶೇಷವಾಗಿರುವಂತೆ ಮಾಡುವ ಭಕ್ಷ್ಯ ಭೋಜನಗಳಲ್ಲೂ ಸಹ ಡಿಫರೆಂಟ್‌. ಈ ಹಬ್ಬಕ್ಕಾಗಿ ವಿವಿಧ ಕಾಳು ಮತ್ತು
ತರಕಾರಿಗಳಿಂದ ತಯಾರಿಸಿದ ಭಜ್ಜಿ ವಿಶೇಷ. ಜತೆಗೆ ಜೋಳದ ರೊಟ್ಟಿ, ಸಜ್ಜಿ ರೊಟ್ಟಿ, ಬಗೆ ಬಗೆಯ ಅನ್ನ, ಅಂಬಲಿ ಮತ್ತು ಹುಗ್ಗಿ ಸೇರಿದಂತೆ ವಿವಿಧ ಭಕ್ಷ್ಯ ಅಲ್ಲಿರುತ್ತೆ. ಬಂಧು-ಬಾಂಧವರು ಹಸಿರು ಪರಿಸರದ ಮಧ್ಯ ಊಟದ ಸವಿಯನ್ನು ಸವಿದರು. ಜಿಲ್ಲೆಯ ಕೆಲವೆಡೆ ಬುಧವಾರ ಸಹ ಹಬ್ಬವನ್ನು ಅಚರಿಸಲಾಗುತ್ತಿದ್ದು, ರೈತರು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಉದ್ಯಾನದಲ್ಲಿ ಕಿಕ್ಕಿರಿದು ಸೇರಿದ್ದ ಜನ ಇಂದಿನ ಯಾಂತ್ರಿಕಮಯ ಜೀವನದಲ್ಲಿ ಒತ್ತಡಗಳ ಮಧ್ಯೆ ಕಾಲ ಕಳೆಯುವ ನಗರ ವಾಸಿಗರು ಎಳ್ಳ ಅಮಾವಾಸ್ಯೆ ಹಬ್ಬದಂದು ತಮ್ಮ ತಮ್ಮ ಊರುಗಳಿಗೆ ಅಥವಾ ಸಂಬಂಕರ ಜಮೀನುಗಳಿಗೆ ತೆರಳುತ್ತಾರೆ. ಇನ್ನೂ ಕೆಲವರು ನಗರದ ಪ್ರಸಿದ್ಧ ದೇವಸ್ಥಾನ ಮತ್ತು ಉದ್ಯಾನವನ, ವಿಹಾರಧಾಮಕ್ಕೆ ಹೋಗಿ ಊಟ ಮಾಡಿ ಹಬ್ಬವನ್ನು ಆಚರಿಸಿದರು. ಇಂತಹ ಹಬ್ಬಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ.

ಟಾಪ್ ನ್ಯೂಸ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.