ಕ್ವಾರಂಟೈನ್ ಕೇಂದ್ರಗಳಲ್ಲಿ ಸೌಲಭ್ಯ ಕೊರತೆ ಆಗದಿರಲಿ
Team Udayavani, Jul 1, 2020, 3:51 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಜಿಲ್ಲೆಯ ವಿವಿಧೆಡೆ ಇರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ವಚ್ಛತೆ, ಶುದ್ಧತೆ ಕಾಪಾಡುವ ಜೊತೆಗೆ ಸೌಲಭ್ಯಗಳ ಕೊರತೆ ದೂರು ಬರದಂತೆ 2 ದಿನಗಳಲ್ಲಿ ಕ್ರಮ ವಹಿಸಲು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸಹಾಯಕ ಆಯುಕ್ತರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಕುಡಿಯುವ ನೀರಿಲ್ಲ, ಶೌಚಾಲಯದ ವ್ಯವಸ್ಥೆ ಸರಿಯಿಲ್ಲ ಎಂದು ಅಲ್ಲಿನ ಜನರಿಂದ ದೂರುಗಳು ಬರದ ಹಾಗೆ ಸುವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಕ್ವಾರಂಟೈನ್ ನಿಯಮಗಳ ಪಾಲನೆಗೆ ಸ್ಥಳೀಯರ ಸಹಕಾರ ಪಡೆಯಬೇಕು. ಸಾಂಸ್ಥಿಕ ಹಾಗೂ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ಮೇಲೆ ಎಫ್‌ಐಆರ್ ದಾಖಲಿಸಿ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಫೀವರ್ ಕ್ಲಿನಿಕ್‌ಗಳು ಕೂಡ ಸರಿಯಾಗಿರಬೇಕು ಎಂದು ನಿರ್ದೇಶನ ನೀಡಿದರು.
ಕೋವಿಡ್-19 ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ಮತ್ತು ಐಎಲ್‌ಐ ಮತ್ತು ಸಾರಿ ಪ್ರಕರಣಗಳನ್ನು ಪಟ್ಟಿ ಮಾಡಿ ಅವರ ಗಂಟಲು ದ್ರವದ ಮಾದರಿ ಪರೀಕ್ಷೆ ತೀವ್ರಗತಿಯಲ್ಲಿ ನಡೆಸುವಂತೆ ನೋಡಿಕೊಳ್ಳಬೇಕು ಜಿಲ್ಲಾಧಿಕಾರಿ ಸೂಚಿಸಿದರು. ಜಿಪಂ ಸಿಇಓ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಎಎಸ್‌ಪಿ ಡಾ| ಗೋಪಾಲ ಬ್ಯಾಕೋಡ್, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ಭಂವರಸಿಂಗ್ ಮೀನಾ ಹಾಗೂ ವೈದ್ಯಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.