ಕಳ್ಳಭಟ್ಟಿ ಗೆ ಮದ್ಯಪ್ರಿಯರ ಮೊರೆ!

ಜಿಲ್ಲೆಯಲ್ಲಿ ಹೆಚ್ಚಿದ ಅಕ್ರಮ ದಂಧೆ | 9.40 ಲಕ್ಷ ಮೌಲ್ಯದ ಸೊತ್ತು ವಶಕ್ಕೆ

Team Udayavani, Apr 12, 2020, 12:13 PM IST

12-April-7

ಬೀದರ: ಜಿಲ್ಲೆಯಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿ ನಾಶಪಡಿಸಿದರು.

ಬೀದರ: ಲಾಕ್‌ಡೌನ್‌ದಿಂದ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ವ್ಯಸನಿಗಳಿಗೆ ನುಂಗಲಾರದ ತುತ್ತಾಗಿದೆ. ಇದರ ಪರಿಣಾಮ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಳ ಮತ್ತು ಕಳ್ಳಭಟ್ಟಿ ದಂಧೆ ತಲೆ ಎತ್ತಿದ್ದು, ಇದಕ್ಕೆ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಅಬಕಾರಿ ದಾಳಿ ಪ್ರಕರಣಗಳೇ ಸಾಕ್ಷಿ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ರಾಜ್ಯಾದ್ಯಂತ ಲಾಕ್‌ಡೌನ್‌ ಘೋಷಿಸಿದ ಬಳಿಕ ಮದ್ಯ ಮಾರಾಟಕ್ಕೆ ನಿಷೇಧದಿಂದ ಎಲ್ಲ ಸಾರಾಯಿ ಅಂಗಡಿಗಳು ಬಾಗಿಲು ಹಾಕಿದ್ದು, ವ್ಯಸನಿಗಳು ಮದ್ಯಕ್ಕೆ ಚಡಪಡಿಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಿಡಿಗೇಡಿಗಳು ಜನರ ಪ್ರಾಣಕ್ಕೆ ಕುತ್ತು ತರುವಂತಹ ಕಳಪೆ ದರ್ಜೆಯ ಅಕ್ರಮ ಮದ್ಯ ತಯಾರಿಕೆ, ಮಾರಾಟವನ್ನು ನಿರಾತಂಕವಾಗಿ ಮಾಡುತ್ತಿದ್ದಾರೆ. ಈ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಸಾಕಷ್ಟು ಪ್ರಯತ್ನಿಸಿದರೂ ಅಕ್ರಮ ಚಟುವಟಿಕೆ ಎಗ್ಗಿಲ್ಲದೇ ನಡೆಯುತ್ತಿದೆ.

225 ಅಬಕಾರಿ ದಾಳಿ: ಲಾಕ್‌ಡೌನ್‌ಗೂ ಮುನ್ನ ಜಿಲ್ಲೆಯಲ್ಲಿ ನಿಯಂತ್ರಣದಲ್ಲಿದ್ದ ಅಕ್ರಮ ಕಳ್ಳಭಟ್ಟಿ ದಂಧೆ ಈಗ ರಾಜಾರೋಷವಾಗಿ ನಡೆಯುತ್ತಿದೆ. ಬೀದರ ಮಹಾರಾಷ್ಟ್ರ ಮತ್ತು ತೆಲಂಗಾಣ ಗಡಿ ಜಿಲ್ಲೆಯಾಗಿರುವುದರಿಂದ ದಂಧೆ ಹೆಚ್ಚಿದ್ದು, ಲಾಕ್‌ಡೌನ್‌ ಬಳಿಕ ಈವರೆಗೆ ಜಿಲ್ಲೆಯಲ್ಲಿ ಸುಮಾರು 225 ಅಬಕಾರಿ ದಾಳಿಗಳನ್ನು ನಡೆಸಿರುವ ಅಬಕಾರಿ ಪೊಲೀಸರು 21 ಪ್ರಕರಣಗಳು ದಾಖಲಿಸಿಕೊಂಡು ಐದು ಜನ ಆರೋಪಿಗಳನ್ನು ಬಂ ಧಿಸಿದ್ದಾರೆ. 1170 ಲೀ. ಬೀಯರ್‌, 1072 ಲೀ. ವಿಸ್ಕಿ, 41 ಲೀ. ಕಳ್ಳಭಟ್ಟಿ, 240 ಲೀ. ಸೇಂದಿ ಮತ್ತು 7 ವಾಹನ ಸೇರಿ 9.40 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಎರಡ್ಮೂರು ಪಟ್ಟು ದರ ಹೆಚ್ಚಳ: ಕೊರೊನಾ ಸೋಂಕು ವ್ಯಾಪಿಸದಂತೆ ಸರ್ಕಾರ ಲಾಕ್‌ ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಮನೆಯಿಂದ ಹೊರಗೆ ಬರದೇ ಸಹಕಾರ ನೀಡುತ್ತಿದ್ದಾರೆ. ಜತೆಗೆ ಮದ್ಯದ ಅಂಗಡಿಗಳನ್ನೂ ಬಂದ್‌ ಮಾಡಿರುವುದರಿಂದ ಜನ ಕಳ್ಳಭಟ್ಟಿಗೆ ಮೊರೆ ಹೋಗಿದ್ದಾರೆ.

ದಾಬಾ, ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಜನ ಎರಡ್ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತಮ್ಮ ನಶೆ ಏರಿಸಿಕೊಳ್ಳುತ್ತಿದ್ದಾರೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಹಾಗೂ ಮಾರಾಟ ತಡೆಗೆ ಅಬಕಾರಿ ಇಲಾಖೆ 7 ತಂಡ ರಚಿಸಿದೆ. ದೂರು ಮತ್ತು ಮಾಹಿತಿ ಆಧಾರದ ಮೇಲೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ದಾಳಿ ನಡೆಸಿ ಚಟುವಟಕೆ ನಡೆಯದಂತೆ ಕ್ರಮ ವಹಿಸಿದೆ. ದಾಳಿ, ಹಗಲು ರಾತ್ರಿ ಗಸ್ತು, ವಾಹನ ತಪಾಸಣೆ ನಡೆಸಿ ಅಬಕಾರಿ ಸ್ವತ್ತುಗಳನ್ನು ವಶಪಡಿಸಿಕೊಂಡಿದೆ. ಕಳ್ಳಭಟ್ಟಿ ತಯಾರಿಕೆಗೆ ಬಳಸುವ ಕಚ್ಚಾ ಪದಾರ್ಥ ಮಾರದಂತೆ ಕಿರಾಣಿ ವ್ಯಾಪಾರಿಗಳಿಗೂ ಸೂಚನೆ ನೀಡಲಾಗುತ್ತಿದೆ.

ಲಾಕ್‌ಡೌನ್‌ದಿಂದಾಗಿ ಮದ್ಯ ಮಾರಾಟ ನಿಷೇಧ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯ 165 ಮದ್ಯದಂಗಡಿ ಬಂದ್‌ ಮಾಡಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳಲು ಕೆಲವರು ಅಕ್ರಮ ದಂಧೆಗೆ ಇಳಿದಿದ್ದು, ನಿಯಂತ್ರಣಕ್ಕೆ ಅಬಕಾರಿ ಇಲಾಖೆ ಕ್ರಮ ವಹಿಸಿದೆ. ಅಕ್ರಮ ಸಾರಾಯಿ ಮಾರಾಟದಾರರ ಬಂಧನ, ಕಳ್ಳಭಟ್ಟಿ ಅಡ್ಡೆಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವೀರಣ್ಣಾ ಬಾಗೇವಾಡಿ,
ಡಿಸಿ, ಅಬಕಾರಿ ಇಲಾಖೆ, ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.