ಬಿಜೆಪಿ ಅಧಿಕಾರಕ್ಕೆ ಬಂದರೆ ಲೂಟಿ ಮಾಡಿದ ಸಂಪತ್ತು ಜಪ್ತಿ: ಯೋಗಿ

Team Udayavani, May 8, 2018, 6:40 AM IST

Yogi-Adityanath–800.jpg

ಬೀದರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಪಾಲಿಗೆ ಎಟಿಎಂ ಇದ್ದಂತೆ. ಕರ್ನಾಟಕದಲ್ಲಿ ಲೂಟಿ ಬಿಟ್ಟರೆ ಬೇರಾವ ಕೆಲಸ ಆಗುತ್ತಿಲ್ಲ. ಸಾರ್ವಜನಿಕರ ತೆರಿಗೆ ಹಣ ಅಭಿವೃದ್ಧಿ ಕಾರ್ಯಕ್ಕೆ ಬಳಕೆಯಾಗದೇ ಇಲ್ಲಿನ ಕೆಲ ಕಾಂಗ್ರೆಸ್‌ ನಾಯಕರ ಜೇಬು ಸೇರುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಗಂಭೀರ ಆರೋಪ ಮಾಡಿದರು.

ಭಾಲ್ಕಿಯಲ್ಲಿ ಬಿಜೆಪಿ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಭಾಷಣದುದ್ದಕ್ಕೂ ಕಾಂಗ್ರೆಸ್‌ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್‌ ಸರಕಾರದ ದುರಾಡಳಿತದಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ. ಬಡವರಿಗೆ ಆಸರೆಯಾಗಬೇಕಾದ ಮನೆಗಳನ್ನೂ ಸಹ ಕಾಂಗ್ರೆಸ್‌ ನಾಯಕರು ಬಿಡುತ್ತಿಲ್ಲ. ಬಿಜೆಪಿ ಸರಕಾರ ಅ ಧಿಕಾರಕ್ಕೆ ಬಂದರೆ ಲೂಟಿ ಮಾಡಿರುವ ಸಂಪತ್ತನ್ನು ಜಪ್ತಿ ಮಾಡಿ ಜನರ ಕಲ್ಯಾಣಕ್ಕೆ ಬಳಸಿಕೊಳ್ಳಲಾಗುವುದು ಎಂದರು.

ಸಿದ್ದರಾಮಯ್ಯ ಅವರ ದುರಾಡಳಿತ ದಿಂದಾಗಿ ಕರ್ನಾಟಕದ ಜನ ಕಷ್ಟದಲ್ಲಿ ಸಿಲುಕಿದ್ದಾರೆ. ದೇಶದಲ್ಲಿ ಎಲ್ಲಕ್ಕೂ ಹೆಚ್ಚು ರೈತರ ಆತ್ಮಹತ್ಯೆ ನಡೆದಿರುವುದು ಕರ್ನಾಟಕದಲ್ಲಿ. ಆದರೆ “ನೋಟು’ ಮೇಲೆ ಗಮನ ಇಟ್ಟಿರುವ ಸಿದ್ದರಾಮಯ್ಯ ಅವರಿಗೆ ಇದಾವುದೂ ಕಾಣುತ್ತಿಲ್ಲ. ಇಂಥವರು ಯಾವುದೇ ಕಾರಣಕ್ಕೂ ಅಧಿ ಕಾರದಲ್ಲಿ ಇರಬಾರದು. ಅಭಿವೃದ್ಧಿಯ ಹಣದ ಲೂಟಿ ನಿಲ್ಲಬೇಕಾದರೆ ಕರ್ನಾಟಕ ಕಾಂಗ್ರೆಸ್‌ ಮುಕ್ತವಾಗಬೇಕು. ಭ್ರಷ್ಟಾಚಾರ, ಅವ್ಯವಸ್ಥೆ, ಅಶಾಂತಿ ಹೆಚ್ಚಿರುವ ಕರ್ನಾಟಕವನ್ನು ರಾಮರಾಜ್ಯವನ್ನಾಗಿ ಮಾಡಲು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದರು.

ನಾನು ಉತ್ತರ ಪ್ರದೇಶದಿಂದ ಕರ್ನಾಟಕಕ್ಕೆ ಬಂದಿದ್ದೇನೆ. ಉತ್ತರ ಪ್ರದೇಶ ಶ್ರೀರಾಮನ ಜನ್ಮಸ್ಥಳ. ಕರ್ನಾಟಕ ಹನುಮನ ಹುಟ್ಟೂರು. ರಾಮರಾಜ್ಯ ನಿರ್ಮಾಣದಲ್ಲಿ ಶ್ರೀರಾಮಚಂದ್ರನಿಗೆ ಬೆಂಬಲವಾಗಿ ನಿಂತವರು ರಾಮಭಕ್ತ ಹನುಮಾನ್‌. ಈ ಚುನಾವಣೆಯಲ್ಲಿ ಕರ್ನಾಟಕವನ್ನು ಕಾಂಗ್ರೆಸ್‌ ಮುಕ್ತ ಮಾಡುವ ಮೂಲಕ ಬಿಜೆಪಿಯನ್ನು ಬೆಂಬಲಿಸಿ ರಾಮರಾಜ್ಯದ ಕನಸು ಸಾಕಾರಗೊಳಿಸಬೇಕಿದೆ ಎಂದರು.

ಛತ್ರಪತಿ ಶಿವಾಜಿ ರಾಷ್ಟ್ರಭಕ್ತಿಯ ಪ್ರತೀಕರಾಗಿದ್ದು, ಪ್ರತಿಯೊಬ್ಬ ಭಾರತೀಯನಿಗೆ ಅವರ ಬಗ್ಗೆ ಗೌರವ ಭಾವನೆ ಇದೆ. ಆದರೆ, ಇಲ್ಲಿನ ಕಾಂಗ್ರೆಸ್‌ ಸರಕಾರ ಶಿವಾಜಿ ಜಯಂತಿಗೆ ವಿರೋ ಧಿಸುತ್ತದೆ. ಆದರೆ ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸುತ್ತದೆ. ಆ ಮೂಲಕ ರಾಷ್ಟ್ರಕ್ಕೆ ಅವಮಾನ ಮಾಡಿದೆ. ಎಸ್‌ಸಿ, ಎಸ್‌ಟಿ  ಸಮುದಾಯುದವರಿಗೆ ಬಿಜೆಪಿ ಸರಕಾರ ಸಮ್ಮಾನ ನೀಡಿದೆ ಹೊರತು ಅವರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರಿಗೆ ಯಾರಾದರೂ ಸಮ್ಮಾನ ನೀಡಿದ್ದರೆ ಅದು ಬಿಜೆಪಿ ಹೊರತು, ಸಂಸದರಾಗಿ ಆಯ್ಕೆ ಮಾಡದ ಮತ್ತು ಭಾರತ ರತ್ನ ಕೊಡಲು ಹಿಂದೇಟು ಹಾಕಿದ ಕಾಂಗ್ರೆಸ್‌ ಅಲ್ಲ ಎಂದರು.

ಕರ್ನಾಟಕಕ್ಕೆ ಯೋಗಿ ಯಾಕಾದರೂ ಬರುತ್ತಾರೆ ಎಂದು ಸಿಎಂ ಸಿದ್ಧರಾಮಯ್ಯಗೆ ನಿದ್ದೆ ಬರುವುದಿಲ್ಲ. ಆದರೆ ನಾನು ನನ್ನ ರಾಜ್ಯದಲ್ಲಿ ಮಾಡಿರುವ ಕೆಲಸಗಳನ್ನು ಹೇಳಲು ಬರುತ್ತೇನೆ. ಆಡಳಿತಕ್ಕೆ ಬಂದ ಒಂದೇ ವರ್ಷದಲ್ಲಿ 86 ಲಕ್ಷ ರೈತರ ತಲಾ ಒಂದು ಲಕ್ಷ ರೂ. ಸಾಲ ಮನ್ನಾ ಮಾಡಿದ್ದೇನೆ. ಇದು ಇಲ್ಲಿನ ಸಿಎಂಗೆ ಏಕೆ ಸಾಧ್ಯವಾಗಲಿಲ್ಲ. ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ತಡೆದು, ಆ ಹಣವನ್ನು ರೈತರಿಗೆ ಹಂಚುತ್ತಿದ್ದೇನೆ. ಪ್ರವಾಹದಿಂದ ಪೀಡಿತ ಕುಟುಂಬಗಳಿಗೆ ಕೇವಲ 24 ಗಂಟೆಗಳಲ್ಲಿ ಸವಲತ್ತುಗಳನ್ನು ಒದಗಿಸಿದ್ದೇನೆ. ಆದರೆ ಕರ್ನಾಟಕದಲ್ಲಿ ಜನರ ಅಭಿವೃದ್ಧಿಗಾಗಿ ಬಂದ ಹಣ ಲೂಟಿ ಆಗುತ್ತಿದೆ. ರೈತರ ಕಣ್ಣೀರು ಒರೆಸುವ ಬದಲು ಅವರ ಕಲ್ಯಾಣಕ್ಕೆ ಬಿಡುಗಡೆಯಾದ ಹಣವನ್ನೂ ಕೊಳ್ಳೆ ಹೊಡೆಯಲಾಗಿದೆ.
– ಯೋಗಿ ಆದಿತ್ಯನಾಥ, 

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.