BJP ಲಿಂಗಾಯತರನ್ನು ಕಡೆಗಣಿಸಿಲ್ಲ: Minister Bhagwant Khuba
Team Udayavani, Apr 18, 2023, 6:40 AM IST
ಬೀದರ: ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ, ಅಗೌರವಿಸುತ್ತಿದೆ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸುವ ರಣದೀಪ್ ಸುಜೇìವಾಲಾ ಹೇಳಿಕೆ ಖಂಡನೀಯ.
ಸಿದ್ದರಾಮಯ್ಯ ಆಡಳಿತದಲ್ಲಿ ನಡೆದ ರೈತರ ಆತ್ಮಹತ್ಯೆಗಳು ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆಗಳ ಬಗ್ಗೆ ಮೊದಲು ಮಾತನಾಡಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು ನೀಡಿದ್ದಾರೆ.
ಲಿಂಗಾಯತ ಹಾಗೂ ಸಮಾಜದ ಎಲ್ಲಾ ಜಾತಿ ಜನಾಂಗದವರನ್ನು ಗೌರವಿಸಿ, ಅವರಿಗೆ ಸಾಮಾಜಿಕ ನ್ಯಾಯ ನೀಡುವ ಕೆಲಸ ನಮ್ಮ ಡಬಲ್ ಎಂಜಿನ್ ಸರ್ಕಾರದಿಂದಾಗಿದೆ. ಕಾಂಗ್ರೆಸ್ ಕೇವಲ ಎಸ್‌ಡಿಪಿಐ ಹಾಗೂ ಪಿಎಫ್‌ಐನಂತಹ ಆತಂಕವಾದಿ ಸಂಘಟನೆಗಳನ್ನು ಸಾಕಿ ಸಲುಹಿದೆ. ಯಡಿಯೂರಪ್ಪ ಬಿಜೆಪಿಯ ಪಕ್ಷಾತೀತ ನಾಯಕ. ಅವರು ಎಂದೆಂದೂ ನಮ್ಮ ನಾಯಕರೇ ಆಗಿದ್ದಾರೆ. ಹಾಗೆ ನಮ್ಮ ಪಕ್ಷದಲ್ಲಿ ನಮ್ಮದೇ ಸಿದ್ಧಾಂತವಿದೆ, ಕಾರ್ಯವೈಖರಿಯಿದೆ. ಯಾವುದೇ ಹುದ್ದೆ ಪಡೆಯದೆ, ಜವಾಬ್ದಾರಿ ತೆಗೆದುಕೊಳ್ಳದೆ ಇದ್ದವರಿಗೂ ನೇರವಾಗಿ ಪ್ರಧಾನಿ ಅಭ್ಯರ್ಥಿ ಮಾಡಲು ನಮ್ಮ ಪಕ್ಷ ಕಾಂಗ್ರೆಸ್ ಅಲ್ಲ. ಮೀಸಲಾತಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆಯಿಲ್ಲ. ಪರಿಶಿಷ್ಟರ ದಶಕಗಳ ಕನಸನ್ನು ಬಿಜೆಪಿ ಸರ್ಕಾರ ನನಸು ಮಾಡಿದೆ. ಹಾಗೆ ಲಿಂಗಾಯತರು ಮತ್ತು ಒಕ್ಕಲಿಗರಿಗೂ ನ್ಯಾಯ ನೀಡಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.