ಜನಾಶೀರ್ವಾದ ನಂತರ ಶುರುವಾಯ್ತು ರಾಜೀನಾಮೆ ಪರ್ವ!
50ಕ್ಕೂ ಅಧಿಕ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಜಿಲ್ಲಾಧ್ಯಕ್ಷರ ಜೊತೆಗೆ ಪದಾಧಿಕಾರಿಗಳ ಮಾತುಕತೆ
Team Udayavani, Sep 5, 2021, 4:12 PM IST
ಹುಮನಾಬಾದ: ಪಟ್ಟಣದಲ್ಲಿ ಶುಕ್ರವಾರ ಬಿಜೆಪಿಯಿಂದ ನಡೆದ ಜನಾಶೀರ್ವಾದ ಕಾರ್ಯಕ್ರಮದ ನಂತರ ಬಿಜೆಪಿಯ 50ಕ್ಕೂ ಅಧಿಕ
ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಧ್ವನಿ ಹೊರಹಾಕಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಡಾ|ಸಿದ್ದಲಿಂಗಪ್ಪಾ ಪಾಟೀಲ ಪರಿವಾರದವರು ಪಕ್ಷದ
ಸಿದ್ದಾಂತಗಳ ವಿರುದ್ಧಕೆಲಸ ಮಾಡುತ್ತಿದ್ದಾರೆ ಎಂದು ಕೆಲ ಕಾರ್ಯಕರ್ತರು, ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ಶ್ರಮಿಸಿದ್ದಾರೆ. ಆದರೆ, ಅದು ಒಂದು ಕುಟುಂಬ ಆಯೋಜಿಸಿದ್ದ ಯಾತ್ರೆ ಎಂಬಂತೆ ಬಿಂಬಿಸಲಾಗಿತ್ತು. ಅಲ್ಲದೆ ವಿವಿಧ ಗ್ರಾಮಗಳಲ್ಲಿ ಪಕ್ಷದ ಹೆಸರಲ್ಲಿ ಕಾರ್ಯಕ್ರಮ ನಡೆಸುತ್ತಿದ್ದು, ಪಕ್ಷದ ಯಾವ ಪದಾಧಿಕಾರಿ ಗಳಿಗೆ ಮಾಹಿತಿ ನೀಡುತ್ತಿಲ್ಲ. ಪಕ್ಷದ ಸಿದ್ಧಾಂತಗಳು ಗಾಳಿಗೆ ತೂರಲಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಮೋರ್ಚಾಗಳ 50ಕ್ಕೂ ಹೆಚ್ಚು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎಂದು ವಿವಿಧ ಮೋರ್ಚಾದ ಪದಾಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿಗೆ ಬಲ: ಡಾ| ಸಿದ್ದಲಿಂಗಪ್ಪಾ ಪಾಟೀಲ ಕಾಂಗ್ರೆಸ್ ಪಕ್ಷದಲ್ಲಿ ಇರುವಾಗ ಕೂಡ ಯುವ ಶಕ್ತಿ ಸಂಘಟಿಸುವ ಕಾರ್ಯ ನಡೆಸಿದ್ದರು. ಕ್ಷೇತ್ರದ
ಎಲ್ಲಾ ಕಡೆಗಳಲ್ಲಿ ಇಂದಿಗೂ ಜನರ ಸಂಪರ್ಕ ಉಳಿಸಿಕೊಂಡಿದ್ದಾರೆ. ರಾಜಕೀಯ ಗುದ್ದಾಟದಲ್ಲಿ ಬಿಜೆಪಿ ಸೇರ್ಪಡೆಗೊಂಡಿರುವ ಡಾ| ಸಿದ್ದಲಿಂಗಪ್ಪ
ಪಾಟೀಲ ಈ ಕ್ಷೇತ್ರದ ಬಿಜೆಪಿ ಮುಂದಿನ ಉಮೇದುವಾರರು ಎಂಬತೆ ಗುರುತಿಸಿಕೊಂಡರು. ಇವರ ಆಗಮನದಿಂದ ಅನೇಕರು ವಿರೋಧ
ವ್ಯಕ್ತಪಡಿಸಿದರು. ಇನ್ನೂ ಅನೇಕರು ಸ್ವಾಗತ ಮಾಡಿಕೊಂಡಿದರು. ಎಲ್ಲ ಬಲಗಳು ಹೊಂದಿರುವ ಪಾಟೀಲ ಪರಿವಾರ ಬಿಜೆಪಿಗೆ ಬಂದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಆನೆ ಬಲ ಬಂತು ಎಂದು ಅನೇಕ ಪದಾಧಿಕಾರಿಗಳೂ ಹರ್ಷ ವ್ಯಕ್ಯಪಡಿಸಿ ನಿರಂತರ ಅವರ ಸಂಪರ್ಕ ಸಾಧಿಸುವ ಕೆಲಸ ಮಾಡಿದರು. ಆದರೆ, ಇದೀಗ ಎಲ್ಲವೂ ಸರಿ ಇಲ್ಲ ಅಂತ ಪದಾಧಿಕಾರಿಗಳೇ ಗೋಳು ಹೇಳಿಕೊಳ್ಳಲು ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ:ಮತ ಏಣಿಕೆ ಕೇಂದ್ರದ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿ- ತಹಶೀಲ್ದಾರ್ ಶೈಲೇಶ ಪರಮಾನಂದ
ಅಧ್ಯಕ್ಷರ ಜೊತೆ ಮಾತುಕತೆ: ಶುಕ್ರವಾರ ಆರಂಭಗೊಂಡಿರುವ ರಾಜೀನಾಮೆ ನೀಡುವ ಕಾರ್ಯ ಶನಿವಾರ ಕೂಡ ಮುಂದುವರೆದಿದೆ. ಈ
ಕುರಿತು ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಪಕ್ಷಕ್ಕೆಹೊಸದಾಗಿಬಂದವರಿಗೆಪಕ್ಷದ ಸಿದ್ಧಾಂತಗಳು ತಿಳಿಸಿ ಎಂದು ಕೆಲವರು ಹೇಳಿದ್ದರೆ, ಪಕ್ಷದ ಹೆಸರಿಗೆಧಕ್ಕೆ ತರುವವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಈ ಮಧ್ಯೆ ಪದಾಧಿಕಾರಿಗಳ ಮನವೊಲಿಸುವ ಕಾರ್ಯ ಜಿಲ್ಲಾಧ್ಯಕ್ಷರು ನಡೆಸಿದ್ದು, ಮುಂದಿನಕೆಲ ದಿನಗಳಲ್ಲಿ ಎಲ್ಲವೂ ಸರಿ ಮಾಡುವ ಭರವಸೆ ನೀಡಿದ್ದಾರೆ. ಯಾರೂ ಪಕ್ಷದ ಹೆಸರಿಗೆ ಧಕ್ಕೆ ತರುವ ಕಾರ್ಯ ಮಾಡಬೇಡಿ ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಅದ್ಧೂರಿ ಕಾರ್ಯಕ್ರಮ ನೋಡಿ ಸಹಿಸದ ಮುಖಂಡರು ಇಂತಹ ಚಟುವಟಿಕೆಗಳಿಗೆ ಬುನಾದಿ ಹಾಕಿದ್ದಾರೆಂದು ಪಕ್ಷದವರೆ ಮಾತಾಡಿಕೊಳ್ಳುತ್ತಿದ್ದು, ಇದಕ್ಕೆ ಪಕ್ಷದ ವರಿಷ್ಠರೆ ಉತ್ತರ ನೀಡಬೇಕಿದೆ.
ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿರುವ ಸದಸ್ಯರ ಜೊತೆಗೆ ಮಾತುಕತೆ ನಡೆಸಿದ್ದು, ಎಲ್ಲವೂ ಬಗೆಹರಿಯುತ್ತದೆ.ಯಾವ ಪದಾಧಿಕಾರಿ ಗಳು ಪಕ್ಷ ತೊರೆಯುತ್ತಿಲ್ಲ. ಎಲ್ಲ ಗೊಂದಲಗಳಿಗೆ ಪರಿಹಾರ ಇದ್ದು, ಪಕ್ಷದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಚರ್ಚೆ ಮಾಡುವುದು ತಪ್ಪಾಗುತ್ತದೆ.
-ಶಿವಾನಂದ ಮಂಠಾಳಕರ್,
ಬಿಜೆಪಿ ಜಿಲ್ಲಾಧ್ಯಕ್ಷರು
-ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.