ಬಿಜೆಪಿಯ ಸಾಧನೆಯೇ ಗೆಲುವಿಗೆ ಶ್ರೀರಕ್ಷೆ: ಖೂಬಾ
Team Udayavani, Feb 6, 2021, 2:53 PM IST
ಬೀದರ: ರಾಜ್ಯ-ಕೇಂದ್ರ ಬಿಜೆಪಿ ಸರ್ಕಾರದ ಜನಪರ ಆಡಳಿತ ಮತ್ತು ಕಾಂಗ್ರೆಸ್ ಸರ್ಕಾರದ ದುರಾಡಳಿತದ ಜತೆಗೆ ಬಸವಕಲ್ಯಾಣ ಕ್ಷೇತ್ರಕ್ಕೆ ನಮ್ಮ ಸರ್ಕಾರ ನೀಡಿರುವ ಉತ್ತಮ ಕೊಡುಗೆ ಮುಂಬರುವ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆ ಆಗಲಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.
ಬಸವಕಲ್ಯಾಣ ಉಪ ಚುನಾವಣೆಗಾಗಿ ಉಸ್ತುವಾರಿಯಾಗಿ ನೇಮಿಸಿದ ಹಿನ್ನಲೆ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಅವರಿಗೆ ಸನ್ಮಾನಿಸಿ ಉಪಚುನಾವಣೆ ಕುರಿತು ಚರ್ಚಿಸಿದ್ದಾರೆ. ಕ್ಷೇತ್ರದಲ್ಲಿ ಹಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಪಕ್ಷದ ವರಿಷ್ಠರು ಅರ್ಹರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಿದ್ದಾರೆ. ಅಭ್ಯರ್ಥಿ ಆಯ್ಕೆ ಬಳಿಕ ಉಳಿದ ಆಕಾಂಕ್ಷಿಗಳು, ಮುಖಂಡರು ಪಕ್ಷದ ಅಭ್ಯರ್ಥಿ ಗೆಲುವಿಗೆ ಸಂಪೂರ್ಣಶ್ರಮ ಹಾಕಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕಸ ಹಾಕುವ ಸ್ಥಳದಲ್ಲಿ ರಂಗೋಲಿ: ಜಾಗೃತಿ
ಪಕ್ಷದ ಕ್ರಿಯಾಶೀಲ ಸಂಘಟನೆ ಎಲ್ಲಾ ಸ್ಥರದಲ್ಲಿಯೂ ಗಟ್ಟಿಯಾಗಿ ಸಕ್ರಿಯವಾಗಿದ್ದು, ಈಗಾಗಲೇ ಚುನಾವಣೆಗೆ ತಯಾರಿ ಸಭೆ ನಡೆಸಲಾಗಿದೆ. ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿ ಬಿಜೆಪಿ ಸಾಧನೆಗಳು ತಿಳಿಸಿ ಬಸವಕಲ್ಯಾಣ ಕ್ಷೇತ್ರದಲ್ಲಿ ಪಕ್ಷಕ್ಕೆಗೆಲುವನ್ನು ತಂದುಕೊಡಲಿದ್ದೇವೆ ಎನ್ನುವ ವಿಶ್ವಾಸವನ್ನು ರಾಜ್ಯಾಧ್ಯಕ್ಷರಿಗೆ ತಿಳಿಸಿದ್ದೇನೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಬಾಗಲಕೋಟೆ ಸಂಸದ ಪಿ.ಸಿ ಗದ್ದಿಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.