ಬೀದರ್ ಗೆ ಆಗಮಿಸಿದ ಬ್ರಿಟನ್ ಯಾತ್ರಾರ್ಥಿ ಮೇಲೆ ನಿಗಾ : ಜಿಲ್ಲಾಧಿಕಾರಿ ರಾಮಚಂದ್ರನ್ ಆರ್
Team Udayavani, Dec 23, 2020, 5:48 PM IST
ಬೀದರ್ : ಬ್ರಿಟನ್ ದಿಂದ ಬೀದರ್ ನಗರಕ್ಕೆ ಆಗಮಿಸಿರುವ ಯಾತ್ರಿಯ ಸಂಪರ್ಕಕ್ಕೆ ಬಂದ ಯಾತ್ರಾರ್ಥಿಯ ಒಂದು ವರ್ಷದ ಪುತ್ರಿ ಸೇರಿದಂತೆ ಎಲ್ಲ ವ್ಯಕ್ತಿಗಳ ಆರೋಗ್ಯ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ತಿಳಿಸಿದ್ದಾರೆ.
ಯಾತ್ರಾರ್ಥಿಯ ಪ್ರಥಮ 8 ಜನ ಸಂಪರ್ಕಿತರನ್ನು ಮತ್ತು ದ್ವಿತೀಯ 10 ಜನ ಸಂಪರ್ಕಿತರೆಲ್ಲರೂ ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇರುವುದರಿಂದ ಎಲ್ಲರಿಗೂ ಮನೆಯಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಯಾತ್ರಾರ್ಥಿಯ ಸಂಪರ್ಕಕ್ಕೆ ಬಂದ ಎಲ್ಲರೂ ಕಡ್ಡಾಯ ಕ್ವಾರಂಟೈನ್‌ನಲ್ಲಿ ಇದ್ದು ನಿಯಮಗಳ ಪಾಲನೆ ಮಾಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಈ ಎಲ್ಲ ಸಂಪರ್ಕಿತರನ್ನು ಪದೆಪದೇ ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮೇಲ್ವಿಚಾರಣೆ ಮಾಡಲು ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಿ ಡಿಎಚ್‌ಒ ಕ್ರಮ ವಹಿಸಿದ್ದಾರೆ.
ಬ್ರಿಟನ್‌ದಿಂದ ಭಾರತಕ್ಕೆ ಡಿ. 11 ರಂದು ಮರಳಿದ ಯಾತ್ರಾರ್ಥಿಯು ಕಲಬುರಗಿಯಲ್ಲಿ ಉಳಿದುಕೊಂಡಿದ್ದಾರೆ. ಬಳಿಕ ಕಲಬುರಗಿಯಿಂದ ಡಿ. 21 ರಂದು ಬೀದರ್ ನ ಶಿವನಗರಕ್ಕೆ ಬಂದಿರುತ್ತಾರೆ ಎಂದು ಕಲಬುರಗಿಯ ಡಿಎಚ್‌ಒ ಅವರು ಬೀದರ್ ಡಿಎಚ್‌ಒ ಅವರಿಗೆ ಕಲ್ಬುರ್ಗಿಯ ಡಿಎಚ್‌ಒಗೆ ಡಿ. 22ರ ರಾತ್ರಿ 8 ಗಂಟೆಗೆ ಮಾಹಿತಿ ನೀಡಿದ್ದಾರೆ.
ಈ ಮಾಹಿತಿ ತಿಳಿಯುತ್ತಿದ್ದಂತೆ ಯಾತ್ರಾರ್ಥಿಯ ಪ್ರಥಮ 8ಜನ ಸಂಪರ್ಕಿತರನ್ನು ಮತ್ತು ದ್ವಿತೀಯ 10 ಜನ ಸಂಪರ್ಕಿತರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಡಿ. 23ರಂದು ಬೆಳಗ್ಗೆ ಪತ್ತೆ ಹಚ್ಚಿದ್ದು, ಬೆಳಗ್ಗೆ 10 ಕ್ಕೆ ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಂಟೂ ಜನರ ವರದಿ ನೆಗಟಿವ್: ಯಾತ್ರಾರ್ಥಿಯ ಪ್ರಥಮ 8 ಜನ ಸಂಪರ್ಕಿತರ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ವರದಿಗಳು ನೆಗಟೀವ್ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿ.ಜಿ.ರೆಡ್ಡಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.