ಬಿಎಸ್ ವೈ ಬಂಜಾರಾ ಸಮುದಾಯಕ್ಕೆ 2ನೇ ಸೇವಾಲಾಲ್
Team Udayavani, Apr 12, 2021, 7:56 PM IST
ಬಸವಕಲ್ಯಾಣ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಂಜಾರ ಸಮುದಾಯದವರ ಪಾಲಿಗೆ ಎರಡನೇ ಸೇವಾಲಾಲ್ ತರಹ ಕೆಲಸ ಮಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರನ್ನು ಗೆಲ್ಲಿಸುವ ಮೂಲಕ ಬಿಎಸ್‌ವೈ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮನವಿ ಮಾಡಿದರು.
ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ರವಿವಾರ ತಾಲೂಕಿನ ಕಲಕೋರಾ ದೇವಿ ತಾಂಡಾ, ಗದಲೇಗಾಂವ್ ತಾಂಡಾ, ಶೇಕು ತಾಂಡಾ, ಗಂಗಾರಾಮ ತಾಂಡಾ, ಹಾಮುನಗರ ತಾಂಡಾ, ಕರಿಗುಂಡಾ ತಾಂಡಾ ಸೇರಿದಂತೆ ಸುಮಾರು 17 ತಾಂಡಾಗಳಿಗೆ ಭೇಟಿ ನೀಡಿ ಮತಯಾಚಿಸಿ ಅವರು ಮಾತನಾಡಿದರು.
ಸಮುದಾಯದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಬಹಳಷ್ಟು ಸಹಾಯ ಮಾಡಿದ್ದಾರೆ. ಈ ಸಮುದಾಯದವರು ಶಾಸಕ, ಸಚಿವ, ಕುಲಪತಿಗಳಾಗಿ ಅನೇಕ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಸಿಎಂ ಪಾತ್ರ ಮಹತ್ವದ್ದಾಗಿದೆ. ಬಂಜಾರ ಸಮುದಾಯದ ಪ್ರತಿಯೊಬ್ಬರನ್ನೂ ಸುಶಿಕ್ಷಿತರನ್ನಾಗಿ ಮಾಡಬೇಕು. ಎಲ್ಲ ತಾಂಡಾ ಗುಡಿಸಲು ಮುಕ್ತ ಮಾಡಬೇಕು ಎನ್ನುವ ಸಂಕಲ್ಪ ಹೊಂದಲಾಗಿದೆ.
ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದರು. ಶರಣು ಸಲಗರ ಕೋವಿಡ್ ಸಂಕಷ್ಟದಲ್ಲಿ ಬಸವಕಲ್ಯಾಣ ತಾಲೂಕಿನಾದ್ಯಂತ ಓಡಾಡಿ ಜನರ ಸಂಕಷ್ಟಗಳಿಗೆ ಮಿಡಿದಿದ್ದಾರೆ. ಶಕ್ತಿ ಮೀರಿ ಜನತೆಗೆ ಸಹಾಯ ಮಾಡಿದ್ದಾರೆ. ಇಂತಹ ಪರೋಪಕಾರಿ ಮನೋಭಾವದ ವ್ಯಕ್ತಿ ಗೆಲ್ಲಿಸಿ ತನ್ನಿ ಎಂದು ಕೋರಿದರು. ಈ ವೇಳೆ ಸೋಮನಾಥ ಪಾಟೀಲ, ಅಣ್ಣಾರಾವ್ ರಾಠೊಡ, ಸುನಿಲ ರಾಠೊಡ, ರಾಮಶೆಟ್ಟಿ ಪನ್ನಾಳೆ, ರಮೇಶ ದೇವಕತೆ, ವೀರೇಶ ಸಜ್ಜನ್, ಅಮರ ಬಡದಾಳೆ, ಜಗನ್ನಾಥ ಆಡೆ, ಕೇರಬಾ ಪವಾರ್, ಶರಣಪ್ಪ ಪಂಚಾಕ್ಷರಿ ಇತರರಿದ್ದರು. ಆತ್ಮೀಯ ಸ್ವಾಗತ: ತಾಂಡಾಗಳಿಗೆ ಭೇಟಿ ನೀಡಿದ ಸಚಿವರನ್ನು ಗ್ರಾಮಸ್ಥರು ಸಾಂಪ್ರದಾಯಿಕ ವೇಷಭೂಷಣ ಧರಿಸಿ ಆತ್ಮೀಯವಾಗಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.