ಓದಿನೊಂದಿಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ಶೇರಿಕಾರ
Team Udayavani, Oct 23, 2018, 3:04 PM IST
ಬೀದರ: ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧಿಸಲು ಓದಿನೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು.
ನಗರದ ಶಾಹೀನ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಹೀನ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ದೇಶದ ಆಸ್ತಿಯಾಗಿದ್ದಾರೆ. ಪೋಷಕರು ತಮ್ಮ ಮಕ್ಕಳಲ್ಲಿನ ಪ್ರತಿಭೆಯನ್ನು ಸಣ್ಣ ವಯಸ್ಸಿನಲ್ಲಿಯೇ ಗುರುತಿಸಿ ಬೆಳೆಸಬೇಕು. ಅವರು ಕ್ರೀಡೆಗಳತ್ತ ಹೆಚ್ಚು ಒಲವು ತೋರಿಸುವಂತೆ ಪ್ರೇರಣೆ ನೀಡಬೇಕು ಎಂದ ಅವರು, ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟಗಳು ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಂತೋಷ ತಂದಿದೆ. ಅದರಂತೆ ಇಲ್ಲಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಶಾಲಿನಿರಾಜು ಚಿಂತಾಮಣಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆ ಮಾತ್ರ ಸೀಮಿತವಾಗದೇ ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕಿದೆ ಎಂದರು. ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಮಾತನಾಡಿ, ಮಕ್ಕಳು ದೈಹಿಕವಾಗಿ ಸದೃಢರಾಗಲು ತಪ್ಪದೇ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳಲ್ಲಿ ತೊಡಗಿಸಿಕೊಂಡವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ಹೇಳಿದರು.
ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಅಬ್ದುಲ್ ಖದೀರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಎಸ್. ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ಅಬ್ದುಲ್ ಹಮೀದ್, ಅಬ್ದುಲ್ ಹಸ್ಸಿಮ್, ಹಣಮಂತರಾವ್ ಮೈಲಾರಿ, ವಿಠಲದಾಸ್ ಪ್ಯಾಗೆ, ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ದೈಹಿಕ ಶಿಕ್ಷಣ ಉಪನ್ಯಾಸಕರು, ಶಾಹೀನ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.