“ಸಹಕಾರದಿಂದ ಸಮೃದ್ದ ಸಮಾಜ ನಿರ್ಮಾಣ”
Team Udayavani, Sep 3, 2022, 4:11 PM IST
ಬೀದರ: ಸಹಕಾರ ಸಂಘಗಳ ಮೂಲಕ ಸದಸ್ಯರ ಸಮೃದ್ಧಿಯ ಜೊತೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ರಾಜ್ಯಾಧ್ಯಕ್ಷ ಜಿ. ನಂಜನಗೌಡ ಹೇಳಿದರು.
ನಗರದ ಶಾರದಾ ರೂಡಸೆಟ್‌ನಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಪ್ರಾಂತೀಯ ಕಚೇರಿಯಿಂದ ಆಯೋಜಿಸಿದ್ದ ಬೀದರ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷ, ಉಪಾಧ್ಯಕ್ಷ, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರದಿಂದಲೇ ಮಾತ್ರ ಸಮೃದ್ಧ ಸಮಾಜ ಕಟ್ಟಬಹುದು ಎಂಬುದನ್ನು ಅರಿತ ಕೇಂದ್ರ ಸರ್ಕಾರವು ಸಹಕಾರ ಸಚಿವಾಲಯ ಸ್ಥಾಪನೆ ಮಾಡಿದೆ. ಈ ಮೂಲಕ ಸೌಹಾರ್ದ ಚಳವಳಿಗೆ ಬಲಬಂದಿದೆ ಎಂದರು.
ಸಂಯುಕ್ತ ಸಹಕಾರಿಯ ಉಪಾಧ್ಯಕ್ಷ ಪ್ರಸನ್ನಕುಮಾರ ಮಾತನಾಡಿ, ಕಲ್ಯಾಣ ನಾಡು ಸಹಕಾರ ಕ್ಷೇತ್ರಕ್ಕೆ ತನ್ನದೆಯಾದ ಕೊಡುಗೆ ನೀಡಿದೆ. ಗುಣಾತ್ಮಕ ಬೆಳವಣಿಗೆ ಮುನ್ನಡೆಯುವುದು ಅಗತ್ಯವಿದೆ ಎಂದರು.
ನಿರ್ದೇಶಕ ಗುರುನಾಥ ಜ್ಯಾಂತಿಕರ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕಿ ಶೈಲಜಾ ತಪಲಿ, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಪಾಟೀಲ, ಪ್ರಾಂತೀಯ ವ್ಯವಸ್ಥಾಪಕ ರಾಜಶೇಖರ ಎಚ್., ಒಕ್ಕೂಟ ಉಪಾಧ್ಯಕ್ಷ ಸಂಜೀವಕುಮಾರ ಪಾಟೀಲ, ಹಿರಿಯ ಸಹಕಾರಿಗಳಾದ ಶಿವಾನಂದ ಮಂಠಾಳಕರ್, ಶಿವಬಸಪ್ಪ ಚನ್ನಮಲೆ, ಜಗನಾಥ ಕರಂಜೆ, ಸಂಜಯ ಕ್ಯಾಸಾ, ರಾಜಶೇಖರ ನಾಗಮೂರ್ತಿ, ಕ್ರಾಂತಿಕುಮಾರ ಕುಲಾಲ್, ಶ್ರೀಕಾಂತ ಸ್ವಾಮಿ ಸೋಲಪುರ, ಬಾಬುರಾವ ಕಾರಬಾರಿ, ನಾಗಶೆಟ್ಟಿ ಪಾಟೀಲ, ಅಣ್ಣಾರಾವ ನಾವದಗೆರಿ, ಬಸವರಾಜ ಹುಡೆY ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.