ವ್ಯಾಪಾರ ಸಾಮರ್ಥ್ಯ ಹೆಚ್ಚಳ ತರಬೇತಿ
Team Udayavani, Jan 9, 2022, 6:14 PM IST
ಮಾನ್ವಿ: ಪುರಸಭೆ ವತಿಯಿಂದ ದೀನ್ ದಯಾಳ್ ಅಂತ್ಯೋದಯ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಸಾಮರ್ಥ್ಯ ಹೆಚ್ಚಳ ಬಗ್ಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆಯ ಕಾನೂನು ಸಲಹೆಗಾರ ಎ.ಬಿ. ಉಪ್ಪಳಮಠ ತಿಳಿಸಿದರು.
ಪುರಸಭೆ ಸಭಾಂಗಣದಲ್ಲಿ ಪಟ್ಟಣ ಮಾರಾಟ ಸಮಿತಿ ಸದಸ್ಯರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಅನಿಯಮ, ನಿಯಮ ಮತ್ತು ವಿವಿಧ ಯೋಜನೆಗಳ ಕುರಿತು ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಶುಕ್ರವಾರ ಹಮ್ಮಿಕೊಂಡ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಿಗಳ ಜೀವನಮಟ್ಟ ಸುಧಾರಣೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಮುಖ್ಯಾಧಿಕಾರಿ ಜಗದೀಶ ಭಂಡಾರಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ರಶೀದಾ ಬೇಗಂ, ಉಪಾಧ್ಯಕ್ಷ ಕೆ.ಸುಖಮುನಿ, ಶೇಕ್ ಉಮರಿ, ವಿಪಕ್ಷ ನಾಯಕ ರಾಜಾಮಹೇಂದ್ರ ನಾಯಕ, ಸಿಇಒ ಈರಣ್ಣ, ಪ್ರಭಾರಿ ನೈರ್ಮಲ್ಯಾಧಿಕಾರಿ ಈರಣ್ಣ, ಬೀದಿ ಬದಿ ವ್ಯಾಪಾರಿಗಳಾದ ಬಸವರಾಜ, ಆಂಜನೇಯ, ಶ್ರೀನಿವಾಸ, ನಾಗರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.