ಗೃಹ ಬಂಧನದಲ್ಲಿರದ ಕೋವಿಡ್-19 ಶಂಕಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
Team Udayavani, Mar 23, 2020, 9:25 PM IST
ಸಾಂದರ್ಭಿಕ ಚಿತ್ರ
ಬೀದರ: ದುಬೈನಿಂದ ಆಗಮಿಸಿದ್ದ ಕೋವಿಡ್-19 ಶಂಕಿತ ವ್ಯಕ್ತಿಗೆ ಗೃಹ ಬಂಧನದಲ್ಲಿರುವಂತೆ ವೈದ್ಯಾಧಿಕಾರಿಗಳು ಸೂಚಿಸಿದ್ದರೂ ಗ್ರಾಮದಲ್ಲಿ ಬೇಕಾಬಿಟ್ಟಿ ಓಡಾಡುತ್ತಿದ್ದ ಜಿಲ್ಲೆಯ ನಿರ್ಣಾ ಗ್ರಾಮದ ವ್ಯಕ್ತಿ ವಿರುದ್ಧ ಮನ್ನಾಎಖೇಳ್ಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವ್ಯಕ್ತಿ ಮಾ. 12ರಂದು ದುಬೈನಿಂದ ಸ್ವಗ್ರಾಮ ನೀರ್ಣಾಕ್ಕೆ ಆಗಮಿಸಿದ್ದ. ನೀರ್ಣಾ ವೈದ್ಯಾಧಿಕಾರಿ ಮನ್ನಾಎಖೇಳ್ಳಿ ಠಾಣೆಯ ಪಿಎಸ್ಐ ಗ್ರಾಮಕ್ಕೆ ಭೇಟಿ ನೀಡಿ ವ್ಯಕ್ತಿಯನ್ನು ಹೊರಗಡೆ ಓಡಾಡದೆ ಗೃಹ ಬಂಧನದಲ್ಲಿ ಇರುವಂತೆ ಮತ್ತು ಕೋವಿಡ್-19 ಸೋಂಕು ಮುಂಜಾಗೃತೆ ವಹಿಸುವಂತೆ ಸೂಚಿಸಿದ್ದರು. ಆದರೆ, ವ್ಯಕ್ತಿ ಮಾ. 22ರಂದು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಸುತ್ತಾಡಿದ್ದು, ಇದರಿಂದ ಗ್ರಾಮಸ್ಥರು ಭಯ ಭೀತರಾಗಿದ್ದರು. ಮಾಹಿತಿ ತಿಳಿದ ವೈದ್ಯಾಧಿಕಾರಿ ಗ್ರಾಮಕ್ಕೆ ಆಗಮಿಸಿ ಬ್ರಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಗೃಹ ಬಂಧನದಲ್ಲಿರದೆ ಬೇಕಾಬಿಟ್ಟಿಯಾಗಿ ಓಡಾಡಿದ ವ್ಯಕ್ತಿ ವಿರುದ್ಧ ಕಲಂ 269, 270 ಐಪಿಸಿ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…
T20; ವೆಸ್ಟ್ ಇಂಡೀಸ್ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ
T20I;ಡಬಲ್ ಹ್ಯಾಟ್ರಿಕ್ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
Gukesh Dommaraju; ಚದುರಂಗ ಚಾಂಪಿಯನ್ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.